ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್ ನೀಡುವ ಕಾರುಗಳಿವು

ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆಯಿಂದ ವಾಹನ ಸವಾರರು ಆತಂಕಕ್ಕೊಳಗಾಗಿದ್ದಾರೆ. ಈ ಸನ್ನಿವೇಶದಲ್ಲಿ ಹೊಸ ಕಾರು ಖರೀದಿಸಲು ಬಯಸುವವರು ಪೆಟ್ರೋಲ್, ಡೀಸೆಲ್ ಗಾಗಿಯೇ ಹೆಚ್ಚು ಖರ್ಚು ಮಾಡಬೇಕಾಗುತ್ತದೆ. ಆದರೆ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಕೆಲವು ಪ್ರಮುಖ ಕಂಪನಿಗಳ ಕಾರುಗಳು ಹೆಚ್ಚು ಮೈಲೇಜ್ ನೀಡುತ್ತವೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್ ನೀಡುವ ಕಾರುಗಳಿವು

ಭಾರತದಲ್ಲಿ ಮಾರಾಟವಾಗುವ ಕೆಲವು ಕಾರುಗಳು ಪ್ರತಿ ಲೀಟರ್ ಪೆಟ್ರೋಲ್ / ಡೀಸೆಲ್'ಗೆ ಸುಮಾರು 3 - 4 ಕಿ.ಮೀ ಮೈಲೇಜ್ ನೀಡಿದರೆ, ಇನ್ನೂ ಕೆಲವು ಕಾರುಗಳು ಪ್ರತಿ ಲೀಟರ್ ಪೆಟ್ರೋಲ್ / ಡೀಸೆಲ್'ಗೆ 10 - 12 ಕಿ.ಮೀ ಮೈಲೇಜ್ ನೀಡುತ್ತವೆ. ಆದರೆ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಕೆಲವು ಕಾರುಗಳು ಪ್ರತಿ ಲೀಟರ್ ಪೆಟ್ರೋಲ್ / ಡೀಸೆಲ್'ಗೆ ಹೆಚ್ಚು ಮೈಲೇಜ್ ನೀಡುತ್ತವೆ. ಅತ್ಯಧಿಕ ಮೈಲೇಜ್ ನೀಡುವ ಟಾಪ್ 5 ಕಾರುಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್ ನೀಡುವ ಕಾರುಗಳಿವು

1. Hyundai Grand i 10 Nios - ಪ್ರತಿ ಲೀಟರಿಗೆ 26.2 ಕಿ.ಮೀ

Hyundai Grand i 10 Nios ಕಾರ್ ಅನ್ನು 1.2 ಲೀಟರ್ ಟರ್ಬೊಚಾರ್ಜ್ಡ್ ಡೀಸೆಲ್, 1.0 ಲೀಟರ್ ಟರ್ಬೊ ಪೆಟ್ರೋಲ್, 1.2 ಲೀಟರ್ ಪೆಟ್ರೋಲ್ ಹಾಗೂ 1.2 ಲೀಟರ್ ಪೆಟ್ರೋಲ್ / ಸಿ‌ಎನ್‌ಜಿ ಎಂಜಿನ್‌ಗಳೊಂದಿಗೆ ಮಾರಾಟ ಮಾಡಲಾಗುತ್ತದೆ. Hyundai Grand ಐ 10 Nios ಕಾರಿನ 1.2 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಪ್ರತಿ ಲೀಟರ್ ಡೀಸೆಲ್ ಗೆ 26.2 ಕಿ.ಮೀ ಮೈಲೇಜ್ ನೀಡುತ್ತದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್ ನೀಡುವ ಕಾರುಗಳಿವು

2. Hyundai Aura - ಪ್ರತಿ ಲೀಟರಿಗೆ 25.23 ಕಿ.ಮೀ

Hyundai Aura Grand ಐ 10 Nios‌ ಕಾರಿನಂತೆಯೇ 1.2 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್, 1.0 ಲೀಟರ್ ಟರ್ಬೊ ಪೆಟ್ರೋಲ್, 1.2 ಲೀಟರ್ ಪೆಟ್ರೋಲ್ ಹಾಗೂ 1.2 ಲೀಟರ್ ಪೆಟ್ರೋಲ್ / ಸಿಎನ್‌ಜಿ ಎಂಜಿನ್‌ಗಳೊಂದಿಗೆ ಮಾರಾಟವಾಗುತ್ತದೆ. Hyundai Aura ಕಾರಿನಲ್ಲಿರುವ ಡೀಸೆಲ್ ಎಂಜಿನ್ ಪ್ರತಿ ಲೀಟರ್ ಡೀಸೆಲ್ ಗೆ 25.23 ಕಿ.ಮೀ ಮೈಲೆಜ್ ಹೆಚ್ಚಿನ ಮೈಲೇಜ್‌ಗಾಗಿ ಈ ಮಾದರಿಯ ಸಿ‌ಎನ್‌ಜಿ ಆಯ್ಕೆಯನ್ನು ಸಹ ಆಯ್ಕೆ ಮಾಡಿ ಕೊಳ್ಳಬಹುದು.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್ ನೀಡುವ ಕಾರುಗಳಿವು

3. Tata Altroz - ಪ್ರತಿ ಲೀಟರಿಗೆ 25 ಕಿ.ಮೀ

Tata Altroz, Tata Motors ಕಂಪನಿಯ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. Tata Altroz ಕಾರ್ ಅನ್ನು 1.2 ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 1.2 ಲೀ ಟರ್ಬೊ ಪೆಟ್ರೋಲ್ ಎಂಜಿನ್ ಹಾಗೂ 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಮಾರಾಟ ಮಾಡಲಾಗುತ್ತದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್ ನೀಡುವ ಕಾರುಗಳಿವು

ಈ ಕಾರಿನಲ್ಲಿರುವ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 86 ಬಿಹೆಚ್‌ಪಿ ಪವರ್ ಹಾಗೂ 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. Tata Altroz ಕಾರಿನಲ್ಲಿ 5 ಸ್ಪೀಡ್ ಮ್ಯಾನುಯಲ್ ಹಾಗೂ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಲಭ್ಯವಿದೆ. Altroz ಕಾರು ಪ್ರತಿ ಲೀಟರ್ ಪೆಟ್ರೋಲಿಗೆ ಗರಿಷ್ಠ 25 ಕಿ.ಮೀ ಮೈಲೇಜ್ ನೀಡುವ ಸಾಮರ್ಥ್ಯವನ್ನು ಹೊಂದಿದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್ ನೀಡುವ ಕಾರುಗಳಿವು

4. Kia Sonet - ಪ್ರತಿ ಲೀಟರಿಗೆ 24 ಕಿ.ಮೀ

Kia Sonet ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ತನ್ನ ನೋಟ ಹಾಗೂ ವೈಶಿಷ್ಟ್ಯಗಳಿಂದ ಜನಪ್ರಿಯವಾಗಿದೆ. Kia Sonet ಎಸ್‌ಯುವಿಯನ್ನು 1.0 ಲೀಟರ್ ಟರ್ಬೊ ಪೆಟ್ರೋಲ್, 1.2 ಲೀಟರ್ ಪೆಟ್ರೋಲ್ ಹಾಗೂ 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್ ನೀಡುವ ಕಾರುಗಳಿವು

ಗ್ರಾಹಕರು ಈ ಕಾರಿನೊಂದಿಗೆ 6 ಸ್ಪೀಡ್ ಐಎಂಟಿ, 7 ಸ್ಪೀಡ್ ಡಿಸಿಟಿ ಹಾಗೂ 5 ಸ್ಪೀಡ್ ಮ್ಯಾನುಯಲ್ ಗೇರ್ ಬಾಕ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಇನ್ನು ಈ ಕಾರಿನ ಮೈಲೇಜ್ ಬಗ್ಗೆ ಹೇಳುವುದಾದರೆ Kia Sonet ಪ್ರತಿ ಲೀಟರ್ ಪೆಟ್ರೋಲ್‌ಗೆ 24 ಕಿ.ಮೀ ಮೈಲೇಜ್ ನೀಡುವ ಸಾಮರ್ಥ್ಯವನ್ನು ಹೊಂದಿದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್ ನೀಡುವ ಕಾರುಗಳಿವು

5. Hyundai Venue - ಪ್ರತಿ ಲೀಟರಿಗೆ 23.70 ಕಿ.ಮೀ

Hyundai Venue, Hyundai ಕಂಪನಿಯ ಆಕರ್ಷಕವಾದ ಹಾಗೂ ಹೆಚ್ಚು ಫೀಚರ್ ಗಳನ್ನು ಹೊಂದಿರುವ ಸಬ್‌ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. Hyundai Venue ಎಸ್‌ಯುವಿಯನ್ನು 1.2 ಲೀಟರ್ ಪೆಟ್ರೋಲ್, 1.0 ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.4 ಲೀಟರ್ ಡೀಸೆಲ್ ಎಂಜಿನ್ ಎಂಬ ಮೂರು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್ ನೀಡುವ ಕಾರುಗಳಿವು

ಈ ಎಸ್‌ಯುವಿಯನ್ನು 7 ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ ಹಾಗೂ 5 ಮತ್ತು 6 ಸ್ಪೀಡ್ ಮ್ಯಾನುಯಲ್ ಗೇರ್‌ಬಾಕ್ಸ್‌ಗಳಲ್ಲಿ ಸಹ ಮಾರಾಟ ಮಾಡಲಾಗುತ್ತದೆ. ಈ ಕಾರಿನ 1.4 ಲೀಟರ್ ಡೀಸೆಲ್ ಎಂಜಿನ್ ಹೊಂದಿರುವ ಮಾದರಿಯೂ ಪ್ರತಿ ಲೀಟರ್ ಡೀಸೆಲ್'ಗೆ 23.70 ಕಿ.ಮೀ ಮೈಲೇಜ್ ನೀಡುವ ಸಾಮರ್ಥ್ಯವನ್ನು ಹೊಂದಿದೆ. Hyundai ಇಂಡಿಯಾ ಕಂಪನಿಯು ತನ್ನ ಜನಪ್ರಿಯ Venue ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಬದಲಾವಣೆಗಳನ್ನು ತರುತ್ತಿದೆ. Hyundai ಕಂಪನಿಯು ಇತ್ತೀಚೆಗೆ ಎಸ್(ಒ) ಹಾಗೂ ಎಸ್ಎಕ್ಸ್ (ಒ) ಎಂಬ ಎರಡು ಹೊಸ ಮಾದರಿಗಳನ್ನು ಬಿಡುಗಡೆಗೊಳಿಸಿತ್ತು.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್ ನೀಡುವ ಕಾರುಗಳಿವು

ಈ ಮಾದರಿಗಳ ಬಿಡುಗಡೆಯ ನಂತರ ಪ್ರಮುಖ ತಾಂತ್ರಿಕ ಅಂಶಗಳನ್ನು ಜೋಡಣೆ ಮಾಡುತ್ತಿರುವ ಬಗೆಗೆ ಮಾಹಿತಿ ಲಭ್ಯವಾಗಿದೆ. ಜೂನ್ ನಂತರ ಉತ್ಪಾದನೆ ಮಾಡಲಾದ Venue ಕಾರುಗಳಲ್ಲಿ Hyundai ಕಂಪನಿಯು ಸ್ಟ್ಯಾಂಡರ್ಡ್ ಆಗಿ ವೈರ್‌ಲೆಸ್ ಅಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ನೀಡುತ್ತಿದೆ. ಇದರ ಜೊತೆಗೆ ಟಯರ್ ಪ್ರೆಶರ್ ಮ್ಯಾನೇಜ್ಮೆಂಟ್ ಸಿಸ್ಟಂ (ಟಿಪಿಎಂಎಸ್) ಹಾಗೂ ಬ್ಲೂ ಲಿಂಕ್ ಸಂಪರ್ಕಿತ ಕಾರ್ ಟೆಕ್ನಾಲಜಿಯನ್ನು ಅಪ್ ಡೇಟ್ ಮಾಡಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿವೆ. ಶೀಘ್ರದಲ್ಲೇ ಈ ಹೊಸ ಅಪ್ ಡೇಟ್ ಗಳ ಬಗ್ಗೆ Hyundai ಕಂಪನಿಯು ಮಾಹಿತಿ ನೀಡಲಿದೆ.

Most Read Articles

Kannada
English summary
Cars in domestic market with more mileage details
Story first published: Friday, October 22, 2021, 11:13 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X