Just In
- 1 hr ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರೆನಾಲ್ಟ್ ಕಿಗರ್ ಕಾರು ಮಾದರಿಗಾಗಿ ವಿಶೇಷ ಟೈರ್ ಒದಗಿಸಲಿದೆ ಸಿಯೆಟ್
ರೆನಾಲ್ಟ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಕಿಗರ್ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರು ಮಾದರಿಗಾಗಿ ಜನಪ್ರಿಯ ಟೈರ್ ಉತ್ಪಾದನಾ ಕಂಪನಿಯಾದ ಸಿಯೆಟ್ ವಿಶೇಷ ಟೈರ್ ಉತ್ಪನ್ನಗಳನ್ನು ಒದಗಿಸಲು ಕಂಪನಿಯ ಜೊತೆಗ ಒಪ್ಪಂದ ಮಾಡಿಕೊಂಡಿದೆ.

ಕಿಗರ್ ಕಾರು ಮಾದರಿಗಾಗಿ ಟೈರ್ ಉತ್ಪನ್ನವನ್ನು ಒದಗಿಸುವ ಕುರಿತು ರೆನಾಲ್ಟ್ ಜೊತೆಗಿನ ಪಾಲುದಾರಿಕೆಯನ್ನು ಪ್ರಕಟಿಸಿರುವ ಸಿಯೆಟ್ ಕಂಪನಿಯು ಹೊಸ ಕಾರು ಮಾದರಿಗಾಗಿ 16 ಇಂಚಿನ ವಿಶೇಷ ಟೈರ್ ಒದಗಿಸಲಿದ್ದು, ಹೊಸ ಕಾರು ಮಾದರಿಯು ನಿಸ್ಸಾನ್ ಮಾಗ್ನೈಟ್ ಮಾದರಿಯೆಂತೆ ಬಜೆಟ್ ಬೆಲೆಯೊಂದಿಗೆ ಬಿಡುಗಡೆಯಾಗುತ್ತಿರುವ ಕಾರು ಮಾರಾಟದಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ರೆನಾಲ್ಟ್ ಕಂಪನಿಯ ಸದ್ಯ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ಮುಂದಿನ ತಿಂಗಳು ಫೆಬ್ರುವರಿ ಮಧ್ಯಂತರದಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕ ಬೆಲೆಯೊಂದಿಗೆ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದೆ.

ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಾಗಿರು ಕಿಗರ್ ಆವೃತ್ತಿಯುಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತದೆ.

ಹೊಸ ಕಿಗರ್ ಕಾರಿನಲ್ಲಿ ಬ್ಲ್ಯಾಕ್ ಔಟ್ ಹೊಂದಿರುವ ಸಿ ಪಿಲ್ಲರ್, ಸ್ಪೋಟಿಯಾಗಿರುವ ಸ್ಪಾಯ್ಲರ್, ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದೆ.

ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್‌ಬೋರ್ಡ್ ಜೋಡಣೆ ಮಾಡಲಾಗಿದ್ದು, ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಜೊತೆಗೆ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5 -ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌ರೂಫ್ ಸೌಲಭ್ಯಗಳಿವೆ.

ರೆನಾಲ್ಟ್ ಕಿಗರ್ ಕಾರಿನಲ್ಲಿ ನಿಸ್ಸಾನ್ ಮಾಗ್ನೈಟ್‌ನಲ್ಲಿ ಜೋಡಣೆ ಮಾಡಲಾಗಿರುವ 1.0-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಮಾದರಿಯ ಜೋಡಣೆ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಕಾರಿನಲ್ಲಿರುವ ನಾರ್ಮಲ್, ಇಕೋ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳು ಕಾರು ಚಾಲನೆಯನ್ನು ಮತ್ತಷ್ಟು ಸರಳಗೊಳಿಸಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.50 ಲಕ್ಷದಿಂದ ರೂ. 9.50 ಲಕ್ಷ ಬೆಲೆ ಅಂತರದಲ್ಲಿ ಖರೀದಿಗೆ ಲಭ್ಯವಾಗುವ ಸುಳಿವು ನೀಡಿರುವ ಹೊಸ ಕಾರು ಹ್ಯುಂಡೈ ವೆನ್ಯೂ, ಮಾರುತಿ ಬ್ರೆಝಾ, ಕಿಯಾ ಸೊನೆಟ್, ಟಾಟಾ ನೆಕ್ಸಾನ್ ಸೇರಿದಂತೆ ಪ್ರಮುಖ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದೆ.