Just In
Don't Miss!
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಹಲವು ಮಹತ್ವದ ಕ್ರಮಗಳನ್ನು ಪ್ರಕಟಿಸಿದ ಕೇಂದ್ರ ಸರ್ಕಾರ
ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಈಗಾಗಲೇ ಫೇಮ್ 2 ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ. ಹಾಗೆಯೇ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸರ್ಕಾರಿ ಹಾಗೂ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಖಾಸಗಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೂ ಫೇಮ್ 2 ಯೋಜನೆ ಅಡಿ ಸಬ್ಸಡಿ ಪ್ರಕಟಿಸಿದ್ದು, ಹೊಸ ಯೋಜನೆಗಾಗಿ ಕೇಂದ್ರ ಸರ್ಕಾರವು ಒಟ್ಟು ರೂ.10 ಸಾವಿರ ಕೋಟಿ ಮೀಸಲಿಟ್ಟಿದೆ.

ಫೇಮ್ ಯೋಜನೆಯ ಮೊದಲ ಹಂತದಲ್ಲಿ ಸುಮಾರು ರೂ. 3 ಸಾವಿರ ಕೋಟಿ ನೀಡಿದ್ದ ಕೇಂದ್ರ ಸರ್ಕಾರವು ಎರಡನೇ ಹಂತದ ಯೋಜನೆಗಾಗಿ ರೂ. 10 ಸಾವಿರ ಕೋಟಿ ಮೀಸಲಿಟ್ಟಿದ್ದು, ಎರಡನೇ ಹಂತದಲ್ಲಿ 62 ಸಾವಿರ ಪ್ಯಾಸೆಂಜರ್ ಕಾರುಗಳು ಮತ್ತು ಬಸ್‌ಗಳಿಗೆ, 15 ಲಕ್ಷ ದ್ವಿಚಕ್ರ ವಾಹನಗಳ ಮತ್ತು ತ್ರಿ ಚಕ್ರ ವಾಹನಗಳು ಸಬ್ಸಡಿ ಪಡೆದುಕೊಳ್ಳಲಿವೆ. ವ್ಯಯಕ್ತಿಕ ಬಳಕೆಯ ವಾಹನಗಳ ಜೊತೆಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲೂ ಎಲೆಕ್ಟ್ರಿಕ್ ವಾಹನಗಳ ಅಳವಡಿಸಿಕೊಳ್ಳಲು ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ಮಾಲಿನ್ಯ ತಡೆ ಜೊತೆಗೆ ಹೆಚ್ಚುತ್ತಿರುವ ಇಂಧನ ಬಳಕೆ ಪ್ರಮಾಣವನ್ನು ತಗ್ಗಿಸಲು ಇದರ ಪ್ರಮುಖ ಉದ್ದೇಶವಾಗಿದೆ.

ಫೇಮ್ 2 ಯೋಜನೆ ಅಡಿ ಒಟ್ಟು 7 ಸಾವಿರ ಇ-ಬಸ್‌ಗಳು, 5 ಲಕ್ಷ ತ್ರಿಚಕ್ರ ಇವಿ ವಾಹನಗಳು, 55 ಸಾವಿರ ಎಲೆಕ್ಟ್ರಿಕ್ ಕಾರುಗಳು ಮತ್ತು 10 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಸಬ್ಸಿಡಿ ಸಿಗಲಿದ್ದು, ಸಬ್ಸಡಿ ಯೋಜನೆಯು ವಾಹನ ಮಾಲೀಕತ್ವ ಹೊರೆಯನ್ನು ತಗ್ಗಿಸಲು ಸಾಕಷ್ಟು ಸಹಕಾರಿಯಾಗಿದೆ.

ಹೊಸ ಸಬ್ಸಡಿ ಯೋಜನೆ ಕುರಿತಂತೆ ನಿನ್ನೆಯಷ್ಟೇ ಸಂಸತ್‌ನಲ್ಲಿ ಮಾತನಾಡಿದ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಹೆಚ್ಚುತ್ತಿರುವ ಇಂಧನಗಳ ಬೆಲೆ ತಗ್ಗಿಸಲು ಸರ್ಕಾರದ ಕ್ರಮಗಳ ಕುರಿತಾದ ಚರ್ಚೆ ವೇಳೆ ಸಬ್ಸಡಿ ಯೋಜನೆಯ ಮಾಹಿತಿ ಹಂಚಿಕೊಂಡಿದ್ದಾರೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಸರ್ಕಾರವು ಇಂಧನಗಳ ಬೆಲೆ ಇಳಿಕೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಫೇಮ್ 2 ಯೋಜನೆಯು ನಮಗೆ ಭವಿಷ್ಯದಲ್ಲಿ ಉತ್ತಮ ಫಲಿತಾಂಶ ನೀಡಲಿದೆ ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಎಲೆಕ್ಟ್ರಿಕ್ ವಾಹನಗಳ ಬಳಕೆಯೊಂದಿಗೆ ನಗರ ಪ್ರದೇಶಗಳಲ್ಲಿ ಹೆಚ್ಚಿರುವ ಮಾಲಿನ್ಯ ತಡೆಯುವುದರ ಜೊತೆಗೆ ಇಂಧನ ವೆಚ್ಚಗಳನ್ನು ಗಣನೀಯವಾಗಿ ಇಳಿಕೆ ಮಾಡಬಹುದಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೊಸ ಯೋಜನೆಗಾಗಿ ಕೇಂದ್ರ ಸರ್ಕಾರದ ಜೊತೆ ವಿವಿಧ ರಾಜ್ಯಗಳು ಸಹ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿವೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ರಾಜ್ಯಗಳ ಪೈಕಿ ದೆಹಲಿ ಸರ್ಕಾರವು ಇತರೆ ರಾಜ್ಯಗಳಿಗಳಿಂತಲೂ ಹೊಸ ಇವಿ ನೀತಿ ಅಡಿಯಲ್ಲಿ ಪರಿಸರಕ್ಕೆ ಪೂರಕವಾದ ವಾಹನಗಳ ನೋಂದಣಿಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ದೆಹಲಿಯಲ್ಲಿ ಗರಿಷ್ಠ ಪ್ರಮಾಣದ ಸಬ್ಸಡಿಯೊಂದಿಗೆ ರಸ್ತೆ ತೆರಿಗೆ ಮತ್ತು ವಾಹನ ನೋಂದಣಿಯಿಂದಲೂ ವಿನಾಯ್ತಿ ನೀಡಿರುವುದು ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಮಟ್ಟದ ಇವಿ ವಾಹನಗಳು ನೋಂದಣಿಯಾಗುತ್ತಿರುವು ಉತ್ತಮ ಬೆಳವಣಿಯಾಗಿದೆ.