ಇವಿ ಚಾರ್ಜಿಂಗ್ ಕೇಂದ್ರಗಳ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಏರಿಕೆಯಾಗಿರುವುದರಿಂದ ಕಂಗಾಲಾಗಿರುವ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ.

ಭಾರತದಲ್ಲಿರುವ ಇವಿ ಚಾರ್ಜಿಂಗ್ ಕೇಂದ್ರಗಳ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಆದರೆ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಅಗತ್ಯವಿರುವಷ್ಟು ಚಾರ್ಜಿಂಗ್ ಕೇಂದ್ರಗಳು ಇಲ್ಲದಿರುವುದು ಪ್ರಮುಖ ಸಮಸ್ಯೆಯಾಗಿದೆ. ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಭಾರತದಲ್ಲಿರುವ ಇವಿ ಚಾರ್ಜಿಂಗ್ ಕೇಂದ್ರಗಳ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಫೇಮ್ ಇಂಡಿಯಾ ಯೋಜನೆಯಡಿಯಲ್ಲಿ ಜುಲೈ 6 ರ ವೇಳೆಗೆ 350 ಚಾರ್ಜಿಂಗ್ ಕೇಂದ್ರಗಳು ದೇಶದ ವಿವಿಧ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸಂಸತ್ತಿನ ವರದಿಯಲ್ಲಿ ತಿಳಿಸಲಾಗಿದೆ.

ಭಾರತದಲ್ಲಿರುವ ಇವಿ ಚಾರ್ಜಿಂಗ್ ಕೇಂದ್ರಗಳ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ದೆಹಲಿಯಲ್ಲಿ 94, ಜೈಪುರದಲ್ಲಿ 49, ಚಂಡೀಗಢದಲ್ಲಿ 48, ರಾಂಚಿಯಲ್ಲಿ 29 ಹಾಗೂ ಆಗ್ರಾದಲ್ಲಿ 10 ಕೇಂದ್ರಗಳು ಸೇರಿದಂತೆ ವಿವಿಧ ನಗರಗಳಲ್ಲಿ 350 ಚಾರ್ಜಿಂಗ್ ಕೇಂದ್ರಗಳಿವೆ. 2015 ರ ಏಪ್ರಿಲ್‌ನಲ್ಲಿ ಫೇಮ್ ಇಂಡಿಯಾ ಯೋಜನೆ ಜಾರಿಗೆ ಬಂದಾಗಿನಿಂದ ಈ ವರ್ಷದ ಜುಲೈ 9 ರವರೆಗೆ, 3.61 ಲಕ್ಷ ಎಲೆಕ್ಟ್ರಿಕ್ ವಾಹನಗಳಿಗೆ ರೂ.600 ಕೋಟಿ ಸಬ್ಸಿಡಿ ನೀಡಲಾಗಿದೆ.

ಭಾರತದಲ್ಲಿರುವ ಇವಿ ಚಾರ್ಜಿಂಗ್ ಕೇಂದ್ರಗಳ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಇದು ಫೇಮ್ ಇಂಡಿಯಾ ಯೋಜನೆಯ ಮೊದಲ ಹಂತ ಹಾಗೂ ಎರಡನೇ ಹಂತದ ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ನೀಡಲಾದ ಒಟ್ಟು ಮೊತ್ತವಾಗಿದೆ. ಕೇಂದ್ರದ ಭಾರೀ ಕೈಗಾರಿಕಾ ಸಚಿವರಾದ ಕೃಷ್ಣನ್ ಪಾಲ್ ಗುರ್ಜರ್ ಈ ಮಾಹಿತಿ ನೀಡಿದ್ದಾರೆ.

ಭಾರತದಲ್ಲಿರುವ ಇವಿ ಚಾರ್ಜಿಂಗ್ ಕೇಂದ್ರಗಳ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಫೇಮ್ ಇಂಡಿಯಾ ಯೋಜನೆಯ ಎರಡನೇ ಹಂತವು 2019 ರ ಏಪ್ರಿಲ್ 1 ರಂದು ಜಾರಿಗೆ ಬಂದಿದೆ. ಫೇಮ್ ಇಂಡಿಯಾ ಯೋಜನೆಯ ಎರಡನೇ ಹಂತವು ಒಟ್ಟು 5 ವರ್ಷಗಳವರೆಗೆ ಇರಲಿದೆ. ಈ ಯೋಜನೆಯಡಿ ರೂ.10 ಸಾವಿರ ಕೋಟಿಗಳನ್ನು ಮೀಸಲಿಡಲಾಗಿದೆ.

ಭಾರತದಲ್ಲಿರುವ ಇವಿ ಚಾರ್ಜಿಂಗ್ ಕೇಂದ್ರಗಳ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಸಚಿವ ಕೃಷ್ಣನ್ ಪಾಲ್ ಗುರ್ಜರ್ ಅವರು ಲೋಕಸಭೆಯಲ್ಲಿ ಈ ಬಗ್ಗೆ ಲಿಖಿತ ಮಾಹಿತಿ ನೀಡಿದ್ದಾರೆ. ಫೇಮ್ ಇಂಡಿಯಾ ಯೋಜನೆಯಡಿ, ಕೇಂದ್ರ ಸರ್ಕಾರ ಮಾತ್ರವಲ್ಲದೆ ವಿವಿಧ ರಾಜ್ಯ ಸರ್ಕಾರಗಳು ತಮ್ಮ ಎಲೆಕ್ಟ್ರಿಕ್ ವಾಹನ ನೀತಿಯಡಿ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡುತ್ತಿವೆ.

ಭಾರತದಲ್ಲಿರುವ ಇವಿ ಚಾರ್ಜಿಂಗ್ ಕೇಂದ್ರಗಳ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಖರೀದಿದಾರರು ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಸರ್ಕಾರ ನೀಡುವ ಪ್ರಯೋಜನಗಳ ಲಾಭವನ್ನು ಪಡೆಯಬಹುದು. ಇದರಿಂದ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವುದು ದೊಡ್ಡ ಹೊರೆಯಾಗುವುದಿಲ್ಲ.

ಭಾರತದಲ್ಲಿರುವ ಇವಿ ಚಾರ್ಜಿಂಗ್ ಕೇಂದ್ರಗಳ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಬೆಲೆ ಸಾಮಾನ್ಯವಾಗಿ ಪೆಟ್ರೋಲ್, ಡೀಸೆಲ್ ವಾಹನಗಳಿಗಿಂತ ಹೆಚ್ಚು ದುಬಾರಿಯಾಗಿರುತ್ತದೆ. ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂಜರಿಯಲು ಇದು ಸಹ ಕಾರಣವಾಗಿದೆ.

ಭಾರತದಲ್ಲಿರುವ ಇವಿ ಚಾರ್ಜಿಂಗ್ ಕೇಂದ್ರಗಳ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಬ್ಸಿಡಿ, ತೆರಿಗೆ ವಿನಾಯಿತಿ ನೀಡುವ ಮೂಲಕ ಎಲೆಕ್ಟ್ರಿಕ್ ವಾಹನಗಳ ಖರೀದಿದಾರರ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತಿವೆ. ಈ ಮೂಲಕ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಉದ್ದೇಶವಾಗಿದೆ.

ಭಾರತದಲ್ಲಿರುವ ಇವಿ ಚಾರ್ಜಿಂಗ್ ಕೇಂದ್ರಗಳ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡುವ ಹಾಗೂ ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಲಾಗಿದೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯು ಮುಂಬರುವ ದಿನಗಳಲ್ಲಿ ಗಮನಾರ್ಹವಾಗಿ ಹೆಚ್ಚಾಗುವ ನಿರೀಕ್ಷೆಗಳಿವೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Central government gives information about EV charging stations in India. Read in Kannada.
Story first published: Thursday, July 22, 2021, 14:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X