ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಹೊಸ ಇಂಧನ ದಕ್ಷತೆ ಮಾನದಂಡಗಳ ಜಾರಿಯನ್ನು ಮತ್ತೆ ಮುಂದೂಡುವ ಸಾಧ್ಯತೆಗಳಿಲ್ಲ. ವರದಿಗಳ ಪ್ರಕಾರ ದೇಶದ ವಾಹನ ಕಂಪನಿಗಳಿಗಾಗಿ ಜಾರಿಗೊಳಿಸಲಾಗುವ ಹೊಸ ಇಂಧನ ದಕ್ಷತೆ ಮಾನದಂಡಗಳು ಏಪ್ರಿಲ್ 2022ರಿಂದ ಜಾರಿಗೆ ಬರಲಿವೆ.

ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

ಹೊಸ ನಿಯಮಗಳು ಹೆಚ್ಚು ಕಟ್ಟುನಿಟ್ಟಾಗಿವೆ ಎಂದು ವಾಹನ ತಯಾರಕ ಕಂಪನಿಗಳು ಹೇಳಿವೆ. ಈ ಮಾನದಂಡಗಳ ಅನುಷ್ಠಾನದ ದಿನಾಂಕವನ್ನು ವಿಸ್ತರಿಸಬೇಕು ಎಂದು ಕಂಪನಿಗಳು ಮನವಿ ಮಾಡಿದ್ದವು. ಆದರೆ ಈ ನಿಯಮವನ್ನು ಜಾರಿಗೊಳಿಸಲು ಇನ್ನು ಮುಂದೆ ವಿಳಂಬ ಮಾಡುವುದಿಲ್ಲವೆಂದು ಕೇಂದ್ರ ಸರ್ಕಾರವು ಕಂಪನಿಗಳಿಗೆ ತಿಳಿಸಿದೆ.

ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

ವಾಹನಗಳಿಂದ ಹೊರ ಬರುವ ಇಂಗಾಲದ ಪ್ರಮಾಣವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

ಹೊಸ ನಿಯಮಗಳು ಜಾರಿಗೆ ಬಂದ ನಂತರ ಆಟೋಮೊಬೈಲ್ ಕಂಪನಿಗಳು, ವಾಹನಗಳು ಕಡಿಮೆ ಇಂಗಾಲವನ್ನು ಹೊರಸೂಸುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ.

ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

ವಾಹನ ತಯಾರಕ ಕಂಪನಿಗಳು ಈ ನಿಯಮಗಳ ಪ್ರಕಾರ ಪರಿಸರ ಸ್ನೇಹಿಯಾದ ನೈಸರ್ಗಿಕ ಅನಿಲ ಹಾಗೂ ಜೈವಿಕ ಇಂಧನದ ಮೇಲೆ ಚಲಿಸುವ ವಾಹನಗಳ ಉತ್ಪಾದನೆಯನ್ನು ಆರಂಭಿಸಬೇಕಾಗುತ್ತದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

ಹೊಸ ತಂತ್ರಜ್ಞಾನವು ತುಂಬಾ ದುಬಾರಿಯಾಗಿದ್ದು, ಹೆಚ್ಚಿನ ಬಂಡವಾಳ ಹೂಡಿಕೆಯ ಅಗತ್ಯವಿದೆ ಎಂದು ಕಂಪನಿಗಳು ಹೇಳಿವೆ. ಹೊಸ ತಂತ್ರಜ್ಞಾನದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರುವ ಕಂಪನಿಗಳಿಗೆ ಸರ್ಕಾರವು ನೆರವು ನೀಡಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

2 ವರ್ಷಗಳ ನಂತರ ಹೊಸ ನಿಯಮಗಳನ್ನು ಜಾರಿಗೊಳಿಸಬೇಕೆಂದು ಭಾರತೀಯ ವಾಹನ ತಯಾರಕರ ಗುಂಪು (ಸಿಯಾಮ್) ಸರ್ಕಾರಕ್ಕೆ ಮನವಿ ಮಾಡಿದೆ. ಸಿಯಾಮ್ ದೇಶದ ಪ್ರಮುಖ ಕಾರು ತಯಾರಕ ಕಂಪನಿಗಳಾದ ಹ್ಯುಂಡೈ ಹಾಗೂ ಮಾರುತಿ ಸುಜುಕಿಗಳನ್ನು ಪ್ರತಿನಿಧಿಸುತ್ತದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

ಹಲವಾರು ಕಂಪನಿಗಳ ಅಧ್ಯಕ್ಷರ ಒಪ್ಪಿಗೆಯೊಂದಿಗೆ ಸಿಯಾಮ್, ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿತು. ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆಯ ಮಾನದಂಡದ ಮೊದಲ ಹಂತವನ್ನು 2017ರಲ್ಲಿ ಜಾರಿಗೊಳಿಸಲಾಯಿತು.

ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

ಈ ಹಂತದಲ್ಲಿ ಕಂಪನಿಗಳು ಪ್ರತಿ ಕಿ.ಮೀಗೆ 130 ಗ್ರಾಂ ದರದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಬೇಕಾಗಿತ್ತು. ಎರಡನೇ ಹಂತವನ್ನು 2022ರ ಏಪ್ರಿಲ್ 1ರಿಂದ ಜಾರಿಗೊಳಿಸಲಾಗುವುದು.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

ಈ ಹಂತದಲ್ಲಿ 113 ಗ್ರಾಂ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಬೇಕಾಗಿದೆ. ಮಾರುತಿ ಸುಜುಕಿ, ಹ್ಯುಂಡೈ, ಟಾಟಾ ಮೋಟಾರ್ಸ್, ವೊಲ್ವೋ, ಫೋರ್ಡ್ ಮೋಟಾರ್‌ನಂತಹ ಕಂಪನಿಗಳು ಭಾರತದಲ್ಲಿ ಏಪ್ರಿಲ್ 2022ರ ಗಡುವನ್ನು ನಿಗದಿಪಡಿಸಿಕೊಂಡಿವೆ.

ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

ಮಹೀಂದ್ರಾ ಅಂಡ್ ಮಹೀಂದ್ರಾ, ಟೊಯೊಟಾ ಹಾಗೂ ಇನ್ನಿತರ ಕಂಪನಿಗಳು ಈ ಗಡುವಿಗೆ ಸಿದ್ಧವಾಗಿಲ್ಲ. ಕಾರು ತಯಾರಕ ಕಂಪನಿಗಳು ಈ ಮಾನದಂಡಗಳನ್ನು ಅಳವಡಿಸಿಕೊಳ್ಳಲು ಹೆಚ್ಚಿನ ಹೂಡಿಕೆ ಸಾಧ್ಯವಿಲ್ಲವೆಂದು ತಿಳಿಸಿವೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

ಕಳೆದ ಎರಡು ವರ್ಷಗಳಿಂದ ಕಾರುಗಳ ಮಾರಾಟ ಪ್ರಮಾಣವು ಕುಸಿದಿರುವುದರಿಂದ ಲಾಭ ಕಡಿಮೆಯಾಗಿದೆ. 2019ರಲ್ಲಿ ಆರ್ಥಿಕ ಹಿಂಜರಿತದಿಂದಾಗಿ ಹಾಗೂ 2020 ರಲ್ಲಿ ಕರೋನಾ ವೈರಸ್ ಕಾರಣದಿಂದಾಗಿ ಪ್ರಯಾಣಿಕ ವಾಹನಗಳ ಮಾರಾಟವು ಸುಮಾರು 30%ನಷ್ಟು ಕಡಿಮೆಯಾಗಿದೆ.

ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆ ಮಾನದಂಡವನ್ನು ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

ದೇಶವನ್ನು ವಾಯು ಮಾಲಿನ್ಯದಿಂದ ರಕ್ಷಿಸಲು ಹಾಗೂ ಇಂಧನ ಆಮದು ಪ್ರಮಾಣವನ್ನು ಕಡಿಮೆ ಮಾಡಲು ಕೆಲವು ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೊಳಿಸುವುದು ಅವಶ್ಯಕವೆಂದು ಕೇಂದ್ರ ಸರ್ಕಾರ ಹೇಳಿದೆ.

Most Read Articles

Kannada
English summary
Central government to implement corporate average fuel efficiency norms from 2022. Read in Kannada.
Story first published: Monday, March 29, 2021, 14:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X