ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಲು ಮುಂದಾದ ಕೇಂದ್ರ ಸರ್ಕಾರ

ಮುಂದಿನ ಎರಡು ವರ್ಷಗಳಲ್ಲಿ ಭಾರತದಲ್ಲಿ ರಸ್ತೆ ನಿರ್ಮಾಣಕ್ಕಾಗಿ ರೂ.15 ಲಕ್ಷ ಕೋಟಿ ಹೂಡಿಕೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಲು ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ರಸ್ತೆ ನಿರ್ಮಾಣದಲ್ಲಿ 100%ನಷ್ಟು ವಿದೇಶಿ ಬಂಡವಾಳ ಹೂಡಿಕೆ ಮಾಡಲು ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ವಿದೇಶಿ ಕಂಪನಿಗಳು ಭಾರತದಲ್ಲಿ ರಸ್ತೆ ನಿರ್ಮಾಣದ ಬಗ್ಗೆ ಆಸಕ್ತಿ ತೋರಿಸುತ್ತಿದ್ದು, ಹೆಚ್ಚು ತಂತ್ರಜ್ಞಾನದಿಂದ ಕೂಡಿರುವ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಮುಂದಾಗುತ್ತಿವೆ.

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಲು ಮುಂದಾದ ಕೇಂದ್ರ ಸರ್ಕಾರ

ದಿನಕ್ಕೆ 40 ಕಿ.ಮೀ ರಸ್ತೆ ನಿರ್ಮಾಣ

ತಮ್ಮ ಇಲಾಖೆಯು ದಿನಕ್ಕೆ 40 ಕಿ.ಮೀ ಹೆದ್ದಾರಿ ನಿರ್ಮಿಸುವ ಗುರಿಯನ್ನು ಶೀಘ್ರದಲ್ಲೇ ಮುಟ್ಟಲಿದೆ ಎಂದು ನಿತಿನ್ ಗಡ್ಕರಿ ಭರವಸೆ ನೀಡಿದರು. ನಿತಿನ್ ಗಡ್ಕರಿರವರು ಇಂಡೋ-ಅಮೆರಿಕಾ ಪಾರ್ಟ್ ನರ್ ಶಿಪ್ ವಿಷನ್ ಶೃಂಗಸಭೆಯಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದರು.

MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಲು ಮುಂದಾದ ಕೇಂದ್ರ ಸರ್ಕಾರ

ದೇಶದಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದ ಹೂಡಿಕೆ ಮಾಡಲು ಅವಕಾಶವಿದೆ ಎಂದು ಅವರು ಹೇಳಿದರು. ಅದರ ಸಹಾಯದಿಂದ ದೇಶದ ನಾಗರಿಕರಿಗಾಗಿ ವಿಶ್ವ ದರ್ಜೆಯ ಮೂಲಸೌಕರ್ಯವನ್ನು ರಚಿಸಲಾಗುವುದು.

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಲು ಮುಂದಾದ ಕೇಂದ್ರ ಸರ್ಕಾರ

ಇದರಿಂದ ದೇಶದಲ್ಲಿ ಹೆದ್ದಾರಿ, ರಸ್ತೆ ಹಾಗೂ ಬಂದರುಗಳನ್ನು ಸುಧಾರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ದೇಶದಲ್ಲಿ ವಿದ್ಯುತ್ ಮೂಲಸೌಕರ್ಯ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಹೂಡಿಕೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.

MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಲು ಮುಂದಾದ ಕೇಂದ್ರ ಸರ್ಕಾರ

ಇದರ ಜೊತೆಗೆ ವಿಮಾನ ನಿಲ್ದಾಣ, ಮೆಟ್ರೋ ರೈಲು, ರೈಲ್ವೆ ನಿಲ್ದಾಣಗಳ ಮೂಲಸೌಕರ್ಯಗಳಲ್ಲಿ ಭಾರಿ ಹೂಡಿಕೆ ಮಾಡಲು ಅವಕಾಶವಿದೆ. ಎಲೆಕ್ಟ್ರಿಕ್ ವಾಹನಗಳನ್ನು ಸಾರ್ವಜನಿಕ ಸಾರಿಗೆಯಲ್ಲಿ ಬಳಸಲು ಕೇಂದ್ರ ಸರ್ಕಾರವು ಆದ್ಯತೆ ನೀಡುತ್ತಿದೆ.

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಲು ಮುಂದಾದ ಕೇಂದ್ರ ಸರ್ಕಾರ

ವಿಮಾನ ನಿಲ್ದಾಣ, ಮೆಟ್ರೋ ರೈಲು, ರೈಲ್ವೆ ನಿಲ್ದಾಣಗಳ ಜೊತೆಗೆ ಸಾರ್ವಜನಿಕ ಸಾರಿಗೆ ಹಾಗೂ ವಿದ್ಯುತ್ ಕ್ಷೇತ್ರಗಳಲ್ಲೂ ಹೂಡಿಕೆ ಮಾಡಲು ಅವಕಾಶವಿದೆ ಎಂದು ನಿತಿನ್ ಗಡ್ಕರಿ ಇದೇ ಸಂದರ್ಭದಲ್ಲಿ ಹೇಳಿದರು.

MOSTREAD: 10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಲು ಮುಂದಾದ ಕೇಂದ್ರ ಸರ್ಕಾರ

ಎನ್‌ಹೆಚ್‌ಎಐ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಪ್ರತಿದಿನ 37 ಕಿ.ಮೀ ರಸ್ತೆ ನಿರ್ಮಿಸಲಾಗುತ್ತಿದೆ. ಎನ್‌ಹೆಚ್‌ಎಐ ಇತ್ತೀಚೆಗೆ 24 ಗಂಟೆಗಳಲ್ಲಿ 2,580 ಮೀಟರ್ ಉದ್ದದ ನಾಲ್ಕು ಪಥದ ಹೆದ್ದಾರಿಯನ್ನು ನಿರ್ಮಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದೆ.

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಲು ಮುಂದಾದ ಕೇಂದ್ರ ಸರ್ಕಾರ

ಅಧಿಕೃತ ಅಂಕಿಅಂಶಗಳ ಪ್ರಕಾರ 2014ರಲ್ಲಿ 91,287 ಕಿ.ಮೀ ಹೆದ್ದಾರಿ ರಸ್ತೆಗಳನ್ನು ನಿರ್ಮಿಸಲಾಗಿದ್ದರೆ, 2020ರ ಮಾರ್ಚ್ ವೇಳೆಗೆ 1,37,625 ಕಿ.ಮೀ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ.

MOSTREAD: ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್‌ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಲು ಮುಂದಾದ ಕೇಂದ್ರ ಸರ್ಕಾರ

ಇತ್ತೀಚೆಗಷ್ಟೇ ನಿತಿನ್ ಗಡ್ಕರಿ ಭಾರತದಲ್ಲಿ ರಸ್ತೆ ನಿರ್ಮಾಣ ಯೋಜನೆಗಳಲ್ಲಿ ತೊಡಗಿರುವ ಏಜೆನ್ಸಿಗಳಿಗೆ ಹಣಕಾಸು ನೆರವು ನೀಡಲು ಮೂಲಸೌಕರ್ಯ ನಿಧಿಯನ್ನು ರಚಿಸುವಂತೆ ಒತ್ತಾಯಿಸಿದ್ದರು.

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಲು ಮುಂದಾದ ಕೇಂದ್ರ ಸರ್ಕಾರ

ಭಾರತೀಯ ರೈಲ್ವೆಯು ಇಂಡಿಯನ್ ರೈಲ್ವೆ ಫೈನಾನ್ಸ್ ಕಾರ್ಪೊರೇಷನ್ (ಐ‌ಆರ್‌ಎಫ್‌ಸಿ) ಹಾಗೂ ಪವರ್ ಫೈನಾನ್ಸ್ ಕಾರ್ಪೊರೇಷನ್ (ಪಿಎಫ್‌ಸಿ) ಗಳನ್ನು ಹೊಂದಿರುವುದನ್ನು ಅವರು ಉಲ್ಲೇಖಿಸಿದರು. ಈ ನಿಧಿಯಿಂದ ಆರ್ಥಿಕ ನೆರವು ಪಡೆಯಬಹುದು ಎಂದು ಅವರು ಹೇಳಿದ್ದಾರೆ.

Most Read Articles

Kannada
English summary
Central government to invest Rs 15 lakh crore in next two years for road construction. Read in Kannada.
Story first published: Tuesday, May 4, 2021, 9:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X