ಶೀಘ್ರದಲ್ಲೇ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಿಡುಗಡೆ ಮಾಡಲಿದ್ದಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ

ದೇಶಾದ್ಯಂತ ಇಂಧನಗಳ ಬೆಲೆ ಹೆಚ್ಚಿದ ಪರಿಣಾಮ ಎಲೆಕ್ಟ್ರಿಕ್ ವಾಹನಗಳತ್ತ ಗ್ರಾಹಕರು ಗಮನಹರಿಸುತ್ತಿದ್ದು, ಎಲೆಕ್ಟ್ರಿಕ್ ವಾಹನಗಳು ಪ್ರಯಾಣಿಕರ ವಾಹನ ವಿಭಾಗದಲ್ಲಿ ಮಾತ್ರವಲ್ಲ ವಾಣಿಜ್ಯ ಮತ್ತು ಕೃಷಿ ಕ್ಷೇತ್ರದ ಯಂತ್ರಗಳ ನಿರ್ವಹಣೆಗೂ ಎಲೆಕ್ಟ್ರಿಕ್‌ನತ್ತ ಬದಲಾಗುತ್ತಿರುವ ಮಹತ್ವದ ಬದಲಾವಣೆಗೆ ಕಾರಣವಾಗಿದೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಿಡುಗಡೆ ಮಾಡಲಿದ್ದಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿವೆ. ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಸಬ್ಸಡಿ ಒದಗಿಸುತ್ತಿದೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಿಡುಗಡೆ ಮಾಡಲಿದ್ದಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ

ಹಾಗೆಯೇ ಕೇಂದ್ರದ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೆ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ರಾಜ್ಯದ ಸರ್ಕಾರದಿಂದ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಿಡುಗಡೆ ಮಾಡಲಿದ್ದಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ

ತೈಲ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಿಡುಗಡೆ ಮಾಡಲಿದ್ದಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ

ಜೊತೆಗೆ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಗಳಿಗೂ ಉತ್ತೇಜನ ನೀಡುತ್ತಿರುವುದು ಪ್ರಮುಖ ಬದಲಾಣೆಯತ್ತ ಹೆಜ್ಜೆಯಿರಿಸಲಾಗುತ್ತಿದ್ದು, ಕೇಂದ್ರ ಸರ್ಕಾರ ಸಾರಿಗೆ ಸಚಿವರು ಶೀಘ್ರದಲ್ಲೇ ಕೃಷಿ ಕ್ಷೇತ್ರದಲ್ಲೂ ಬದಲಾಣೆಯ ಉದ್ದೇಶದೊಂದಿಗೆ ಹೊಸ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಮಾದರಿಯೊಂದನ್ನು ಬಿಡುಗಡೆ ಮಾಹಿತಿ ನೀಡಿದ್ದಾರೆ. ಹೊಸ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಮಾದರಿಯು ಖಾಸಗಿ ಕಂಪನಿಯೊಂದು ಅಭಿವೃದ್ದಿಪಡಿಸುತ್ತಿದ್ದು, ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಹೊಸ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಿಡುಗಡೆಯಲ್ಲಿ ಭಾಗಿಯಾಗಲಿದ್ದಾರೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಿಡುಗಡೆ ಮಾಡಲಿದ್ದಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೊಸ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಿಡುಗಡೆಗಾಗಿ ಆಹ್ವಾನ ಬಂದ ಹಿನ್ನಲೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವರು ಇವಿ ಟ್ರ್ಯಾಕ್ಟರ್ ಬಿಡುಗಡೆಯಾಗುತ್ತಿರುವ ಹೊರತಾಗಿ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಶೀಘ್ರದಲ್ಲೇ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಿಡುಗಡೆ ಮಾಡಲಿದ್ದಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕಳೆದ ಕೆಳ ದಿನಗಳಿಂದ ಎಲೆಕ್ಟ್ರಿಕ್ ವಾಹನಗಳ ತಯಾರಕ ಕಂಪನಿಗಳನ್ನು ಪ್ರೋತ್ಸಾಹಿಸುತ್ತಿರುವ ಕೇಂದ್ರ ಸಾರಿಗೆ ಸಚಿವರು ಇವಿ ವಾಹನಗಳ ಬಿಡುಗಡೆಯ ಆಹ್ವಾನಗಳಿಗೆ ತಪ್ಪದೆ ಭಾಗಿಯಾಗುತ್ತಿದ್ದು, ಹೆಚ್ಚುತ್ತಿರುವ ಇಂಧನ ಬೆಲೆ ಪರ್ಯಾಯ ಇಂಧನಗಳಾದ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳತ್ತ ಗ್ರಾಹಕರು ಗಮನಹರಿಸಿ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಿಡುಗಡೆ ಮಾಡಲಿದ್ದಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕಳೆದ ವಾರವಷ್ಟೇ ಕೇಂದ್ರ ಸಚಿವರು ಸಿಎನ್‌ಜಿ ಚಾಲಿತ ಟ್ರ್ಯಾಕ್ಟರ್ ಬಿಡುಗಡೆಯಲ್ಲೂ ಕೂಡಾ ಭಾಗಿಯಾಗಿದ್ದರು. ರಾಮಾತ್ ಟೆಕ್ನೋ ಸೊಲ್ಯೂಷನ್ಸ್ ಹಾಗೂ ಟೊಮಾಸಿಟೊ ಅಚಿಲ್ಲೆ ಇಂಡಿಯಾ ಜಂಟಿಯಾಗಿ ವಿನ್ಯಾಸಗೊಳಿಸಿದ ಡೀಸೆಲ್ ಸಿಎನ್‌ಜಿ ಕಿಟ್ ಹೊಂದಿರುವ ಟ್ರ್ಯಾಕ್ಟರ್ ಬಿಡುಗಡೆ ಮಾಡಿ ಗ್ರಾಹಕರು ಬೆಲೆ ಏರಿಕೆಯಿಂದ ಪಾರಾಗಲು ಹೊಸ ತಂತ್ರಜ್ಞಾನಗಳತ್ತ ಮುಖಮಾಡುವ ಅನಿವಾರ್ಯತೆಯಿದೆ ಎಂದಿದ್ದರು.

MOST READ: ಮುಖೇಶ್ ಅಂಬಾನಿ ಭದ್ರತೆಗಾಗಿಯೇ ಬಂತು ಮೂರು ಕೋಟಿ ಬೆಲೆಯ ಕಾರು

ಶೀಘ್ರದಲ್ಲೇ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಿಡುಗಡೆ ಮಾಡಲಿದ್ದಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ

ಇದೀಗ ದೇಶಿಯವಾಗಿ ನಿರ್ಮಾಣಗೊಂಡಿರುವ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಿಡುಗಡೆಯ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವ ಮಾಹಿತಿ ಹಂಚಿಕೊಂಡಿರುವ ನಿತಿನ್ ಗಡ್ಕರಿಯವರು ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿನ ಒತ್ತು ನೀಡಿ ಎನ್ನುವ ಸಂದೇಶ ನೀಡುತ್ತಿದ್ದು, ಸ್ವತಃ ನಿತಿನ್ ಗಡ್ಕರಿಯವರು ಕೂಡಾ ಬುಲೆಟ್ ಪ್ರೂಫ್ ಹೊಂದಿರುವ ಫಾರ್ಚೂನರ್ ಕಾರಿನ ಬಳಕೆಯನ್ನು ಬಿಟ್ಟು ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಳಕೆ ಮಾಡುತ್ತಿದ್ದಾರೆ.

Most Read Articles

Kannada
English summary
Central Minister Nitin Gadkari To Launch All New Electric Tractor. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X