Just In
- 52 min ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 3 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 12 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 14 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- News
ಎಬಿಪಿ ಸಮೀಕ್ಷೆ: ಬೆಂಗಾಳದಲ್ಲಿ ಬಿಜೆಪಿ ಏಳಿಗೆ ನಡುವೆ ಟಿಎಂಸಿಗೆ ಗೆಲುವು
- Sports
ಸ್ಪಿನ್ ಆಗಲು ಆರಂಭವಾದರೆ ಜಗತ್ತು ಅಳಲು ಆರಂಭಿಸುತ್ತದೆ: ಪಿಚ್ ಬಗ್ಗೆ ಟೀಕೆಗೆ ಆಸಿಸ್ ಸ್ಪಿನ್ನರ್ ತಿರುಗೇಟು
- Movies
ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿರುವ ಮೆಗಾಸ್ಟಾರ್ ಅಮಿತಾಭ್ ಬಚ್ಚನ್
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರೈಲು ನಿಲ್ದಾಣಗಳಲ್ಲಿ ತಲೆ ಎತ್ತಲಿವೆ ಸಾಲು ಸಾಲು ಚಾರ್ಜಿಂಗ್ ಪಾಯಿಂಟ್‌ಗಳು
ಮುಂಬೈ ನಗರದಲ್ಲಿರುವ ಹಲವು ರೈಲು ನಿಲ್ದಾಣಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲು ಕೇಂದ್ರ ರೈಲ್ವೆ, ಟಾಟಾ ಪವರ್ ಹಾಗೂ ವಿಶ್ವಸಂಸ್ಥೆಯ ಇಕೋ ಪ್ರೊಗ್ರಾಂಗಳು (ಯುಎನ್‌ಇಪಿ) ಮುಂದಾಗಿವೆ.

ಈ ಯೋಜನೆಯಡಿಯಲ್ಲಿ ಮುಂಬೈನಲ್ಲಿರುವ ಹಲವು ರೈಲ್ವೆ ನಿಲ್ದಾಣಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗಾಗಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲಾಗುವುದು. ಮಾಹಿತಿಗಳ ಪ್ರಕಾರ ಈ ಚಾರ್ಜಿಂಗ್ ಪಾಯಿಂಟ್‌ಗಳನ್ನು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್‌ಎಂಟಿ), ಥಾಣೆ, ದಾದರ್, ಪ್ಯಾರೆಲ್ ಹಾಗೂ ಬೈಕುಲ್ಲಾಗಳಲ್ಲಿ ಹಂತ ಹಂತವಾಗಿ ಸ್ಥಾಪಿಸಲಾಗುವುದು.

ಇದಕ್ಕಾಗಿ ವರ್ಕ್ ಆರ್ಡರ್ ಹೊರಡಿಸಲಾಗಿದೆ. ಇದಾದ ನಂತರ ಎರಡನೇ ಹಂತದಲ್ಲಿ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್, ಭಂಡಪ್, ಪನ್ವೆಲ್ ಹಾಗೂ ಕುರ್ಲಾ ನಿಲ್ದಾಣಗಳಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲಾಗುವುದು.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಈ ಎಲ್ಲಾ ಚಾರ್ಜಿಂಗ್ ಪಾಯಿಂಟ್‌ಗಳನ್ನು ರೈಲ್ವೆ ನಿಲ್ದಾಣಗಳ ಪಾರ್ಕಿಂಗ್'ಗಳಲ್ಲಿ ಸ್ಥಾಪಿಸಲಾಗುವುದು ಎಂಬುದು ವಿಶೇಷ. ಎಲೆಕ್ಟ್ರಿಕ್ ವಾಹನಗಳ ಮಾಲೀಕರು ಪೇ-ಪರ್-ಯೂಸ್ ಮಾದರಿಯ ಮೂಲಕ ಈ ಚಾರ್ಜಿಂಗ್ ಪಾಯಿಂಟ್‌ಗಳನ್ನು ಬಳಸಬಹುದು.

ಮಹಾರಾಷ್ಟ್ರದ ಸಾರಿಗೆ ಇಲಾಖೆಯು ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಪ್ರಕಾರ ಮಹಾರಾಷ್ಟ್ರದಲ್ಲಿ 2017-18ನೇ ಸಾಲಿನಲ್ಲಿ 1,459 ಯುನಿಟ್ ಎಲೆಕ್ಟ್ರಿಕ್ ಕಾರು ಹಾಗೂ ಸ್ಕೂಟರ್‌ಗಳನ್ನು ನೋಂದಾಯಿಸಲಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಈ ಪ್ರಮಾಣವು 2019-20ರಲ್ಲಿ ಸುಮಾರು 405%ನಷ್ಟು ಏರಿಕೆಯಾಗಿ 7,400 ಯುನಿಟ್'ಗಳಿಗೆ ತಲುಪಿದೆ. ದ್ವೀಪ ನಗರದಲ್ಲಿ ಈ ಸಂಖ್ಯೆ 46 ಯುನಿಟ್'ಗಳಿಂದ ಒಟ್ಟು 672 ಯುನಿಟ್'ಗಳಿಗೆ ಏರಿಕೆಯಾಗಿದೆ.

ಮುಂಬೈನ ಕೇಂದ್ರ ರೈಲ್ವೆಯ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರಾದ ರಾಬಿನ್ ಕಾಲಿಯಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಟಾಟಾ ಪವರ್ ಹಾಗೂ ಯುಎನ್‌ಇಪಿ ಸಹಭಾಗಿತ್ವದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್'ನಲ್ಲಿ (ಸಿಎಮ್‌ಟಿ) ಇವಿ ಚಾರ್ಜಿಂಗ್ ಕೇಂದ್ರವನ್ನು ಸ್ಥಾಪಿಸಲಾಗಿದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಮುಂಬೈ ವಿಭಾಗದ ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯಲು ನಾವು ಯೋಜನೆ ರೂಪಿಸಿದ್ದೇವೆ ಎಂದು ಅವರು ಹೇಳಿದರು.

ಮುಂಬೈನ ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್‌ಎಂ) ಹಾಗೂ ಮುಂಬೈನ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ತಂಡದಿಂದಾಗಿ ಈ ಪ್ರಯತ್ನವು ಯಶಸ್ವಿಯಾಗಿದೆ ಎಂದು ಅವರು ಹೇಳಿದ್ದಾರೆ. ವಿಭಾಗೀಯ ವಿದ್ಯುತ್ ಎಂಜಿನಿಯರ್ ಹೆಚ್‌ಎಸ್ ಸೂದ್ ಈ ಯೋಜನೆಯ ನೇತೃತ್ವ ವಹಿಸಿದ್ದಾರೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಈ ಸಹಭಾಗಿತ್ವದ ಕುರಿತು ಮಾತನಾಡಿದ ಟಾಟಾ ಪವರ್‌ನ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರವೀರ್ ಸಿನ್ಹಾರವರು ನಮ್ಮ ಕ್ಲೀನ್ ಮೊಬಿಲಿಟಿ ಯೋಜನೆಗಾಗಿ ಯುಎನ್‌ಇಪಿ ಹಾಗೂ ಕೇಂದ್ರ ರೈಲ್ವೆಯೊಂದಿಗೆ ಕೈಜೋಡಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಹೇಳಿದರು.

ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಗ್ರಾಹಕರಿಗೆ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸುವ ಮೂಲಕ ನಮ್ಮ ಬದ್ಧತೆಯನ್ನು ಪ್ರದರ್ಶಿಸುತ್ತಿರುವುದರಿಂದ ಈ ಪಾಲುದಾರಿಕೆ ನಮಗೆ ಮುಖ್ಯವಾಗಿದೆ ಎಂದು ಪ್ರವೀರ್ ಸಿನ್ಹಾ ಹೇಳಿದರು.