Just In
- 1 hr ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 3 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- Movies
ವಿಶೇಷ ಭಾನುವಾರ: ಮನೋರಂಜನಾ ಲೋಕದಲ್ಲಿ 'ಮದ-ಗಜ'ಗಳ ಕಾದಾಟ
- News
ಎಬಿಪಿ ಸಮೀಕ್ಷೆ: ಬೆಂಗಾಳದಲ್ಲಿ ಬಿಜೆಪಿ ಏಳಿಗೆ ನಡುವೆ ಟಿಎಂಸಿಗೆ ಗೆಲುವು
- Sports
ಸ್ಪಿನ್ ಆಗಲು ಆರಂಭವಾದರೆ ಜಗತ್ತು ಅಳಲು ಆರಂಭಿಸುತ್ತದೆ: ಪಿಚ್ ಬಗ್ಗೆ ಟೀಕೆಗೆ ಆಸಿಸ್ ಸ್ಪಿನ್ನರ್ ತಿರುಗೇಟು
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಝಡ್-ಪ್ಲಸ್ ರಕ್ಷಣೆ ಹೊಂದಿರುವ ಬುಲೆಟ್ ಪ್ರೂಫ್ ಕಾರು ಬಿಟ್ಟು ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸಿದ ಸಚಿವ
ದೇಶದ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರ ಬಳಕೆಗಾಗಿ ಝಡ್-ಪ್ಲಸ್ ರಕ್ಷಣೆ ಹೊಂದಿರುವ ಬುಲೆಟ್ ಪ್ರೂಫ್ ಕಾರುಗಳನ್ನು ನೀಡಲಾಗುತ್ತದೆ. ಅದರಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೂ ಮಹಾರಾಷ್ಟ್ರ ರಾಜ್ಯದಿಂದ ಹೆಚ್ಚಿನ ಭದ್ರತಾ ಸೌಲಭ್ಯವನ್ನು ಹೊಂದಿರುವ ಕಾರ್ ಅನ್ನು ನೀಡಲಾಗಿದೆ.

ನಿತಿನ್ ಗಡ್ಕರಿರವರು ಅವರ ತವರು ರಾಜ್ಯ ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದಾಗ ಈ ಕಾರ್ ಅನ್ನು ಬಳಸಿರಲಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಅವರು ನಾಗ್ಪುರ ಪ್ರವಾಸದ ವೇಳೆ ಎಂಜಿ ಮೋಟಾರ್ ಕಂಪನಿಯ ಝಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಅವರು ಈ ಕಾರನ್ನು ಬಳಸಿದ್ದಾರೆ ಎಂದು ಹೇಳಲಾಗಿದೆ.

ಅದಕ್ಕಾಗಿ ಸಚಿವರು ಟೊಯೊಟಾ ಫಾರ್ಚೂನರ್ ಕಾರ್ ಅನ್ನು ಬಳಸಿಲ್ಲ. ಈ ಎಲೆಕ್ಟ್ರಿಕ್ ಕಾರನ್ನು ಸಚಿವರ ಬಳಕೆಗಾಗಿಯೇ ಮೀಸಲಿಡಲಾಗಿತ್ತೇ ಎಂಬ ಮಾಹಿತಿ ಲಭ್ಯವಾಗಿಲ್ಲ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಪೆಟ್ರೋಲ್, ಡೀಸೆಲ್ ವಾಹನಗಳ ಮಿತಿ ಮೀರಿದ ಬಳಕೆಯಿಂದಾಗಿ ವಾಯುಮಾಲಿನ್ಯ ಪ್ರಮಾಣವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವಾಯು ಮಾಲಿನ್ಯವನ್ನು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ.

ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ನಿತಿನ್ ಗಡ್ಕರಿರವರು ಎಂಜಿ ಝಡ್ಎಸ್ ಎಲೆಕ್ಟ್ರಿಕ್ ಕಾರನ್ನು ಬಳಸಿದ್ದಾರೆ. ಎಂಜಿ ಮೋಟಾರ್ ಕಂಪನಿಯು ಗುಜರಾತ್‌ನಲ್ಲಿರುವ ತನ್ನ ಹಲೊಲ್ ಉತ್ಪಾದನಾ ಘಟಕದಲ್ಲಿ ಝಡ್ಎಸ್ ಎಲೆಕ್ಟ್ರಿಕ್ ಕಾರುಗಳನ್ನು ಉತ್ಪಾದಿಸುತ್ತದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಎಂಜಿ ಮೋಟಾರ್ ಕಂಪನಿಯು 2019ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಝಡ್ಎಸ್ ಎಲೆಕ್ಟ್ರಿಕ್ ಕಾರ್ ಅನ್ನು ಬಿಡುಗಡೆಗೊಳಿಸಿತು. ಈ ಕಾರಿನ ಬಿಡುಗಡೆ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಕೂಡ ಹಾಜರಿದ್ದರು ಎಂಬುದು ಗಮನಾರ್ಹ.

ನಂತರ ಈ ಕಾರಿನ ಮೊದಲ ವಿತರಣಾ ಕಾರ್ಯಕ್ರಮದಲ್ಲಿಯೂ ಭಾಗವಹಿಸಿದರು. ಎಂಜಿ ಝಡ್ಎಸ್ ಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆ ರೂ.20.99 ಲಕ್ಷಗಳಾಗಿದೆ.ಈ ಎಲೆಕ್ಟ್ರಿಕ್ ಕಾರಿನ ಟಾಪ್ ಎಂಡ್ ಮಾದರಿಯ ಬೆಲೆ ರೂ.24.18 ಲಕ್ಷಗಳಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಈ ಕಾರಿನಲ್ಲಿ ವಿದ್ಯುತ್ ದಕ್ಷತೆಗಾಗಿ 44.5 ಕಿ.ವ್ಯಾನ ಹೈಟೆಕ್ ಬ್ಯಾಟರಿ ಪ್ಯಾಕ್ ಅನ್ನು ನೀಡಲಾಗಿದೆ. ಈ ಬ್ಯಾಟರಿ ಐಪಿ 6ನಿಂದ ಪ್ರಮಾಣೀಕರಿಸಲ್ಪಟ್ಟಿದೆ. ಈ ಬ್ಯಾಟರಿಯು ಧೂಳು ಹಾಗೂ ನೀರಿನಿಂದ ಪ್ರಭಾವಿತವಾಗುವುದಿಲ್ಲ ಎಂಬುದು ಗಮನಾರ್ಹ.
ಈ ಬ್ಯಾಟರಿ ಪ್ಯಾಕ್ 141 ಬಿಹೆಚ್‌ಪಿ ಪವರ್ ಹಾಗೂ 353 ಎನ್‌ಎಂ ಟಾರ್ಕ್ ಉತ್ಪಾದಿಸಬಲ್ಲ ಎಲೆಕ್ಟ್ರಿಕ್ ಮೋಟರ್ ಅನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಮೋಟರ್ ಕೇವಲ 8.5 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುತ್ತದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು
ಈ ಕಾರಿನಲ್ಲಿರುವ ಬ್ಯಾಟರಿಯು ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದ ನಂತರ 419 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಬ್ಯಾಟರಿಯು ಪೂರ್ತಿಯಾಗಿ ಚಾರ್ಜ್ ಆಗಲು 6ರಿಂದ 8 ಗಂಟೆಗಳು ಬೇಕಾಗುತ್ತವೆ.

ಫಾಸ್ಟ್ ಚಾರ್ಜಿಂಗ್ ಮೂಲಕ ಈ ಬ್ಯಾಟರಿಯನ್ನು 50 ನಿಮಿಷಗಳಲ್ಲಿ 0 - 80%ವರೆಗೆ ಚಾರ್ಜ್ ಮಾಡಬಹುದು. ಎಂಜಿ ಮೋಟಾರ್ ಕಂಪನಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಚಲಿಸುವ ಹೊಸ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಲು ಚಿಂತನೆ ನಡೆಸಿರುವುದಾಗಿ ತಿಳಿಸಿದೆ.