Just In
- 1 hr ago Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- 14 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 16 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 16 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
Don't Miss!
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪರಿಸರ ಸ್ನೇಹಿ ಇವಿ ವಾಹನಗಳ ಉತ್ತೇಜನಕ್ಕಾಗಿ ಚಂಡಿಗಢದಲ್ಲಿ ಹೊಸ ಇವಿ ನೀತಿ ಪ್ರಕಟ!
ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.
ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.
ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲೂ ವಿವಿಧ ರಾಜ್ಯ ಸರ್ಕಾರಗಳು ಸಹ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ಇದೀಗ ಕೇಂದ್ರಾಡಳಿತ ಪ್ರದೇಶವಾದ ಚಂಡಿಗಢದಲ್ಲೂ ಕೂಡಾ ಹೊಸ ಇವಿ ನೀತಿ ಘೋಷಣೆ ಮಾಡಲಾಗಿದೆ.
ಚಂಡಿಗಢದಲ್ಲಿ ಘೋಷಣೆ ಮಾಡಿರುವ ಹೊಸ ಇವಿ ವಾಹನ ನೀತಿಯಡಿಯಲ್ಲಿ ಇವಿ ವಾಹನಗಳನ್ನು ಖರೀದಿಸುವವರಿಗಾಗಿ ಗರಿಷ್ಠ ಪ್ರಮಾಣದ ಸಬ್ಸಡಿ ನೀಡಲು ಯೋಜಿಸಲಾಗಿದ್ದು, ಹೊಸ ಸಬ್ಸಡಿ ಯೋಜನೆ ಅಡಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, ತ್ರಿ ಚಕ್ರ ವಾಹನಗಳು ಮತ್ತು ಇವಿ ಕಾರು ಮಾದರಿಗಳಿಗೆ ಆಕರ್ಷಕ ಸಬ್ಸಡಿ ಸಿಗಲಿದೆ.
ಹೊಸ ಎಲೆಕ್ಟ್ರಿಕ್ ವಾಹನ ನೀತಿ ಅಡಿಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ರೂ.30 ಸಾವಿರ ತನಕ ಸಬ್ಸಡಿ ಮತ್ತು ಎಲೆಕ್ಟ್ರಿಕ್ ಕಾರುಗಳಿಗೆ ಗರಿಷ್ಠ ರೂ.1.50 ಲಕ್ಷದ ತನಕ ಸಬ್ಸಡಿ ನೀಡಲು ನಿರ್ಧರಿಸಲಾಗಿದ್ದು, ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳ ಖರೀದಿದಾರರಿಗೆ ಗರಿಷ್ಠ ರೂ. 30 ಸಾವಿರ ತನಕ ಸಬ್ಸಿಡಿ ಪ್ರಕಟಿಸಲಾಗಿದೆ.
ಇದಲ್ಲದೆ ಮಾರ್ಚ್ 31, 2024 ರವರೆಗೆ ರಸ್ತೆ ತೆರಿಗೆ ಮತ್ತು ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಲಾಗಿದ್ದು, ಮುಂದಿನ ಐದು ವರ್ಷಗಳ ತನಕ ಸರ್ಕಾರಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿನ ಪಾರ್ಕಿಂಗ್ ಸ್ಥಳಗಳಲ್ಲಿ ಇವಿ ವಾಹನಗಳಿಗೆ ಯಾವುದೇ ರೀತಿಯ ಶುಲ್ಕು ವಿಧಿಸದಿರಲು ನಿರ್ಧರಿಸಲಾಗಿದೆ.
ಇನ್ನು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ವಿವಿಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ.
ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.
ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.
ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.
ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.
ಸರ್ಕಾರಿ ಸ್ವಾಮ್ಯದ ಕನ್ವರ್ಜೆನ್ಸ್ ಎನರ್ಜಿ ಸರ್ವೀಸಸ್ ಲಿಮಿಟೆಡ್ (ಸಿಇಎಸ್ಎಲ್) ಸಂಸ್ಥೆಯು ಕೂಡಾ ದೇಶಾದ್ಯಂತ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೆಷನ್ ಲಿಮಿಟೆಡ್(ಹೆಚ್ಪಿಸಿಎಲ್)ನೊಂದಿಗೆ ಹೊಸ ಒಪ್ಪಂದ ಮಾಡಿಕೊಂಡಿದೆ.
ಹೊಸ ಒಪ್ಪಂದದ ಪ್ರಕಾರ ಸಿಇಎಸ್ಎಲ್ ಸಂಸ್ಥೆಯು ಹೆಚ್ಪಿ ಪೆಟ್ರೋಲ್ ಬಂಕ್ಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದ್ದು, ಮುಂದಿನ 10 ವರ್ಷಗಳ ಹೊಸ ಒಪ್ಪಂದ ಚಾಲ್ತಿಯಲ್ಲಿರಲಿದೆ.
ಸಿಇಎಸ್ಎಲ್ ಸಂಸ್ಥೆಯು ಗ್ರಾಹಕರ ಬೇಡಿಕೆ ಆಧಾರದ ಮೇಲೆ ಡಿಸಿ ಫಾಸ್ಟ್ ಚಾರ್ಜಿಂಗ್ ಮತ್ತು ಎಸಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, ಮುಂದಿನ 2 ವರ್ಷದಲ್ಲಿ 2 ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್ಗಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ.