ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಚಾರ್ಜರ್ ಕಂಪನಿ

ಬೆಂಗಳೂರು ಮೂಲದ ಚಾರ್ಜರ್(Charzer) ಕಂಪನಿಯು ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸಲು ಹೊಸ ಯೋಜನೆಯೊಂದನ್ನು ರೂಪಿಸಿದ್ದು, ಅಪಾರ್ಟ್ಮೆಂಟ್ ಅಂಡ್ ಹೌಸಿಂಗ್ ಸೊಸೈಟಿ ಮ್ಯಾನೇಜ್ಮೆಂಟ್ ಸಾಫ್ಟ್‌ವೇರ್(ADDA) ಕಂಪನಿ ಜೊತೆಗೂಡಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ.

ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಚಾರ್ಜರ್ ಕಂಪನಿ

ಇವಿ ವಾಹನಗಳಿಗೆ ಪೂರಕವಾಗಿ ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ಇವಿ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸುವತ್ತ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಾರ್ಜರ್ ಮತ್ತು ಆಡ್ ಕಂಪನಿಯು ಸಾವಿರಾರು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಜಾಲ ತೆರೆಯುವ ಯೋಜನೆ ರೂಪಿಸಿವೆ.

ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಚಾರ್ಜರ್ ಕಂಪನಿ

ಭಾರತದಲ್ಲಿ ಹೆಚ್ಚುತ್ತಿರುವ ಇವಿ ವಾಹನಗಳಿಗೆ ಪೂರಕವಾಗಿ ವಿವಿಧ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಇವಿ ವಾಹನಗಳ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯನ್ನು ಹೆಚ್ಚಿಸಿದ್ದು, ಚಾರ್ಜಿಂಗ್ ಕೇಂದ್ರಗಳ ಹೆಚ್ಚಳಕ್ಕೆ ಪ್ರಮುಖ ಕಂಪನಿಗಳು ವಿಶೇಷ ಆಸಕ್ತಿ ವಹಿಸಿವೆ.

ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಚಾರ್ಜರ್ ಕಂಪನಿ

ಚಾರ್ಜರ್ ಕಂಪನಿಯು ಈಗಾಗಲೇ ಇವಿ ವಾಹನಗಳಿಗಾಗಿ ಸಣ್ಣ ಪ್ರಮಾಣದ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯ ಒದಗಿಸುತ್ತಿದ್ದು, ಇದೀಗ ಕಂಪನಿಯು ಅಪಾರ್ಟ್ಮೆಂಟ್ ಅಂಡ್ ಹೌಸಿಂಗ್ ಸೊಸೈಟಿ ಮ್ಯಾನೇಜ್ಮೆಂಟ್ ಸಾಫ್ಟ್‌ವೇರ್(ADDA) ಕಂಪನಿಯ ಜೊತೆಗೂಡಿ ಪ್ರಮುಖ ವಸತಿ ಸಮುಚ್ಚಯಗಳಲ್ಲಿ ಸುಮಾರು 1500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಒದಗಿಸುವ ಯೋಜನೆಗಾಗಿ ಪಾಲುದಾರಿಕೆ ಪ್ರಕಟಿಸಿದೆ.

ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಚಾರ್ಜರ್ ಕಂಪನಿ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಚಾರ್ಜರ್ ಕಂಪನಿ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಚಾರ್ಜರ್ ಕಂಪನಿ

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಚಾರ್ಜರ್ ಕಂಪನಿ

ಹಾಗೆಯೇ ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಚಾರ್ಜರ್ ಕಂಪನಿ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಚಾರ್ಜರ್ ಕಂಪನಿ

ಚಾರ್ಜರ್ ಕಂಪನಿಯು ಈಗಾಗಲೇ ದೇಶಾದ್ಯಂತ 20 ಪ್ರಮುಖ ನಗರಗಳಲ್ಲಿ ಆರಂಭಿಕ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಿದ್ದು, ಇವಿ ವಾಹನ ಮಾಲೀಕರಿಗೆ ಚಾರ್ಜಿಂಗ್ ನಿಲ್ದಾಣಗಳನ್ನು ಸುಲಭವಾಗಿ ಪತ್ತೆ ಹಚ್ಚಲು ನೆರವಾಗುವಂತೆ ಪ್ರತ್ಯೇಕ ಆ್ಯಪ್ ಕೂಡಾ ಅಭಿವೃದ್ದಿಪಡಿಸಿದೆ.

ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಚಾರ್ಜರ್ ಕಂಪನಿ

ಆ್ಯಪ್ ಮೂಲಕ ಹತ್ತಿರದಲ್ಲಿರುವ ಚಾರ್ಜಿಂಗ್ ನಿಲ್ದಾಣಗಳ ಮಾಹಿತಿ ಮತ್ತು ಚಾರ್ಜಿಂಗ್ ನಿಲ್ದಾಣದಲ್ಲಿ ಚಾರ್ಜಿಂಗ್‌ಗಾಗಿ ಸರತಿ ಸಾಲಿನಲ್ಲಿರುವ ವಾಹನಗಳ ಸಂಖ್ಯೆ ಮತ್ತು ಯಾವ ನಿಲ್ದಾಣದಲ್ಲಿ ಕಡಿಮೆ ವಾಹನಗಳಿವೆ ಎನ್ನುವುದರ ಜೊತೆ ಚಾರ್ಜಿಂಗ್‌ಗಾಗಿ ತೆಗೆದುಕೊಳ್ಳುವ ನಿಖರವಾದ ಸಮಯದ ಮಾಹಿತಿಯನ್ನು ಬಳಕೆದಾರರಿಗೆ ನೀಡಲಿದೆ.

ಚಾರ್ಜರ್ ಕಂಪನಿಯು ಗ್ರಾಹಕರ ಬೇಡಿಕೆ ಆಧಾರದ ಮೇಲೆ 3.3kW ಸಾಮರ್ಥ್ಯದ ಚಾರ್ಜರ್ ಲೈಟ್(Charzer Lite) ಮತ್ತು 22kW ಸಾಮರ್ಥ್ಯದ ಚಾರ್ಜರ್ ಟೆರಾ(Charzer Terra) ನಿಲ್ದಾಣಗಳನ್ನು ನಿರ್ಮಾಣ ಮಾಡಲಿದ್ದು, ಇದರಲ್ಲಿ ಚಾರ್ಜರ್ ಲೈಟ್ ಚಾರ್ಜಿಂಗ್ ಸೌಲಭ್ಯವನ್ನು ಇವಿ ವಾಹನ ಮಾಲೀಕರು ವ್ಯಯಕ್ತಿಕ ಬಳಕೆಗಾಗಿ ಅಳವಡಿಸಿಕೊಳ್ಳಬಹುದಾಗಿದೆ.

ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಚಾರ್ಜರ್ ಕಂಪನಿ

ಹೆಚ್ಚುತ್ತಿರುವ ಇಂಧನ ದರಗಳು ಮತ್ತು ಮಾಲಿನ್ಯ ಸಮಸ್ಯೆಯಿಂದಾಗಿ ಕಳೆದ ಕೆಲವು ವರ್ಷಗಳಿಂದ ವಿದ್ಯುತ್ ವಾಹನಗಳ ಪ್ರಾಮುಖ್ಯತೆಯು ತೀವ್ರವಾಗಿ ಹೆಚ್ಚುತ್ತಿದ್ದು, ಅದಕ್ಕೆ ತಕ್ಕಂತೆ ಎಲೆಕ್ಟ್ರಿಕ್ ವಾಹನಗಳಿಗೆ ಬೇಕಿರುವ ಚಾರ್ಜಿಂಗ್ ಸೌಲಭ್ಯ ಒದಗಿಸುವುದು ಕೂಡಾ ಪ್ರಮುಖವಾಗಿದೆ.

ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಚಾರ್ಜರ್ ಕಂಪನಿ

ಈ ನಿಟ್ಟಿನಲ್ಲಿ ಚಾರ್ಜರ್ ಕಂಪನಿಯು ವಿವಿಧ ಕಂಪನಿಗಳ ಜೊತೆಗೂಡಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, 2025ರ ವೇಳೆಗೆ ಇವೆರೆ ಕಂಪನಿಯು ದೇಶಾದ್ಯಂತ ಸುಮಾರು 3 ಸಾವಿರಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೊಂದುವ ಗುರಿಹೊಂದಿದೆ.

Article Published On: Tuesday, December 28, 2021, 8:45 [IST]
English summary
Charzer to set up 1500 ev charging stations with adda details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+