ಬಿಡುಗಡೆಗಾಗಿ ಸಿದ್ದಗೊಂಡ ಸಿಟ್ರನ್ ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ

ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯನ್ನು ಇದೇ ತಿಂಗಳು 7ರಂದು ಬಿಡುಗಡೆ ಮಾಡಲಿರುವ ಸಿಟ್ರನ್ ಇಂಡಿಯಾ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಸಿಟ್ರನ್ ಕಂಪನಿಯ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವ ತವಕದಲ್ಲಿದೆ.

ಬಿಡುಗಡೆಗಾಗಿ ಸಿದ್ದಗೊಂಡ ಸಿಟ್ರನ್ ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ

ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಆಟೋ ಉದ್ಯಮಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿರುವ ಸಿಟ್ರನ್ ಕಂಪನಿಯು ಈಗಾಗಲೇ ಹೊಸ ಕಾರುಗಳ ಉತ್ಪಾದನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು, ಮೊದಲ ಹಂತವಾಗಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗೊಳಿಸಿದ ನಂತರ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹಲವು ಕಾರು ಆವೃತ್ತಿಗಳನ್ನು ಬಿಡುಗಡೆ ಮಾಡಲಿದೆ.

ಬಿಡುಗಡೆಗಾಗಿ ಸಿದ್ದಗೊಂಡ ಸಿಟ್ರನ್ ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ

ಸಿಟ್ರನ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟಗೊಂದಿಗೆ ಯುರೋಪಿನ್ ಮಾರುಕಟ್ಟೆಯಲ್ಲಿ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿ ಗುರುತಿಸಿಕೊಂಡಿದ್ದು, ಇದೀಗ ಭಾರತದಲ್ಲೂ ಮೊದಲ ಬಾರಿಗೆ ಹೊಸ ಕಾರುಗಳ ಮಾರಾಟಕ್ಕೆ ಸಿದ್ದವಾಗಿದೆ.

ಬಿಡುಗಡೆಗಾಗಿ ಸಿದ್ದಗೊಂಡ ಸಿಟ್ರನ್ ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ

ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಸಿಟ್ರನ್ ಕಂಪನಿಯು ವಿವಿಧ ಮಾದರಿಯ ಎಸ್‌ಯುವಿ, ಕಂಪ್ಯಾಕ್ಟ್ ಎಸ್‌ಯುವಿ, ಎಂಪಿವಿ ಮತ್ತು ಹ್ಯಾಚ್‌ಬ್ಯಾಕ್ ಕಾರುಗಳನ್ನು ಮಾರಾಟ ಮಾಡುವ ಯೋಜನೆಯಲ್ಲಿದ್ದು, ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸುತ್ತಿದೆ.

ಬಿಡುಗಡೆಗಾಗಿ ಸಿದ್ದಗೊಂಡ ಸಿಟ್ರನ್ ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ

ಸಿ5 ಏರ್‌ಕ್ರಾಸ್ ಎಸ್‌ಯುವಿ ನಂತರ ಸಿ21 ಸ್ಪೋರ್ಟಿ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಮೈಕ್ರೊ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡಲಿರುವ ಸಿಟ್ರನ್ ಇಂಡಿಯಾ ಕಂಪನಿಯು ಐಷಾರಾಮಿ ಜೊತೆಗೆ ಬಜೆಟ್ ಕಾರುಗಳ ಮಾರಾಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಭಾರತದಲ್ಲಿ ಹೊಸ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಿಗೆ ಉತ್ತಮ ಬೇಡಿಕೆಯಿದ್ದು, ಸಿ21 ಕೋಡ್ ನೆಮ್ ಆಧರಿಸಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಸಿಟ್ರನ್ ಕಂಪನಿಯು ಬಿಡುಗಡೆ ಮಾಡುತ್ತಿದೆ.

ಬಿಡುಗಡೆಗಾಗಿ ಸಿದ್ದಗೊಂಡ ಸಿಟ್ರನ್ ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಮುಂಬರುವ ದೀಪಾವಳಿ ಹೊತ್ತಿಗೆ ಬಿಡುಗಡೆಗೊಳಿಸುವ ಸಾಧ್ಯತೆಗಳಿದ್ದು, ಸಿಟ್ರನ್ ಕಂಪನಿಯು ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವ ಯೋಜನೆ ಹೊಂದಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಬಿಡುಗಡೆಗಾಗಿ ಸಿದ್ದಗೊಂಡ ಸಿಟ್ರನ್ ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಗ್ರಾಹಕರ ಬೇಡಿಕೆಯೆಂತೆ ಎರಡು ಪ್ರಮುಖ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆ ಮಾಡುತ್ತಿದ್ದು, 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಬಿಡುಗಡೆಗಾಗಿ ಸಿದ್ದಗೊಂಡ ಸಿಟ್ರನ್ ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ

ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಬಿಡುಗಡೆ ಮಾಡುತ್ತಿರುವ ಸಿ5 ಏರ್‌ಕ್ರಾಸ್ ಕಾರು ಮಾದರಿಯಲ್ಲಿ ಮಾತ್ರವೇ ಡೀಸೆಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಮುಂಬರುವ ಹೊಸ ಕಾರುಗಳಲ್ಲಿ ಸಂಪೂರ್ಣವಾಗಿ ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಮಾದರಿಗಳನ್ನು ಮಾತ್ರ ಬಿಡುಗಡೆ ಮಾಡುವ ಯೋಜನೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಬಿಡುಗಡೆಗಾಗಿ ಸಿದ್ದಗೊಂಡ ಸಿಟ್ರನ್ ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ

ಸಿಟ್ರನ್ ಹೊಸ ಕಾರುಗಳಲ್ಲಿ ಸದ್ಯ ಬಿಡುಗಡೆಯಾಗುತ್ತಿರುವ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 23 ಲಕ್ಷದಿಂದ ರೂ. 26 ಲಕ್ಷ ಬೆಲೆ ಹೊಂದಲಿದ್ದರೆ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.12 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.

Most Read Articles

Kannada
English summary
Citroen C3 Aircross Spied Testing. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X