ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ಆರಂಭಿಸಿದ ಸಿಟ್ರನ್ ಸಿ3 ಏರ್‌ಕ್ರಾಸ್

ಸಿಟ್ರನ್ ಇಂಡಿಯಾ ಕಂಪನಿಯು ಸಿ5 ಏರ್‌ಕ್ರಾಸ್ ಐಷಾರಾಮಿ ಎಸ್‌ಯುವಿ ಬಿಡುಗಡೆಯ ನಂತರ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರು ವಿನೂತನ ವಿನ್ಯಾಸದೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿದೆ.

ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ಆರಂಭಿಸಿದ ಸಿಟ್ರನ್ ಸಿ3

ಐಷಾರಾಮಿ ಸೌಲಭ್ಯಗಳೊಂದಿಗೆ ತುಸು ದುಬಾರಿಯಾಗಿದ್ದರೂ ಸಿ5 ಏರ್‌ಕ್ರಾಸ್ ಏಸ್‌ಯುವಿ ಕಾರು ಮಾದರಿಯು ಫುಲ್ ಸೈಜ್ ಎಸ್‌ಯುವಿ ವಿಭಾಗದಲ್ಲಿ ಉತ್ತಮ ತಾಂತ್ರಿಕ ಅಂಶಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸದಾಗಿ ಬಿಡುಗಡೆಯಾಗುತ್ತಿರುವ ಸಿ3 ಏರೋಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಮಧ್ಯಮ ವರ್ಗದ ಗ್ರಾಹಕರನ್ನು ಗುರಿಯಾಗಿಸಿಕೊಂಡು ಬಿಡುಗಡೆ ಮಡಲಾಗುತ್ತಿದೆ.

ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ಆರಂಭಿಸಿದ ಸಿಟ್ರನ್ ಸಿ3

ಸಿಟ್ರನ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಸ್‌ಯುವಿ, ಕಂಪ್ಯಾಕ್ಟ್ ಎಸ್‌ಯುವಿ, ಎಂಪಿವಿ ಮತ್ತು ಹ್ಯಾಚ್‌ಬ್ಯಾಕ್ ಕಾರುಗಳನ್ನು ಮಾರಾಟ ಮಾಡುವ ಯೋಜನೆಯಲ್ಲಿದ್ದು, ಎಸ್‌ಯುವಿ ಬಿಡುಗಡೆಯ ನಂತರ ಇದೀಗ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸುತ್ತಿದೆ.

ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ಆರಂಭಿಸಿದ ಸಿಟ್ರನ್ ಸಿ3

ಭಾರತದಲ್ಲಿ ಹೊಸ ಸಬ್ ಫೋರ್ ಮೀಟರ್(4 ಮೀಟರ್ ಉದ್ದಳತೆಗಿಂತಲೂ ಕಡಿಮೆ) ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಿಗೆ ಉತ್ತಮ ಬೇಡಿಕೆಯಿದ್ದು, ಸಿ21 ಕೋಡ್ ನೆಮ್ ಆಧರಿಸಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಸಿಟ್ರನ್ ಕಂಪನಿಯು ಬಿಡುಗಡೆ ಮಾಡುತ್ತಿದೆ.

ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ಆರಂಭಿಸಿದ ಸಿಟ್ರನ್ ಸಿ3

ಹೊಸ ಕಾರು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳನ್ನು ಪ್ರವೇಶಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರಿನ ಕುರಿತಾಗಿ ಮೊದಲ ಬಾರಿಗೆ ಅಧಿಕೃತ ಡಿಸೈನ್ ಕುರಿತಾದ ವಿನ್ಯಾಸವು ಬಹಿರಂಗವಾಗಿದೆ. ರೋಡ್ ಟೆಸ್ಟಿಂಗ್ ಮಾದರಿಯಲ್ಲಿನ ಬಹುತೇಕ ವಿನ್ಯಾಸವನ್ನು ಉತ್ಪಾದನಾ ಮಾದರಿಯಲ್ಲೂ ಪಡೆದುಕೊಂಡಿದ್ದು, ಹೊಸ ಕಾರು ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ಆರಂಭಿಸಿದ ಸಿಟ್ರನ್ ಸಿ3

ಸದ್ಯ ಸಿ5 ಏರ್‌ಕ್ರಾಸ್ ಬಿಡುಗಡೆಯೊಂದಿಗೆ ಭಾರತದಲ್ಲಿ ಕಾರು ಮಾರಾಟ ಮಳಿಗೆಗಳನ್ನು ವಿಸ್ತರಣೆ ಮಾಡುತ್ತಿರುವ ಸಿಟ್ರನ್ ಕಂಪನಿಯು ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಹೊತ್ತಿಗೆ ಮತ್ತಷ್ಟು ಹೊಸ ಶೋರೂಂ ತೆರೆಯುವ ಸಿದ್ದತೆಯಲ್ಲಿದ್ದು, ಹೊಸ ಕಾರುಗಳ ಅಭಿವೃದ್ದಿಗೆ ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆ ಮಾಡುವ ಗುರಿಹೊಂದಿದೆ.

ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ಆರಂಭಿಸಿದ ಸಿಟ್ರನ್ ಸಿ3

ಸಿ5 ಏರ್‌ಕ್ರಾಸ್ ಕಾರು ಮಾದರಿಯಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾತ್ರ ನೀಡಿರುವ ಸಿಟ್ರನ್ ಕಂಪನಿಯ ಹೊಸ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎರಡು ಪ್ರಮುಖ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಮಾತ್ರವೇ ಬಿಡುಗಡೆ ಮಾಡುತ್ತಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ಆರಂಭಿಸಿದ ಸಿಟ್ರನ್ ಸಿ3

ಪೂರ್ವ ನಿಗದಿಯೆಂತೆ ಸಿ5 ಏರ್‌ಕ್ರಾಸ್ ಮಾದರಿಗಾಗಿ ಮಾತ್ರವೇ ಡೀಸೆಲ್ ಎಂಜಿನ್ ಆಯ್ಕೆ ನೀಡುತ್ತಿರುವುದಾಗಿ ಹೇಳಿಕೊಂಡಿರುವ ಸಿಟ್ರನ್ ಕಂಪನಿಯು ಮುಂಬರುವ ಕಾರುಗಳಲ್ಲಿ ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಮಾದರಿಗಳನ್ನು ಮಾತ್ರ ಮಾರಾಟ ಮಾಡಲಿದೆ.

ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ಆರಂಭಿಸಿದ ಸಿಟ್ರನ್ ಸಿ3

ಬಿಡುಗಡೆಯಾಗಲಿರುವ ಸಿ3 ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಎರಡು ಗೇರ್‌ಬಾಕ್ಸ್ ಆಯ್ಕೆಗಳಿರಲಿವೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ಆರಂಭಿಸಿದ ಸಿಟ್ರನ್ ಸಿ3

ಈ ಮೂಲಕ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.12 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದ್ದು, ಹೊಸ ಕಾರು ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಉತ್ತಮ ಪೈಟೋಟಿ ನೀಡಲಿದೆ.

Most Read Articles

Kannada
English summary
Citroen C3 Aircross SUV Spotted Testing. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X