Just In
- 10 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 13 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 13 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 14 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಿಧ ಎಂಜಿನ್ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸಿದ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್ಯುವಿ
ಸಿಟ್ರನ್(Citroen) ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಸಿ3 ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಭಾರತದಲ್ಲಿ ಈಗಾಗಲೇ ಅನಾವರಣಗೊಳಿಸಿದ್ದು, ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಿರುವ ಸಿ3 ಮಾದರಿಯನ್ನು ಕಂಪನಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿದೆ.
ಸಿ5 ಏರ್ಕ್ರಾಸ್ ಬಿಡುಗಡೆಗೊಳಿಸಿದ ನಂತರ ಎಸ್ಯುವಿ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾಗಿರುವ ಸಿಟ್ರನ್, ಇದೀಗ ಎರಡನೇ ಕಾರು ಮಾದರಿಯಾಗಿ ಸಿ3 ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಬಿಡುಗಡೆಗೊಳಿಸುವ ಸಿದ್ದತೆಯಲ್ಲಿದೆ. ಮುಂದಿನ ತಿಂಗಳು ಉತ್ಪಾದನಾ ಮಾದರಿಯೊಂದಿಗೆ ಮಾರುಕಟ್ಟೆಗೆ ಪ್ರವೇಶಿಸಲಿರುವ ಹೊಸ ಕಾರು ಸದ್ಯ ನಮ್ಮ ಬೆಂಗಳೂರಿನಲ್ಲಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸುತ್ತಿದ್ದು, ಈ ತಿಂಗಳಾಂತ್ಯಕ್ಕೆ ಹೊಸ ಕಾರಿನ ಉತ್ಪಾದನೆಯು ಅಧಿಕೃತವಾಗಿ ಆರಂಭವಾಗಲಿದೆ.
ಸದ್ಯ ಐಷಾರಾಮಿ ಕಾರುಗಳ ಜೊತೆ ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲೂ ಮುಂಚೂಣಿ ಹೊಂದಿರುವ ಸಿಟ್ರನ್ ಕಂಪನಿಯು ಭಾರತೀಯ ಗ್ರಾಹಕರ ಬೇಡಿಕೆಗೆ ತಕ್ಕಂತೆ ಹೊಸ ಉತ್ಪನ್ನಗಳನ್ನು ಪರಿಚಯಿಸುತ್ತಿದ್ದು, ಸಿ3 ಕಾರು ಮಾದರಿಯು ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯ ಕಾರುಗಳ ಮಾರಾಟದಲ್ಲಿ ಗಮನಸೆಳೆಯಲಿದೆ.
ಸಿ3 ಕಂಪ್ಯಾಕ್ಟ್ ಎಸ್ಯುವಿಯು ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಸಾಕಷ್ಟು ಆಕರ್ಷಕವಾಗಿದ್ದು, ದೊಡ್ಡದಾದ ಗ್ರಿಲ್ನೊಂದಿಗೆ ಕ್ರೋಮ್ ಫಿನ್ಸಿಂಗ್ ಹೊಂದಿರುವ ಸಿಟ್ರನ್ ಲೊಗೊ, ವಿಭಜಿತವಾಗಿರುವ ಹೆಡ್ಲ್ಯಾಂಪ್, ಡಿಆರ್ಎಲ್, ಲೊಗೊಗೆ ಹೊಂದಾಣಿಕೆಯಾಗುವ ಎಕ್ಸ್ ಶೇಫ್ ಡಿಸೈನ್ ಗಮನಸೆಳೆಯುತ್ತದೆ.
ಹೊಸ ಕಾರಿನಲ್ಲಿ ಎರಡುಬದಿಯಲ್ಲೂ ಸ್ಕಫ್ ಪ್ಲೇಟ್, ಏರ್ ಪ್ಯಾಕೇಟ್ ಡಿಸೈನ್, ಅಲಾಯ್ ವ್ಹೀಲ್, ರೂಫ್ ರೈಲ್ಸ್, ಡ್ಯುಯಲ್ ಟೋನ್ ರೂಫ್, ಸ್ಪ್ಲಿಟ್ ಟೈಲ್ ಲ್ಯಾಂಪ್ ಮತ್ತು 180 ಗ್ರೌಂಡ್ ಕಿಯರೆನ್ಸ್ ಆಕರ್ಷಕವಾಗಿದೆ.
ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ ಕಂಪನಿಯು ನೀಡುವ ಸ್ಟ್ಯಾಂಡರ್ಡ್ ಬಿಡಿಭಾಗಗಗಳಿಂತಲೂ ಹೆಚ್ಚು ಆಕರ್ಷವಾಗಿರುವ ಮತ್ತು ಚಾಲನೆಗೆ ಪೂರಕವಾದ ಆಕ್ಸೆಸರಿಸ್ ಪ್ಯಾಕೇಜ್ ಸಹ ಪರಿಚಯಿಸಲಿದ್ದು, ಹೊಸ ಆಕ್ಸೆಸರಿಸ್ ಪ್ಯಾಕೇಜ್ನಲ್ಲಿ ಸುಮಾರು 78 ಆಕ್ಸೆಸರಿಸ್ಗಳನ್ನು ಒಳಗೊಂಡಿರಲಿದೆ.
ಹೊಸ ಕಾರಿನ ಕ್ಯಾಬಿನ್ ವೈಶಿಷ್ಟ್ಯತೆಯು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ 10-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಕ್ವಿಕ್ ಚಾರ್ಜಿಂಗ್ ಯುಎಸ್ಬಿ ಸಾಕೆಟ್, ಸ್ಟ್ರೀರಿಂಗ್ ಮೌಟೆಂಡ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್ನಾಲಜಿ, ಕ್ರೂಸ್ ಕಂಟ್ರೊಲ್, 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಸೌಲಭ್ಯವಿದೆ.
ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರು ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್ಗಳನ್ನು ಹೊಂದಿದ್ದು, ಹೊಸ ಕಾರು ಅತ್ಯುತ್ತಮ ಕ್ಯಾಬಿನ್ ಸ್ಥಳಾವಕಾಶದೊಂದಿಗೆ ಹಿಂಬದಿಯ ಪ್ರಯಾಣಿಕರಿಗೆ 653 ಎಂಎಂ ಲೆಗ್ರೂಂನೊಂದಿಗೆ 2 ಲೀಟರ್ ಸಾಮರ್ಥ್ಯದ ಡೋರ್ ಪ್ಯಾಕೇಟ್, ಕಪ್ ಹೋಲ್ಡರ್, ಸ್ಮಾರ್ಟ್ಫೋನ್ ಹೋಲ್ಡರ್, ಸೆಂಟರ್ ಕನ್ಸೊಲ್ ಜೊತೆಗೆ ಆರ್ಮ್ ರೆಸ್ಟ್ ಹೊಂದಿದೆ.
ಸಿ3 ಕಾರಿನ ಸ್ಪೋರ್ಟಿ ಲುಕ್ ಹೆಚ್ಚಿಸಲು ಡ್ಯುಯಲ್ ಆಕ್ಸೆಂಟ್ ನೀಡುತ್ತಿರುವ ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದ್ದು, ಹೊಸ ಕಾರು ಒಟ್ಟು ನಾಲ್ಕು ಸಿಂಗಲ್ ಮತ್ತು ಡ್ಯುಯಲ್ ಟೋನ್ ಬಣ್ಣದ ಆಯ್ಕೆ ಹೊಂದಿರಲಿವೆ.
ಹೊಸ ಕಾರು ಐಸ್ ವೈಟ್, ಪ್ಲ್ಯಾಟಿನಂ ಗ್ರೇ, ಆರ್ಟೆನ್ಸ್ ಗ್ರೇ, ಜೆಸ್ಟಿ ಆರೇಂಜ್ ಸಿಂಗಲ್ ಟೋನ್ ಬಣ್ಣಗಳೊಂದಿಗೆ ಆರ್ಟೆನ್ಸ್ ಗ್ರೇ ಮತ್ತು ಜೆಸ್ಟಿ ಆರೇಂಜ್ ರೂಫ್ ಹೊಂದಿರುವ ಎರಡು ಡ್ಯುಯಲ್ ಟೋನ್ ಮಾದರಿಗಳು ಖರೀದಿಗೆ ಲಭ್ಯವಿರಲಿದೆ.
ಸದ್ಯ ಕಾರು ಮಾದರಿಯನ್ನು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳಿಸಿರುವ ಸಿಟ್ರನ್ ಕಂಪನಿಯು ತಾಂತ್ರಿಕ ಅಂಶಗಳ ಮಾಹಿತಿಯ ಹೊರತಾಗಿಯು ಎಂಜಿನ್ ಆಯ್ಕೆಯ ಕುರಿತಾಗಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.
ಹೊಸ ಕಾರಿನ ಬಿಡುಗಡೆಯ ವೇಳೆಯಲ್ಲಿ ಎಂಜಿನ್ ಮಾಹಿತಿಯು ಲಭ್ಯವಾಗಲಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು ಫ್ಲೆಕ್ಸ್ ಫ್ಯೂಲ್ ತಂತ್ರಜ್ಞಾನ ಹೊಂದಿರುವ 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ ಎನ್ನಲಾಗಿದೆ.
ಫ್ಲೆಕ್ಸ್ ಫ್ಯೂಲ್ ಎಂಜಿನ್ ತಂತ್ರಜ್ಞಾನ ಹೊಂದಿರುವ ಹೊಸ ಕಂಪ್ಯಾಕ್ಟ್ ಎಸ್ಯುವಿಯು ಸಂಪೂರ್ಣವಾಗಿ ಎಥೆನಾಲ್ ಇಲ್ಲವೇ ಸಂಪೂರ್ಣವಾಗಿ ಪೆಟ್ರೋಲ್ ಮೂಲಕ ಸಂಚರಿಸುವಂತೆ ಅಭಿವೃದ್ದಿಪಡಿಸಲಾಗುತ್ತಿದ್ದು, ಲಭ್ಯವಿರುವ ಇಂಧನಕ್ಕೆ ಹೊಂದಾಣಿಕೆಗೊಂಡು ಎಂಜಿನ್ ಚಾಲನೆಗೊಳ್ಳುವ ಪ್ರಕ್ರಿಯೆ ಇದಾಗಿದೆ.
ಹೊಚ್ಚ ಹೊಸ ಸಿ3 ಮಾದರಿಯನ್ನು ಸಿಟ್ರನ್ ಕಂಪನಿಯ ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ಮಾರುಕಟ್ಟೆಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರು ಮಾದರಿಯು ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.8 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.13 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದೆ.
ಸಿಟ್ರನ್ ಕಂಪನಿಯು ಹೊಸ ಕಾರು ಮಾದರಿಯ ಮೂಲಕ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್ಯುವಿ300, ರೆನಾಲ್ಟ್ ಕಿಗರ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಿದ್ದು, ಹೊಸ ಕಾರಿನ ಫ್ಲೆಕ್ಸ್ ಫ್ಯೂಲ್ ತಂತ್ರಜ್ಞಾನವು ಭಾರತೀಯ ಕಾರು ಉತ್ಪಾದನೆಯಲ್ಲಿ ಹೊಸ ಅಧ್ಯಾಯ ಆರಂಭಕ್ಕೆ ಅಡಿಗಲ್ಲು ಆಗಲಿದೆ ಎನ್ನಬಹುದು.