ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾಗಿರುವ ಸಿಟ್ರನ್‌‌(Citroen) ತನ್ನ ಹೊಸ ಸಿ3(C3) ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಉತ್ಪದನಾ ಮಾದರಿಯೊಂದಿಗೆ ಅನಾವರಣಗೊಳಿಸಿದ್ದು, ಹೊಸ ಕಾರು ಮುಂಬರುವ ಕೆಲವೇ ತಿಂಗಳಿನಲ್ಲಿ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಸಿಟ್ರನ್ ಕಂಪನಿಯು ಭಾರತದಲ್ಲಿ ಮೊದಲ ಕಾರು ಮಾದರಿಯಾಗಿ ಸಿ5 ಏರ್‌ಕ್ರಾಸ್ ಬಿಡುಗಡೆಗೊಳಿಸುವ ಮೂಲಕ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಇದೀಗ ಎರಡನೇ ಕಾರು ಮಾದರಿಯಾಗಿ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಯುರೋಪ್ ಮಾರುಕಟ್ಟೆಗಳಲ್ಲಿ ಐಷಾರಾಮಿ ಕಾರುಗಳ ಜೊತೆ ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲೂ ಮುಂಚೂಣಿ ಹೊಂದಿರುವ ಸಿಟ್ರನ್ ಕಂಪನಿಯು ಭಾರತದಲ್ಲೂ ಗ್ರಾಹಕರ ಬೇಡಿಕೆಗೆ ತಕ್ಕಂತೆ ಹೊಸ ಉತ್ಪನ್ನಗಳನ್ನು ಪರಿಚಯಿಸುತ್ತಿದ್ದು, ಸಿ3 ಕಾರು ಬಿಡುಗಡೆಗೂ ಮುನ್ನ ಹೊಸ ಕಾರಿನ ಉತ್ಪದನಾ ಮಾದರಿಯನ್ನು ಅನಾವರಣಗೊಳಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿರುವ ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಸಾಕಷ್ಟು ಆಕರ್ಷಕವಾಗಿದ್ದು, ದೊಡ್ಡದಾದ ಗ್ರಿಲ್‌ನೊಂದಿಗೆ ಕ್ರೋಮ್ ಫಿನಿಂಗ್ ಹೊಂದಿರುವ ಸಿಟ್ರನ್ ಲೊಗೊ, ವಿಭಜಿತವಾಗಿರುವ ಹೆಡ್‌ಲ್ಯಾಂಪ್, ಡಿಆರ್‌ಎಲ್, ಲೊಗೊಗೆ ಹೊಂದಾಣಿಕೆಯಾಗುವ ಎಕ್ಸ್ ಶೇಫ್ ಡಿಸೈನ್ ಗಮನಸೆಳೆಯುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಇದರೊಂದಿಗೆ ಹೊಸ ಕಾರಿನಲ್ಲಿ ಎರಡುಬದಿಯಲ್ಲೂ ಸ್ಕಫ್ ಪ್ಲೇಟ್, ಎರಡು ಬದಿಯಲ್ಲಿ ಏರ್ ಪ್ಯಾಕೇಟ್ ಡಿಸೈನ್, ಅಲಾಯ್ ವ್ಹೀಲ್, ರೂಫ್ ರೈಲ್ಸ್, ಡ್ಯುಯಲ್ ಟೋನ್ ರೂಫ್, ಸ್ಪ್ಲಿಟ್ ಟೈಲ್ ಲ್ಯಾಂಪ್ ಮತ್ತು 180 ಗ್ರೌಂಡ್ ಕಿಯರೆನ್ಸ್ ಸೌಲಭ್ಯವಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ ಕಂಪನಿಯು ನೀಡುವ ಸ್ಟ್ಯಾಂಡರ್ಡ್ ಬಿಡಿಭಾಗಗಗಳಿಂತಲೂ ಹೆಚ್ಚು ಆಕರ್ಷವಾಗಿರುವ ಮತ್ತು ಚಾಲನೆಗೆ ಪೂರತವಾದ ಆಕ್ಸೆಸರಿಸ್ ಪ್ಯಾಕೇಜ್ ಸಹ ಪರಿಚಯಿಸಲಿದ್ದು, ಹೊಸ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಸುಮಾರು 78 ಆಕ್ಸೆಸರಿಸ್‌ಗಳನ್ನು ನೀಡಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹಾಗೆಯೇ ಹೊಸ ಕಾರಿನ ಕ್ಯಾಬಿನ್ ವೈಶಿಷ್ಟ್ಯತೆಯು ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ 10-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್‍‌ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಕ್ವಿಕ್ ಚಾರ್ಜಿಂಗ್ ಯುಎಸ್‌ಬಿ ಸಾಕೆಟ್, ಸ್ಟ್ರೀರಿಂಗ್ ಮೌಟೆಂಡ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್ನಾಲಜಿ, ಕ್ರೂಸ್ ಕಂಟ್ರೊಲ್, 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಸೌಲಭ್ಯವಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರು ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಹೊಂದಿದ್ದು, ಹೊಸ ಕಾರು ಅತ್ಯುತ್ತಮ ಕ್ಯಾಬಿನ್ ಸ್ಥಳಾವಕಾಶದೊಂದಿಗೆ ಹಿಂಬದಿಯ ಪ್ರಯಾಣಿಕರಿಗೆ 653 ಎಂಎಂ ಲೆಗ್‌ರೂಂನೊಂದಿಗೆ 2 ಲೀಟರ್ ಸಾಮರ್ಥ್ಯದ ಡೋರ್ ಪ್ಯಾಕೇಟ್, ಕಪ್ ಹೋಲ್ಡರ್, ಸ್ಮಾರ್ಟ್‌ಫೋನ್ ಹೋಲ್ಡರ್, ಸೆಂಟರ್ ಕನ್ಸೊಲ್ ಜೊತೆಗೆ ಆರ್ಮ್ ರೆಸ್ಟ್ ನೀಡಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಜೊತೆಗೆ ಹೊಸ ಕಾರಿನ ಸ್ಪೋರ್ಟಿ ಲುಕ್ ಹೆಚ್ಚಿಸಲು ಡ್ಯುಯಲ್ ಆಕ್ಸೆಂಟ್ ನೀಡುತ್ತಿರುವ ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದ್ದು, ಹೊಸ ಕಾರು ಒಟ್ಟು ನಾಲ್ಕು ಸಿಂಗಲ್ ಮತ್ತು ಡ್ಯುಯಲ್ ಟೋನ್ ಬಣ್ಣದ ಆಯ್ಕೆ ಹೊಂದಿರಲಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹೊಸ ಕಾರು ಐಸ್ ವೈಟ್, ಪ್ಲ್ಯಾಟಿನಂ ಗ್ರೇ, ಆರ್ಟೆನ್ಸ್ ಗ್ರೇ, ಜೆಸ್ಟಿ ಆರೇಂಜ್ ಸಿಂಗಲ್ ಟೋನ್ ಬಣ್ಣಗಳೊಂದಿಗೆ ಆರ್ಟೆನ್ಸ್ ಗ್ರೇ ಮತ್ತು ಜೆಸ್ಟಿ ಆರೇಂಜ್ ರೂಫ್ ಹೊಂದಿರುವ ಎರಡು ಡ್ಯುಯಲ್ ಟೋನ್ ಮಾದರಿಗಳು ಖರೀದಿಗೆ ಲಭ್ಯವಿರಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಸದ್ಯ ಕಾರು ಮಾದರಿಯನ್ನು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳಿಸಿರುವ ಸಿಟ್ರನ್ ಕಂಪನಿಯು ಹೊಸ ಕಾರನ್ನು 2022ರ ಆರಂಭದಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಪ್ರಮುಖ ತಾಂತ್ರಿಕ ಅಂಶಗಳ ಮಾಹಿತಿ ಹಂಚಿಕೊಂಡರು ಎಂಜಿನ್ ಆಯ್ಕೆಯ ಕುರಿತಾಗಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹೊಸ ಕಾರಿನ ಬಿಡುಗಡೆಯ ವೇಳೆಯಲ್ಲಿ ಎಂಜಿನ್ ಮಾಹಿತಿಯು ಲಭ್ಯವಾಗಲಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು 1.0-ಲೀಟರ್ ಟರ್ಬೊ ಮತ್ತು ಫ್ಲೆಕ್ಸ್ ಫ್ಯೂಲ್ ತಂತ್ರಜ್ಞಾನ ಹೊಂದಿರುವ 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಫ್ಲೆಕ್ಸ್ ಫ್ಯೂಲ್ ಎಂಜಿನ್ ತಂತ್ರಜ್ಞಾನ ಹೊಂದಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿಯು ಸಂಪೂರ್ಣವಾಗಿ ಎಥೆನಾಲ್ ಇಲ್ಲವೇ ಸಂಪೂರ್ಣವಾಗಿ ಪೆಟ್ರೋಲ್ ಮೂಲಕ ಸಂಚರಿಸುವಂತೆ ಅಭಿವೃದ್ದಿಪಡಿಸಲಾಗುತ್ತಿದ್ದು, ಲಭ್ಯವಿರುವ ಇಂಧನಕ್ಕೆ ಹೊಂದಾಣಿಕೆಗೊಂಡು ಎಂಜಿನ್ ಚಾಲನೆಗೊಳ್ಳುವ ಪ್ರಕ್ರಿಯೆ ಇದಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಸಿಟ್ರನ್ ಕಂಪನಿಯ ಹೊಸ ಕಾರನ್ನು ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ಮಾರುಕಟ್ಟೆಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.13 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ Citroen C3 ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಸಿಟ್ರನ್ ಕಂಪನಿಯು ಹೊಸ ಕಾರು ಮಾದರಿಯ ಮೂಲಕ ಸಿಟ್ರನ್ ಕಂಪನಿಯು ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300, ರೆನಾಲ್ಟ್ ಕಿಗರ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ಯೋಜನೆಯಲ್ಲಿದೆ.

Most Read Articles

Kannada
English summary
Citroen c3 compact suv unveiled in india ahead of launch design features details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X