ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಸಿಟ್ರನ್ ಸಿ5 ಏರ್‌ಕ್ರಾಸ್

ಸಿಟ್ರನ್ ಇಂಡಿಯಾ ಕಂಪನಿಯು ಕಳೆದ ತಿಂಗಳು ಲಾಕ್‌ಡೌನ್‌ಗೂ ಮುನ್ನ ತನ್ನ ಹೊಸ ಕಾರು ಮಾದರಿಯಾದ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆ ಮಾಡಿತ್ತು. ವಿತರಣೆ ಆರಂಭದ ನಂತರ ಮೊದಲ ತಿಂಗಳ ಅವಧಿಯಲ್ಲಿ 230 ಯುನಿಟ್ ಮಾರಾಟಗೊಳಿಸಿದ್ದು, ದುಬರಿ ಬೆಲೆ ನಡುವೆಯೂ ಹೊಸ ಕಾರಿಗೆ ಉತ್ತಮ ಬೇಡಿಕೆ ದಾಖಲಾಗಿದೆ.

ಉತ್ತಮ ಬೇಡಿಕೆ ಪಡೆದುಕೊಂಡ ಸಿಟ್ರನ್ ಸಿ5 ಏರ್‌ಕ್ರಾಸ್

ನಮ್ಮ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ 10 ನಗರಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರುವ ಹೊಸ ಸಿ5 ಏರ್‌ಕ್ರಾಸ್ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಐಷಾರಾಮಿ ಎಸ್‌ಯುವಿ ಮಾದರಿಯಾಗಿ ಮಾರಾಟಗೊಳ್ಳುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 29.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 31.90 ಲಕ್ಷ ಬೆಲೆ ಹೊಂದಿದೆ.

ಉತ್ತಮ ಬೇಡಿಕೆ ಪಡೆದುಕೊಂಡ ಸಿಟ್ರನ್ ಸಿ5 ಏರ್‌ಕ್ರಾಸ್

ಹೊಸ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದ್ದು, ಫೀಲ್ ಮತ್ತು ಶೈನ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಉತ್ತಮ ಬೇಡಿಕೆ ಪಡೆದುಕೊಂಡ ಸಿಟ್ರನ್ ಸಿ5 ಏರ್‌ಕ್ರಾಸ್

ಮಧ್ಯಮ ಗಾತ್ರದ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್ ಹೊಂದಿರುವ ಹೊಸ ಕಾರಿನಲ್ಲಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ತುಸು ದುಬಾರಿ ಬೆಲೆ ಎನ್ನಿಸಿದರೂ ಹಲವು ಮಾದರಿಯ ಫೀಚರ್ಸ್‌ಗಳು ಈ ಕಾರಿನಲ್ಲಿವೆ.

ಉತ್ತಮ ಬೇಡಿಕೆ ಪಡೆದುಕೊಂಡ ಸಿಟ್ರನ್ ಸಿ5 ಏರ್‌ಕ್ರಾಸ್

ಸಿ5 ಏರ್‌ಕ್ರಾಸ್ ಕಾರಿನಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಕಾರಿನ ಖದರ್‌ಗೆ ಪೂರಕವಾದ ಸರೌಂಡ್ ಬ್ಲ್ಯಾಕ್ ಕ್ಲಾಡಿಂಗ್ ಸೌಲಭ್ಯವಿದೆ.

ಉತ್ತಮ ಬೇಡಿಕೆ ಪಡೆದುಕೊಂಡ ಸಿಟ್ರನ್ ಸಿ5 ಏರ್‌ಕ್ರಾಸ್

ಹಾಗೆಯೇ ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ಎಲ್ಇಡಿ ಟೈಲ್‌ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್‌ನೊಂದಿಗೆ ಆಕರ್ಷಕ ನೋಟ ಹೊಂದಿದ್ದು, ಹೊಸ ಕಾರಿನ ಕಾರಿನ ಒಳಭಾಗವು ಕೂಡಾ ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳಿಂದ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ. ಇದರೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೊಲ್ ಜೊತೆ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಟೋಟೈನ್‌ಮೆಂಟ್ ಸೌಲಭ್ಯವಿದೆ.

ಉತ್ತಮ ಬೇಡಿಕೆ ಪಡೆದುಕೊಂಡ ಸಿಟ್ರನ್ ಸಿ5 ಏರ್‌ಕ್ರಾಸ್

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, ಏರ್ ಪ್ಯೂರಿಫೈರ್, ಪ್ರತ್ಯೇಕವಾಗಿರುವ ಆಗಿರುವ ಎಸಿ ವೆಂಟ್ಸ್ ಹೊಂದಿದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಉತ್ತಮ ಬೇಡಿಕೆ ಪಡೆದುಕೊಂಡ ಸಿಟ್ರನ್ ಸಿ5 ಏರ್‌ಕ್ರಾಸ್

ಜೊತೆಗೆ ಹೊಸ ಕಾರಿನ ಹಿಂಬದಿಯಲ್ಲಿ ಆಸನ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಆರಾಮವಾಗಿ ಕುಳಿತುಕೊಳ್ಳಬಹುದಾದ ಆಸನ ಸೌಲಭ್ಯವನ್ನು ನೀಡಿದ್ದು, ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವುದೇ ಕ್ಯಾಬಿನ್ ವಿಶಾಲವಾಗಿರಲು ಪ್ರಮುಖ ಕಾರಣವಾಗಿದೆ.

ಉತ್ತಮ ಬೇಡಿಕೆ ಪಡೆದುಕೊಂಡ ಸಿಟ್ರನ್ ಸಿ5 ಏರ್‌ಕ್ರಾಸ್

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಉತ್ತಮ ಬೇಡಿಕೆ ಪಡೆದುಕೊಂಡ ಸಿಟ್ರನ್ ಸಿ5 ಏರ್‌ಕ್ರಾಸ್

ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡಿದ್ದು, 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 177-ಬಿಎಚ್‌ಪಿ ಮತ್ತು 400ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಹ್ಯುಂಡೈ ಟ್ಯುಸಾನ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಪೈಪೋಟಿ ನೀಡುವ ತವಕದಲ್ಲಿದೆ.

Most Read Articles

Kannada
English summary
Citroen C5 Aircross Car Sales Report For April 2021. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X