ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಮಾದರಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 29.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 31.90 ಲಕ್ಷ ಬೆಲೆ ಹೊಂದಿದೆ.

ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದ್ದು, ಫೀಲ್ ಮತ್ತು ಶೈನ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ. ಫೀಲ್ ಮಾದರಿಯಲ್ಲಿ ಮೊನೊ ಟೋನ್ ಮತ್ತು ಬಿ-ಟೋನ್ ಆವೃತ್ತಿಗಳನ್ನು ಹೊಂದಿದ್ದರೆ ಶೈನ್ ಆವೃತ್ತಿಯಲ್ಲಿ ಮೊನೊ ಟೋನ್ ಮತ್ತು ಬಿ-ಟೋನ್ ಎರಡು ಆಯ್ಕೆ ಒಂದೇ ಮಾದರಿಯಲ್ಲಿವೆ.

ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಸಿಟ್ರನ್ ಕಂಪನಿಯು ಏಪ್ರಿಲ್ 6ರ ಒಳಗಾಗಿ ಹೊಸ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಹಲವಾರು ಆಫರ್‌ ಸಹ ಘೋಷಣೆ ಮಾಡಿದ್ದು, ನಿಗದಿತ ಅವಧಿಯೊಳಗೆ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಹೆಚ್ಚುವರಿಯಾಗಿ 50 ಸಾವಿರ ಕಿ.ಮೀ ಅಥವಾ 5 ವರ್ಷಗಳ ವಾರಂಟಿಯನ್ನು ಉಚಿತವಾಗಿ ನೀಡಿದೆ.

ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಇನ್ನು ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಕಾರಿನ ಖದರ್‌ಗೆ ಪೂರಕವಾದ ಸರೌಂಡ್ ಬ್ಲ್ಯಾಕ್ ಕ್ಲಾಡಿಂಗ್ ಸೌಲಭ್ಯವಿದೆ.

ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಹಾಗೆಯೇ ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ಎಲ್ಇಡಿ ಟೈಲ್‌ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್‌ನೊಂದಿಗೆ ಆಕರ್ಷಕ ನೋಟ ಹೊಂದಿದ್ದು, ಹೊಸ ಕಾರಿನ ಕಾರಿನ ಒಳಭಾಗವು ಕೂಡಾ ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳಿಂದ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ. ಇದರೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೊಲ್ ಜೊತೆ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಟೋಟೈನ್‌ಮೆಂಟ್ ಸೌಲಭ್ಯವಿದೆ.

ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, ಏರ್ ಪ್ಯೂರಿಫೈರ್, ಪ್ರತ್ಯೇಕವಾಗಿರುವ ಆಗಿರುವ ಎಸಿ ವೆಂಟ್ಸ್ ಹೊಂದಿದೆ.

ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಜೊತೆಗೆ ಹೊಸ ಕಾರಿನ ಹಿಂಬದಿಯಲ್ಲಿ ಆಸನ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಆರಾಮವಾಗಿ ಕುಳಿತುಕೊಳ್ಳಬಹುದಾದ ಆಸನ ಸೌಲಭ್ಯವನ್ನು ನೀಡಿದ್ದು, ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವುದೇ ಕ್ಯಾಬಿನ್ ವಿಶಾಲವಾಗಿರಲು ಪ್ರಮುಖ ಕಾರಣವಾಗಿದೆ.

ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದೆ.

ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಎಂಜಿನ್ ಮತ್ತು ಪರ್ಫಾಮೆನ್ಸ್

ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡಿದ್ದು, 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 177-ಬಿಎಚ್‌ಪಿ ಮತ್ತು 400ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಹ್ಯುಂಡೈ ಟ್ಯುಸಾನ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಪೈಪೋಟಿ ನೀಡುವ ತವಕದಲ್ಲಿದೆ.

ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಸಿಟ್ರನ್ ಇಂಡಿಯಾ ಕಂಪನಿಯು ಹೊಸದಾಗಿ ಕಾರು ಮಾರಾಟ ಆರಂಭದೊಂದಿಗೆ ಸದ್ಯಕ್ಕೆ ದೇಶದ ಪ್ರಮುಖ ಹತ್ತು ನಗರಗಳಲ್ಲಿ ಮಾತ್ರವೇ ಮಾರಾಟ ಪ್ರಕ್ರಿಯೆ ಚಾಲನೆ ನೀಡಿದ್ದು, ಮುಂದಿನ ಒಂದು ವರ್ಷದ ಅವಧಿಯಲ್ಲಿ ಹೊಸ ಕಾರು ಮಾರಾಟ ಮಳಿಗೆಗಳನ್ನು ದೇಶದ ಪ್ರಮುಖ ನಗರಗಳಿಗೆ ವಿಸ್ತರಿಸುವ ಸಿದ್ದತೆಯಲ್ಲಿದೆ.

Most Read Articles

Kannada
English summary
Citroen C5 Aircross launched In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X