ಅನಾವರಣಕ್ಕೂ ಮುನ್ನ ಹೊಸ ಸಿ5 ಏರ್‌ಕ್ರಾಸ್ ಕಾರಿನ ಉತ್ಪಾದನೆಗೆ ಚಾಲನೆ ನೀಡಿದ ಸಿಟ್ರನ್

ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾದ ಸಿಟ್ರನ್ ತನ್ನ ಬಹುನೀರಿಕ್ಷಿತ ಕಾರು ಮಾದರಿಯಾದ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಫೆಬ್ರುವರಿ 1ರಂದು ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರಿನ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಲಿದೆ.

ಹೊಸ ಸಿ5 ಏರ್‌ಕ್ರಾಸ್ ಕಾರಿನ ಉತ್ಪಾದನೆಗೆ ಚಾಲನೆ ನೀಡಿದ ಸಿಟ್ರನ್

ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯ ಉತ್ಪಾದನಾ ಮಾದರಿಯ ಅನಾವರಣಕ್ಕೂ ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ತಮಿಳುನಾಡಿನ ತಿರುವಲ್ಲೂರ್‌ನಲ್ಲಿರುವ ಹೊಸ ಕಾರು ಉತ್ಪಾದನಾ ಘಟಕದಲ್ಲಿ ಸಿಟ್ರನ್ ಕಾರುಗಳು ನಿರ್ಮಾಣಗೊಳ್ಳುತ್ತಿವೆ. ಫೆಬ್ರುವರಿ 1ರಂದು ಸಿ5 ಏರ್‌ಕ್ರಾಸ್ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ಹೊಸ ಕಾರಿನ ತಾಂತ್ರಿಕ ಮಾಹಿತಿ ಹಂಚಿಕೊಳ್ಳುವುದರ ಜೊತೆಗೆ ಭಾರತದಲ್ಲಿ ತನ್ನ ಭವಿಷ್ಯದ ಯೋಜನೆಗಳ ಕುರಿತಾಗಿ ಸಿಟ್ರನ್ ಕಂಪನಿಯು ಮಾಹಿತಿ ಹಂಚಿಕೊಳ್ಳಲಿದೆ.

ಹೊಸ ಸಿ5 ಏರ್‌ಕ್ರಾಸ್ ಕಾರಿನ ಉತ್ಪಾದನೆಗೆ ಚಾಲನೆ ನೀಡಿದ ಸಿಟ್ರನ್

ಯುರೋಪ್ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಭಾರತದಲ್ಲೂ ಸದ್ದು ಮಾಡಲಿದ್ದು, ಬೆಲೆ ವಿಚಾರದಲ್ಲೂ ಹೊಸ ಕಾರುಗಳು ಪ್ರತಿಸ್ಪರ್ಧಿ ಕಾರುಗಳಿಗೆ ಪೈಪೋಟಿ ನೀಡಲಿವೆ.

ಹೊಸ ಸಿ5 ಏರ್‌ಕ್ರಾಸ್ ಕಾರಿನ ಉತ್ಪಾದನೆಗೆ ಚಾಲನೆ ನೀಡಿದ ಸಿಟ್ರನ್

ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿರುವ ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಸಿ5 ಏರ್‌ಕ್ರಾಸ್ ಕಾರನ್ನು ಬಿಡುಗಡೆ ಮಾಡುವುದು ಖಚಿತವಾಗಿದೆ.

ಹೊಸ ಸಿ5 ಏರ್‌ಕ್ರಾಸ್ ಕಾರಿನ ಉತ್ಪಾದನೆಗೆ ಚಾಲನೆ ನೀಡಿದ ಸಿಟ್ರನ್

ಸಿಟ್ರನ್ ಕಂಪನಿಯು ಸಿ5 ಏರ್‌ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವು ಯೋಜನೆ ಹೊಂದಿದೆ. ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್‌ಗಳು ಯುರೋಪ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆಯುಳ್ಳ ಕಾರುಗಳಾಗಿದ್ದು, ಸಿಟ್ರನ್ ಕಂಪನಿಯು ಇದೀಗ ದೇಶಿಯ ಮಾರುಕಟ್ಟೆಯನ್ನು ಮೊದಲ ಬಾರಿಗೆ ಪ್ರವೇಶಿಸುತ್ತಿದೆ.

ಹೊಸ ಸಿ5 ಏರ್‌ಕ್ರಾಸ್ ಕಾರಿನ ಉತ್ಪಾದನೆಗೆ ಚಾಲನೆ ನೀಡಿದ ಸಿಟ್ರನ್

ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಬಿಡುಗಡೆಯ ನಂತರ ಮತ್ತೊಂದು ಬಹುನೀರಿಕ್ಷಿತ ಕಾರು ಸಿ3 ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಳ್ಳುತ್ತಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ಸಿ5 ಏರ್‌ಕ್ರಾಸ್ ಕಾರಿನ ಉತ್ಪಾದನೆಗೆ ಚಾಲನೆ ನೀಡಿದ ಸಿಟ್ರನ್

ಹೊಸ ಸಿ5 ಏರ್‌ಕ್ರಾಸ್ ಕಾರು ಮಾದರಿಯು ಹೊಸ ಎಮಿಷನ್ ಬಿಎಸ್-6 ಪ್ರೇರಿತ 2.0-ಲೀಟರ್ ಇನ್‌ಲೈನ್ ಟರ್ಬೊ ಡೀಸೆಲ್ ಎಂಜಿನ್ ಪಡೆದುಕೊಳ್ಳುವುದು ಖಚಿತವಾಗಿದ್ದು, ಹೊಸ ಎಂಜಿನ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಬಹುದಾಗಿದೆ.

ಹೊಸ ಸಿ5 ಏರ್‌ಕ್ರಾಸ್ ಕಾರಿನ ಉತ್ಪಾದನೆಗೆ ಚಾಲನೆ ನೀಡಿದ ಸಿಟ್ರನ್

ಇದರೊಂದಿಗೆ ಹೊಸ ಕಾರಿನಲ್ಲಿ ಸುರಕ್ಷತೆಯಲ್ಲೂ ಗಮನಸೆಳೆಯುವ ಹೊಸ ಕಾರು ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್, 360 ಡಿಗ್ರಿ ವ್ಯೂ ಕ್ಯಾಮೆರಾ, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಕೀ ಲೆಸ್ ಎಂಟ್ರಿ, ಸ್ಟಾರ್ಟ್/ಸ್ಟಾಪ್ ಬಟನ್, ಹಿಲ್ ಅಸಿಸ್ಟ್, ಸ್ಟ್ಯಾಬಿಲಿಟಿ ಕಂಟ್ರೋಲ್, ಪಾರ್ಕಿಂಗ್ ಅಸಿಸ್ಟ್ ಸೇರಿದಂತೆ ಆಫ್ ರೋಡ್ ಕೌಶಲ್ಯಕ್ಕಾಗಿ 4x4 ಡ್ರೈವ್ ಸಿಸ್ಟಂ ಪಡೆದುಕೊಳ್ಳುವ ಸಾಧ್ಯತೆಗಳಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಸಿ5 ಏರ್‌ಕ್ರಾಸ್ ಕಾರಿನ ಉತ್ಪಾದನೆಗೆ ಚಾಲನೆ ನೀಡಿದ ಸಿಟ್ರನ್

ಈ ಮೂಲಕ ಮಧ್ಯಮ ಕ್ರಮಾಂಕರ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಆಯ್ಕೆಯಾಗಲಿರುವ ಸಿಟ್ರನ್ ಸಿ5 ಏರ್‌ಕ್ರಾಸ್ ಮಾದರಿಯು ಜೀಪ್ ಕಂಪಾಸ್, ಸ್ಕೋಡಾ ಕರೋಕ್ ಮತ್ತು ಹ್ಯುಂಡೈ ಟಕ್ಸನ್ ಕಾರು ಮಾದರಿಗಳಿಗೆ ಪ್ರಬಲ ಪೈಪೋಟಿ ನೀಡಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.18 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 25 ಲಕ್ಷ ಬೆಲೆ ಅಂತರದಲ್ಲಿ ಖರೀದಿಗೆ ಲಭ್ಯವಿರಲಿದೆ ಎನ್ನಲಾಗಿದೆ.

Most Read Articles

Kannada
English summary
Citroen C5 Aircross Rolls Out Of Production In India. Read in Kannada.
Story first published: Thursday, January 28, 2021, 18:15 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X