Just In
- 21 min ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 27 min ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 1 hr ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- 2 hrs ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
Don't Miss!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- News ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್; ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? : ಡಿ ಕೆ ಶಿವಕುಮಾರ್ ಹೇಳಿದ್ದೇನು?
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
ಭಾರತದಲ್ಲಿ ಕಾರಣಾಂತರಗಳಿಂದ ಹೊಸ ಕಾರುಗಳ ಬಿಡುಗಡೆ ಪ್ರಕ್ರಿಯೆಯನ್ನು ವಿಳಂಬ ಮಾಡಿದ್ದ ಸಿಟ್ರನ್ ಕಂಪನಿಯು ಮುಂಬರುವ ಫೆಬ್ರುವರಿ 1ರಂದು ಮೊದಲ ಕಾರಿನ ಅನಾವರಣಕ್ಕೆ ಸಿದ್ದತೆ ನಡೆಸಿದ್ದು, ಮೊದಲ ಹಂತದಲ್ಲಿ ಬಿಡುಗಡೆಯಾಗಲಿರುವ ಸಿಟ್ರನ್ ಸಿ5 ಏರ್ಕ್ರಾಸ್ ಕಾರು ಡ್ಯುಯಲ್ ಟೋನ್ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ನಲ್ಲಿ ಕಂಡುಬಂದಿದೆ.
ಹೊಸ ಸಿ5 ಏರ್ಕ್ರಾಸ್ ಕಾರನ್ನು ಫೆಬ್ರುವರಿ 1ರಂದು ಅನಾವರಣಗೊಳಿಸಿದ ಮುಂದಿನ ಕೆಲವೇ ತಿಂಗಳಿನಲ್ಲಿ ಹೊಸ ಕಾರು ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡುವ ಯೋಜನೆಯಲ್ಲಿರುವ ಸಿಟ್ರನ್ ಕಂಪನಿಯು ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ಹೊಸ ಕಾರಿನ ತಾಂತ್ರಿಕ ಮಾಹಿತಿ ಹಂಚಿಕೊಳ್ಳುವುದರ ಜೊತೆಗೆ ಭಾರತದಲ್ಲಿ ತನ್ನ ಭವಿಷ್ಯದ ಯೋಜನೆಗಳ ಕುರಿತು ಮಾಹಿತಿ ನೀಡಲಿದೆ.
ಸಿ5 ಏರ್ಕ್ರಾಸ್ ಎಸ್ಯುವಿ ಕಾರು ಮಾದರಿಯು ಭಾರ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಹೊಸ ಕಾರು ಮುಂಬರುವ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಖರೀದಿಗೆ ಲಭ್ಯವಿರಲಿದೆ.
ಯುರೋಪ್ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಭಾರತದಲ್ಲೂ ಸದ್ದು ಮಾಡಲಿದ್ದು, ಬೆಲೆ ವಿಚಾರದಲ್ಲೂ ಹೊಸ ಕಾರುಗಳು ಗಮನಸೆಳೆಯಲಿವೆ.
ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್ಯುವಿ, ಹ್ಯಾಚ್ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿರುವ ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಸಿ5 ಏರ್ಕ್ರಾಸ್ ಕಾರನ್ನು ಬಿಡುಗಡೆ ಮಾಡುವುದು ಖಚಿತವಾಗಿದೆ. ಸಿಟ್ರನ್ ಕಂಪನಿಯು ಸಿ5 ಏರ್ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವು ಯೋಜನೆ ಹೊಂದಿದೆ.
ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್ಗಳು ಯುರೋಪ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆಯುಳ್ಳ ಕಾರುಗಳಾಗಿದ್ದು, ಸಿಟ್ರನ್ ಕಂಪನಿಯು ಇದೀಗ ದೇಶಿಯ ಮಾರುಕಟ್ಟೆಯನ್ನು ಮೊದಲ ಬಾರಿಗೆ ಪ್ರವೇಶಿಸುತ್ತಿದೆ.
ಸಿ5 ಏರ್ಕ್ರಾಸ್ ಎಸ್ಯುವಿ ಕಾರು ಬಿಡುಗಡೆಯ ನಂತರ ಮತ್ತೊಂದು ಬಹುನೀರಿಕ್ಷಿತ ಕಾರು ಸಿ3 ಕಂಪ್ಯಾಕ್ಟ್ ಎಸ್ಯುವಿ ಬಿಡುಗಡೆಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಳ್ಳುತ್ತಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್
ಹೊಸ ಸಿ5 ಏರ್ಕ್ರಾಸ್ ಕಾರು ಮಾದರಿಯು ಹೊಸ ಎಮಿಷನ್ ಬಿಎಸ್-6 ಪ್ರೇರಿತ 2.0-ಲೀಟರ್ ಇನ್ಲೈನ್ ಟರ್ಬೊ ಡೀಸೆಲ್ ಎಂಜಿನ್ ಪಡೆದುಕೊಳ್ಳುವುದು ಖಚಿತವಾಗಿದ್ದು, ಹೊಸ ಎಂಜಿನ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯನ್ನು ನೀಡಬಹುದಾಗಿದೆ.
ಇದರೊಂದಿಗೆ ಹೊಸ ಕಾರಿನಲ್ಲಿ ಸುರಕ್ಷತೆಯಲ್ಲೂ ಗಮನಸೆಳೆಯುವ ಹೊಸ ಕಾರು ಎಬಿಎಸ್ ಜೊತೆ ಇಬಿಡಿ, 6 ಏರ್ಬ್ಯಾಗ್, 360 ಡಿಗ್ರಿ ವ್ಯೂ ಕ್ಯಾಮೆರಾ, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಕೀ ಲೆಸ್ ಎಂಟ್ರಿ, ಸ್ಟಾರ್ಟ್/ಸ್ಟಾಪ್ ಬಟನ್, ಹಿಲ್ ಅಸಿಸ್ಟ್, ಸ್ಟ್ಯಾಬಿಲಿಟಿ ಕಂಟ್ರೋಲ್, ಪಾರ್ಕಿಂಗ್ ಅಸಿಸ್ಟ್ ಸೇರಿದಂತೆ ಆಫ್ ರೋಡ್ ಕೌಶಲ್ಯಕ್ಕಾಗಿ 4x4 ಡ್ರೈವ್ ಸಿಸ್ಟಂ ಪಡೆದುಕೊಳ್ಳುವ ಸಾಧ್ಯತೆಗಳಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಈ ಮೂಲಕ ಮಧ್ಯಮ ಕ್ರಮಾಂಕರ ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ಆಯ್ಕೆಯಾಗಲಿರುವ ಸಿಟ್ರನ್ ಸಿ5 ಏರ್ಕ್ರಾಸ್ ಮಾದರಿಯು ಜೀಪ್ ಕಂಪಾಸ್, ಸ್ಕೋಡಾ ಕರೋಕ್ ಮತ್ತು ಹ್ಯುಂಡೈ ಟಕ್ಸನ್ ಕಾರು ಮಾದರಿಗಳಿಗೆ ಪ್ರಬಲ ಪೈಪೋಟಿ ನೀಡಲಿದ್ದು, ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.22 ಲಕ್ಷದಿಂದ ರೂ. 25 ಲಕ್ಷ ಬೆಲೆ ಅಂತರದಲ್ಲಿ ಖರೀದಿಗೆ ಲಭ್ಯವಿರಲಿದೆ ಎನ್ನಲಾಗಿದೆ.