ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿ5 ಏರ್‌ಕ್ರಾಸ್ ಐಷಾರಾಮಿ ಎಸ್‌ಯುವಿ ಬಿಡುಗಡೆಯ ನಂತರ ಸಿಟ್ರನ್ ಕಂಪನಿಯು ತನ್ನ ಬಹುನೀರಿಕ್ಷಿತ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಸಿದ್ದತೆಯಲ್ಲಿದ್ದು, ಹೊಸ ಕಾರು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿಟ್ರನ್ ಇಂಡಿಯಾ ಕಂಪನಿಯು ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಮಧ್ಯಮ ವರ್ಗದ ಗ್ರಾಹಕರನ್ನು ಗುರಿಯಾಗಿಸಿಕೊಂಡು ಬಿಡುಗಡೆ ಮಾಡಲಾಗುತ್ತಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆ ಅಂತಿಮಗೊಳಿಸಲು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ. ಹೊಸ ಕಾರು ನಮ್ಮ ಬೆಂಗಳೂರಿನಲ್ಲೂ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದ್ದು, ಮಾಲಿನ್ಯ ನಿಯಂತ್ರಣ ಪರೀಕ್ಷೆಗಾಗಿ ಸಿಲಿಕಾನ್ ಸಿಟಿಯಲ್ಲಿ ಟೆಸ್ಟಿಂಗ್ ಡ್ರೈವ್ ಮಾಡಲಾಗುತ್ತಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿಟ್ರನ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಸ್‌ಯುವಿ, ಕಂಪ್ಯಾಕ್ಟ್ ಎಸ್‌ಯುವಿ, ಎಂಪಿವಿ ಮತ್ತು ಹ್ಯಾಚ್‌ಬ್ಯಾಕ್ ಕಾರುಗಳನ್ನು ಮಾರಾಟ ಮಾಡುವ ಯೋಜನೆಯಲ್ಲಿದ್ದು, ಎಸ್‌ಯುವಿ ಬಿಡುಗಡೆಯ ನಂತರ ಇದೀಗ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಹಂತ-ಹಂತವಾಗಿ ಪೂರ್ಣಗೊಳಿಸುತ್ತಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಭಾರತದಲ್ಲಿ ಹೊಸ ಸಬ್ ಫೋರ್ ಮೀಟರ್(4 ಮೀಟರ್ ಉದ್ದಳತೆಗಿಂತಲೂ ಕಡಿಮೆ) ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಿಗೆ ಉತ್ತಮ ಬೇಡಿಕೆಯಿದ್ದು, ಸಿ21 ಕೋಡ್ ನೆಮ್ ಆಧರಿಸಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಸಿಟ್ರನ್ ಕಂಪನಿಯು 2022ರ ಆರಂಭದಲ್ಲಿ ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳನ್ನು ಪ್ರವೇಶಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರಿನ ಕುರಿತಾದ ಅಧಿಕೃತ ಡಿಸೈನ್ ಕುರಿತಾದ ವಿನ್ಯಾಸವು ಈಗಾಗಲೇ ಬಹಿರಂಗವಾಗಿದೆ. ರೋಡ್ ಟೆಸ್ಟಿಂಗ್ ಮಾದರಿಯಲ್ಲಿನ ಬಹುತೇಕ ವಿನ್ಯಾಸವನ್ನು ಉತ್ಪಾದನಾ ಮಾದರಿಯಲ್ಲೂ ಪಡೆದುಕೊಂಡಿದ್ದು, ಹೊಸ ಕಾರು ಮುಂಬರುವ ಸಂಕ್ರಾಂತಿ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯ ಸಿ5 ಏರ್‌ಕ್ರಾಸ್ ಬಿಡುಗಡೆಯೊಂದಿಗೆ ಭಾರತದಲ್ಲಿ ಕಾರು ಮಾರಾಟ ಮಳಿಗೆಗಳನ್ನು ವಿಸ್ತರಣೆ ಮಾಡುತ್ತಿರುವ ಸಿಟ್ರನ್ ಕಂಪನಿಯು ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಹೊತ್ತಿಗೆ ಮತ್ತಷ್ಟು ಹೊಸ ಶೋರೂಂ ತೆರೆಯುವ ಸಿದ್ದತೆಯಲ್ಲಿದ್ದು, ಹೊಸ ಕಾರುಗಳ ಅಭಿವೃದ್ದಿಗೆ ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆ ಮಾಡುವ ಗುರಿಹೊಂದಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿ5 ಏರ್‌ಕ್ರಾಸ್ ಕಾರು ಮಾದರಿಯಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾತ್ರ ನೀಡಿರುವ ಸಿಟ್ರನ್ ಕಂಪನಿಯ ಹೊಸ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎರಡು ಪ್ರಮುಖ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಮಾತ್ರವೇ ಬಿಡುಗಡೆ ಮಾಡುತ್ತಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಪೂರ್ವ ನಿಗದಿಯೆಂತೆ ಸಿ5 ಏರ್‌ಕ್ರಾಸ್ ಮಾದರಿಗಾಗಿ ಮಾತ್ರವೇ ಡೀಸೆಲ್ ಎಂಜಿನ್ ಆಯ್ಕೆ ನೀಡಿರುವ ಸಿಟ್ರನ್ ಕಂಪನಿಯು ಮುಂಬರುವ ಹೊಸ ಕಾರುಗಳಲ್ಲಿ ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಮಾದರಿಗಳನ್ನು ಮಾತ್ರ ಮಾರಾಟ ಮಾಡುವುದಾಗಿ ನಿರ್ಣಯ ಪ್ರಕಟಿಸಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೀಗಾಗಿ ಬಿಡುಗಡೆಯಾಗಲಿರುವ ಸಿ3 ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಎರಡು ಗೇರ್‌ಬಾಕ್ಸ್ ಆಯ್ಕೆಗಳಿರಲಿವೆ.

ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಈ ಮೂಲಕ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.13 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದ್ದು, ಹೊಸ ಕಾರು ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಉತ್ತಮ ಪೈಟೋಟಿ ನೀಡಲಿದೆ.

Most Read Articles

Kannada
English summary
Citroen CC21 Spy Pics Bangalore Spotted Testing. Read in Kannada.
Story first published: Friday, July 30, 2021, 18:43 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X