ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ
ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಮೊದಲ ಕಾರು ಮಾದರಿಯಾದ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯನ್ನು ಏಪ್ರಿಲ್ 7ರಂದು ಬಿಡುಗಡೆ ಮಾಡುತ್ತಿದ್ದು, ಸಿ5 ಏರ್‌ಕ್ರಾಸ್ ಎಸ್‌ಯುವಿ ನಂತರ ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಕಾರು ಮಾದರಿಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಆಟೋ ಉದ್ಯಮಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿರುವ ಸಿಟ್ರನ್ ಕಂಪನಿಯು ಈಗಾಗಲೇ ಹೊಸ ಕಾರುಗಳ ಉತ್ಪಾದನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು, ಮೊದಲ ಹಂತವಾಗಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗೊಳಿಸಿದ ನಂತರ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹಲವು ಕಾರು ಆವೃತ್ತಿಗಳನ್ನು ಬಿಡುಗಡೆ ಮಾಡಲಿದೆ.

ಸಿಟ್ರನ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟಗೊಂದಿಗೆ ಯುರೋಪಿನ್ ಮಾರುಕಟ್ಟೆಯಲ್ಲಿ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿ ಗುರುತಿಸಿಕೊಂಡಿದ್ದು, ಆಟೋ ಉತ್ಪಾದನೆಯಲ್ಲಿ ಬರೋಬ್ಬರಿ 100 ವರ್ಷಗಳ ಅನುಭವವನ್ನು ಹೊಂದಿದೆ.

ಭಾರತದಲ್ಲೂ ಇದೀಗ ಸಿಟ್ರನ್ ಕಂಪನಿಯು ತನ್ನ ಮಾರಾಟ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಕಂಪನಿಯು ವಿವಿಧ ಮಾದರಿಯ ಎಸ್‌ಯುವಿ, ಕಂಪ್ಯಾಕ್ಟ್ ಎಸ್‌ಯುವಿ, ಎಂಪಿವಿ ಮತ್ತು ಹ್ಯಾಚ್‌ಬ್ಯಾಕ್ ಕಾರುಗಳನ್ನು ಮಾರಾಟ ಮಾಡುವ ಯೋಜನೆಯಲ್ಲಿದೆ.

ಸಿಟ್ರನ್ ಕಂಪನಿಯು ಸಿ5 ಏರ್‌ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವ ಯೋಜನೆ ಹೊಂದಿದೆ. ಸಿ5 ಏರ್‌ಕ್ರಾಸ್ ಎಸ್‌ಯುವಿ ನಂತರ ಸಿ21 ಸ್ಪೋರ್ಟಿ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಮೈಕ್ರೊ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡಲಿರುವ ಸಿಟ್ರನ್ ಇಂಡಿಯಾ ಕಂಪನಿಯು ಐಷಾರಾಮಿ ಜೊತೆಗೆ ಬಜೆಟ್ ಕಾರುಗಳ ಮಾರಾಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಹೊಸ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗಾಗಿ ವಿವಿಧ ಹಂತದ ಎಂಜಿನ್ ಕಾರ್ಯಕ್ಷಮತೆಯ ಪರೀಕ್ಷೆಗಳನ್ನು ಕೈಗೊಂಡಿದ್ದು, ಮೊದಲ ಬಾರಿಗೆ ಸಿ21 ಕೋಡ್ ನೆಮ್ ಆಧರಿಸಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಮುಂಬರುವ ದೀಪಾವಳಿ ಹೊತ್ತಿಗೆ ಬಿಡುಗಡೆಯಾಗುವ ಸಿದ್ದತೆಯಲ್ಲಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಎರಡು ಪ್ರಮುಖ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಬಿಡುಗಡೆ ಮಾಡುತ್ತಿರುವ ಸಿ5 ಏರ್‌ಕ್ರಾಸ್ ಕಾರು ಮಾದರಿಯಲ್ಲಿ ಮಾತ್ರವೇ ಡೀಸೆಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಮುಂಬರುವ ಹೊಸ ಕಾರುಗಳಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಮಾತ್ರ ನೀಡುವ ಯೋಜನೆ ಹೊಂದಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸಿಟ್ರನ್ ಹೊಸ ಕಾರುಗಳಲ್ಲಿ ಸದ್ಯ ಬಿಡುಗಡೆಯಾಗುತ್ತಿರುವ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 23 ಲಕ್ಷದಿಂದ ರೂ. 26 ಲಕ್ಷ ಬೆಲೆ ಹೊಂದಲಿದ್ದರೆ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.12 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.
Image Courtesy: Power Stroke PS


Click it and Unblock the Notifications








