ಭಾರತದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ಸಿಟ್ರನ್

ಫ್ರೆಂಚ್ ಕಾರು ತಯಾರಕ ಕಂಪನಿಯಾದ ಸಿಟ್ರನ್ ಈ ತಿಂಗಳ ಆರಂಭದಲ್ಲಿ ತನ್ನ ಸಿ5 ಏರ್‌ಕ್ರಾಸ್ ಎಸ್‍ಯುವಿಯೊಂದಿಗೆ ಭಾರತೀಯ ಮಾರುಕಟ್ಟೆಗೆ ಪ್ರವೇಶಿಸಿದರು. ಸಿಟ್ರನ್ ಕಂಪನಿಯು ಭಾರತದಲ್ಲಿ ತನ್ನ ಸರಣಿಯನ್ನು ಮತ್ತಷ್ಟು ವಿಸ್ತರಿಸುವ ಯೋಜನೆಯನ್ನು ರೂಪಿಸುತ್ತಿದೆ.

ಭಾರತದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ಸಿಟ್ರನ್

ಈ ಸಿಟ್ರನ್ ಕಂಪನಿಯು ಭಾರತೀಯ ಮಾರುಕಟ್ಟೆಗೆ ಎರಡು ಹೊಸ ವಾಹನಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕೆಲವೇ ದಿನಗಳ ಹಿಂದೆ ಭಾರತದಲ್ಲಿ ಬ್ರ್ಯಾಂಡ್‌ನ ಮೊದಲ ಸಿ5 ಏರ್‌ಕ್ರಾಸ್ ಎಸ್‍ಯುವಿ ವಿತರಣೆಯನ್ನು ಪ್ರಾರಂಭಿಸಿದ್ದಾರೆ. ಇದರ ನಡುವೆ ಭಾರತೀಯ ಮಾರುಕಟ್ಟೆಗಾಗಿ ಸಿಟ್ರನ್ ಸದ್ದಿಲ್ಲದೆ ಭಾರತೀಯ ಮಾರುಕಟ್ಟೆಗೆ ಎರಡು ಹೊಸ ಕಾರುಗಳನ್ನು ಅಭಿವೃದ್ಧಿಪಡಿಸುದರಲ್ಲಿ ನಿರತರಾಗಿದ್ದಾರೆ. ಇದು ಸಿಸಿ21 ಮತ್ತು ಸಿಸಿ21ಎಕ್ಸ್ ಎಂಬ ಕೋಡ್ ನೇಮ್ ಈ ಎರಡು ಕಾರುಗಳು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ಸಿಟ್ರನ್

ಸಿಸಿ21 ಹ್ಯಾಚ್‌ಬ್ಯಾಕ್ ಆಗಿದ್ದರೆ ಸಿಸಿ21ಎಕ್ಸ್ ಕ್ರಾಸ್‌ಒವರ್ ಮಾದಯಾಗಿದೆ. ಸಿಟ್ರನ್ ಆರಂಭದಲ್ಲಿ ತನ್ನ ಮೊದಲ ವಾಹನವಾಗಿ ಪ್ರೀಮಿಯಂ ಸಿ5 ಏರ್‌ಕ್ರಾಸ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತ್ತು. ಇದರಿಂದ ಭಾರತದಲ್ಲಿ ಬ್ರಾಂಡ್‌ನ ಪ್ರೀಮಿಯಂ ಇಮೇಜ್ ಅನ್ನು ಸುಧಾರಿಸುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ಸಿಟ್ರನ್

ಅಲ್ಲದೇ ಸಿ5 ಏರ್‌ಕ್ರಾಸ್ ಎಸ್‍ಯುವಿಯು ಸಿಟ್ರನ್ ಕಂಪನಿಯ ಅತ್ಯುತ್ತಮ ಮಾದರಿಯಾಗಿದೆ. ಇದನ್ನು ಮೊದಲ ಬಿಡುಗಡೆಗೊಳಿಸಿ ತಮ್ಮ ಬಳಿ ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿರುವ ಕಾರುಗಳನ್ನು ಹೊಂದಿವೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಭಾರತದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ಸಿಟ್ರನ್

ಸಿಟ್ರನ್ ಚಮತ್ಕಾರಿ ವಿನ್ಯಾಸಗಳಿಗೆ ಹೆಸರುವಾಸಿಯಾಗಿರುವುದರಿಂದ, ಸಿಸಿ21 ಮತ್ತು ಸಿಸಿ21ಎಕ್ಸ್ ಎಂಬ ಹೊಸ ಕಾರುಗಳು ಆಕರ್ಷಕ ವಿನ್ಯಾಸವನ್ನು ಹೊಂದಿರುತ್ತದೆ. ಇದರೊಂದಿಗೆ ಅತ್ಯಾಧುನಿಕ ಪೀಚರ್ಸ್ ಗಳು ಮತ್ತು ತಂತ್ರಜ್ಙಾನಗಳನ್ನು ಒಳಗೊಂಡಿರುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಭಾರತದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ಸಿಟ್ರನ್

ಇನ್ನು ಈ ಕಾರುಗಳ ಒಳಭಾಗದಲ್ಲಿ ಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಇದರೊಂದಿಗೆ ಕನೆಕ್ಟಿವಿಟಿ ಫೀಚರ್ಸ್ ಗಳನ್ನು ಹೊಂದಿರಲಿದೆ. ಇದರೊಂದಿಗೆ ಇತರ ಅತ್ಯಾಧುನಿಕ ತಂತ್ರಜ್ಙಾನಗಳನ್ನು ಕೂಡ ಒಳಗೊಂಡಿರುತ್ತದೆ.

ಭಾರತದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ಸಿಟ್ರನ್

ಸಿಸಿ21 ಮತ್ತು ಸಿಸಿ21ಎಕ್ಸ್ ಕಾರುಗಳು ಸಿ5 ಏರ್‌ಕ್ರಾಸ್ ಎಸ್‍ಯುವಿಯಂತೆ ಉತ್ತಮ ಸಸ್ಪೆಂಕ್ಷನ್ ಅನ್ನು ಹೊಂದಿರುತ್ತದೆ. ಏಕೆಂದರೆ ಸಿಟ್ರನ್ ಕಾರುಗಳು ಉತ್ತಮ ಸಸ್ಪೆಂಕ್ಷನ್ ಸೆಟಪ್ ನಿಂದ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ. ಇದರಿಂದ ಸಿಟ್ರನ್ ಕಾರುಗಳು ಉತ್ತಮ ಕಂಫರ್ಟ್ ಅನ್ನು ಹೊಂದಿರುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಭಾರತದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ಸಿಟ್ರನ್

ಹೊಸ ಹ್ಯಾಚ್‌ಬ್ಯಾಕ್ ಮತ್ತು ಕ್ರಾಸ್‌ಒವರ್ ಮಾದರಿಗಳಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿರುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗುತ್ತದೆ.

ಭಾರತದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ಸಿಟ್ರನ್

ಆದರೆ ಸಿಟ್ರನ್ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸಲಿರುವ ಹ್ಯಾಚ್‌ಬ್ಯಾಕ್ ಮತ್ತು ಕ್ರಾಸ್‌ಒವರ್ ಮಾದರಿಗಳ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ. ಈ ಕಾರುಗಳ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಮುಂದಿನ ದಿನಗಳಲ್ಲಿ ಬಹಿರಂಗಪಡಿಸಬಹುದು.

ಭಾರತದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ಸಿಟ್ರನ್

ಭಾರತೀಯ ಮಾರುಕಟ್ಟೆಗೆ ಇದು ಹೊಸ ಬ್ರ್ಯಾಂಡ್ ಆಗಿದೆ. ಭಾರತದ ಗ್ರಾಹಕರಿಗೆ ಇದು ಅಷ್ಟು ಚಿರಪರಿಚಿತವಲ್ಲದ ಬ್ರ್ಯಾಂಡ್ ಆಗಿದೆ. ಆದರೆ ಯುರೋಪ್ ಮಾರುಕಟ್ಟೆಗಳಲ್ಲಿ ಜನಪ್ರಿಯ ಬ್ರ್ಯಾಂಡ್ ಆಗಿದೆ. ಭಾರತೀಯ ಮಾರುಕಟ್ಟೆಯಲ್ಲಿಯು ತನ್ನ ಸರಣಿಯನ್ನು ವಿಸ್ತರಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಬಜೆಟ್ ಆಧಾರಿತ ಕಾರುಗಳನ್ನು ಭಾರತದಲ್ಲಿ ಸಿಟ್ರನ್ ಕಂಪನಿಯು ಬಿಡುಗಡೆಗೊಳಿಸಬಹುದು.

Most Read Articles

Kannada
English summary
Citroen CC21 Hatchback & CC21X Crossover Being Developed For Indian Market. Read In Kannada.
Story first published: Friday, April 30, 2021, 9:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X