ಸಿ5 ಏರ್‌ಕ್ರಾಸ್ ಬಿಡುಗಡೆಗೂ ಮುನ್ನ ಆರು ಹೊಸ ನಗರಗಳಲ್ಲಿ ಕಾರ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಸಿ5 ಏರ್‌ಕ್ರಾಸ್ ಮಾದರಿಯೊಂದಿಗೆ ದೇಶಿಯ ಮಾರುಕಟ್ಟೆಯನ್ನು ಅಧಿಕೃತವಾಗಿ ಪ್ರವೇಶಿಸುತ್ತಿದ್ದು, ಹೊಸ ಎಸ್‌ಯುವಿ ಕಾರು ಬಿಡುಗಡೆಗೂ ಮುನ್ನ ದೇಶದ ಪ್ರಮುಖ ಮಾಹಾನಗರಗಳಲ್ಲಿ ತನ್ನ ಕಾರು ಮಾರಾಟ ಮಳಿಗೆ ಜಾಲವನ್ನು ವಿಸ್ತರಿಸುತ್ತಿದೆ.

ಆರು ಹೊಸ ನಗರಗಳಲ್ಲಿ ಕಾರ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಹೊಸ ಸಿ5 ಏರ್‌‌ಕ್ರಾಸ್ ಬಿಡುಗಡೆಗೂ ಮುನ್ನ ದೇಶಾದ್ಯಂತ ಪ್ರಮುಖ 10 ನಗರಗಳಲ್ಲಿ ಹತ್ತಕ್ಕೂ ಹೆಚ್ಚು ಕಾರು ಮಾರಾಟಗಳಿಗೆ ಚಾಲನೆ ನೀಡುವುದಾಗಿ ಹೇಳಿಕೊಂಡಿರುವ ಸಿಟ್ರನ್ ಈಗಾಗಲೇ ಆರು ಪ್ರಮುಖ ಮೆಟ್ರೊ ಸಿಟಿಗಳಲ್ಲಿ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ್ದು, ಇತ್ತೀಚೆಗೆ ಆರನೇ ಕಾರು ಮಾರಾಟ ಮಳಿಗೆಯನ್ನು ಕೇರಳದ ಕೊಚ್ಚಿ ನಗರದಲ್ಲೂ ಅಧಿಕೃತವಾಗಿ ಆರಂಭಿಸಿತು.

ಆರು ಹೊಸ ನಗರಗಳಲ್ಲಿ ಕಾರ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಬೆಂಗಳೂರು, ದೆಹಲಿ, ಅಹಮದಾಬಾದ್‌, ಚೆನ್ನೈ, ಹೈದ್ರಾಬಾದ್ ಮತ್ತು ಕೊಚ್ಚಿ ನಗರಗಳಲ್ಲಿ ಸಿಟ್ರನ್ ಹೊಸ ಮಾರಾಟ ಮಳಿಗೆಗಳು ಆರಂಭವಾಗಿದ್ದು, ಮುಂದಿನ ತಿಂಗಳು 7ರಂದು ಸಿ5 ಏರ್‌ಕ್ರಾಸ್ ಬಿಡುಗಡೆಯ ಹೊತ್ತಿಗೆ ಒಟ್ಟು ಹತ್ತು ನಗರಗಳಲ್ಲಿ ಹೊಸ ಮಾರಾಟ ಮಳಿಗೆಗಳು ಕಾರ್ಯನಿರ್ವಹಿಸಲು ಸಿದ್ದವಾಗುತ್ತಿವೆ.

ಆರು ಹೊಸ ನಗರಗಳಲ್ಲಿ ಕಾರ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಸಿಟ್ರನ್ ಹೊಸ ಕಾರು ಮಾರಾಟ ಮಳಿಗೆಗಳನ್ನು ಕಂಪನಿಯು ಲಾ ಮೇಸನ್(ಸಿಟ್ರನ್ ಮನೆ) ಹೆಸರಿನಲ್ಲಿ ವಿಭಿನ್ನ ಶೈಲಿಯ ಮಾರಾಟ ಸೌಲಭ್ಯವನ್ನು ಅಳವಡಿಸಿಕೊಳ್ಳುತ್ತಿದ್ದು, ಏಪ್ರಿಲ್ 6ರ ಒಳಗಾಗಿ ಹೊಸ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಹಲವಾರು ಆಫರ್‌ಗಳನ್ನು ನೀಡಿದೆ.

ಆರು ಹೊಸ ನಗರಗಳಲ್ಲಿ ಕಾರ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಹೊಸ ಕಾರು ಬಿಡುಗಡೆಗೂ ಮುನ್ನ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಸಿಟ್ರನ್ ಕಂಪನಿಯು ಸ್ಟ್ಯಾಂಡರ್ಡ್ ವಾರಂಟಿ ಜೊತೆಗೆ ಹೆಚ್ಚುವರಿಯಾಗಿ 50 ಸಾವಿರ ಕಿ.ಮೀ ಅಥವಾ 5 ವರ್ಷಗಳ ಹೆಚ್ಚುವರಿ ವಾರಂಟಿಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದ್ದು, ಗ್ರಾಹರಕನ್ನು ಆಕರ್ಷಿಸಲು ಹೆಚ್ಚುವರಿ ವಾರಂಟಿ ಪ್ಯಾಕೇಜ್ ನೀಡಲಾಗುತ್ತಿದೆ. ಇನ್ನು ಸಿ5 ಏರ್‌ಕ್ರಾಸ್ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಫೀಲ್ ಮತ್ತು ಶೈನ್ ಎನ್ನುವ ಪ್ರಮುಖ ವೆರಿಯೆಂಟ್‌ಗಳೊಂದಿಗೆ ಲಭ್ಯವಿರಲಿದೆ.

ಆರು ಹೊಸ ನಗರಗಳಲ್ಲಿ ಕಾರ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಕಾರಿನ ಖದರ್‌ಗೆ ಪೂರಕವಾದ ಸರೌಂಡ್ ಬ್ಲ್ಯಾಕ್ ಕ್ಲಾಡಿಂಗ್ ಸೌಲಭ್ಯವಿದೆ.

ಆರು ಹೊಸ ನಗರಗಳಲ್ಲಿ ಕಾರ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಹಾಗೆಯೇ ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ಎಲ್ಇಡಿ ಟೈಲ್‌ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್‌ನೊಂದಿಗೆ ಆಕರ್ಷಕ ನೋಟ ಹೊಂದಿದ್ದು, ಹೊಸ ಕಾರಿನ ಕಾರಿನ ಒಳಭಾಗವು ಕೂಡಾ ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳಿಂದ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ.

ಆರು ಹೊಸ ನಗರಗಳಲ್ಲಿ ಕಾರ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಇದರೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೊಲ್ ಜೊತೆ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಟೋಟೈನ್‌ಮೆಂಟ್ ಸೌಲಭ್ಯವಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಆರು ಹೊಸ ನಗರಗಳಲ್ಲಿ ಕಾರ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, ಏರ್ ಪ್ಯೂರಿಫೈರ್, ಪ್ರತ್ಯೇಕವಾಗಿರುವ ಆಗಿರುವ ಎಸಿ ವೆಂಟ್ಸ್ ಹೊಂದಿದೆ.

ಆರು ಹೊಸ ನಗರಗಳಲ್ಲಿ ಕಾರ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಜೊತೆಗೆ ಹೊಸ ಕಾರಿನ ಹಿಂಬದಿಯಲ್ಲಿ ಆಸನ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಆರಾಮವಾಗಿ ಕುಳಿತುಕೊಳ್ಳಬಹುದಾದ ಆಸನ ಸೌಲಭ್ಯವನ್ನು ನೀಡಿದ್ದು, ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವುದೇ ಕ್ಯಾಬಿನ್ ವಿಶಾಲವಾಗಿರಲು ಪ್ರಮುಖ ಕಾರಣವಾಗಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಆರು ಹೊಸ ನಗರಗಳಲ್ಲಿ ಕಾರ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದೆ. ಕಂಪನಿಯು ಹೊಸ ಕಾರಿನಲ್ಲಿ 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 25 ಲಕ್ಷದಿಂದ ರೂ. 28 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

More from DriveSpark

Article Published On: Monday, March 22, 2021, 9:15 [IST]
English summary
Citroen Expanded Its Dealer Range In Six New Cities. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+