ಹೊಸ ಕಾರು ಬಿಡುಗಡೆಗೂ ಮುನ್ನ ದೇಶದ ಪ್ರಮುಖ ನಗರಗಳಲ್ಲಿ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಸಿಟ್ರನ್

ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾಗಿರುವ ಸಿಟ್ರನ್ ಇದೇ ತಿಂಗಳಾಂತ್ಯಕ್ಕೆ ತನ್ನ ಹೊಸ ಕಾರು ಮಾದರಿಯಾದ ಸಿ5 ಏರ್‌ಕ್ರಾಸ್ ಮಾದರಿಯೊಂದಿಗೆ ದೇಶಿಯ ಮಾರುಕಟ್ಟೆಯನ್ನು ಅಧಿಕೃತವಾಗಿ ಪ್ರವೇಶಿಸುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ದೇಶದ ಪ್ರಮುಖ ಮಾಹಾನಗರಗಳಲ್ಲಿ ತನ್ನ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದೆ.

ಪ್ರಮುಖ ನಗರಗಳಲ್ಲಿ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಸಿಟ್ರನ್

ಸಿಟ್ರನ್ ಕಂಪನಿಯು ದೇಶಾದ್ಯಂತ ಪ್ರಮುಖ 10 ನಗರಗಳಲ್ಲಿ ಮೊದಲ ಹಂತದಲ್ಲಿ ಕಾರು ಮಾರಾಟವನ್ನು ಆರಂಭಿಸುತ್ತಿದ್ದು, ಸಿ5 ಏರ್‌ಕ್ರಾಸ್ ಬಿಡುಗಡೆಯ ನಂತರ ಗ್ರಾಹಕರ ಬೇಡಿಕೆಯೆಂತೆ ಕಾರು ಮಾರಾಟ ಮಳಿಗೆಗಳನ್ನು ವಿವಿಧ ನಗರಗಳಿಗೆ ವಿಸ್ತರಿಸುವ ಯೋಜನೆ ಹೊಂದಿದೆ. ಸಿಟ್ರನ್ ಕಂಪನಿಯು ಮೊದಲ ಕಾರು ಮಾರಾಟ ಮಳಿಗೆಯನ್ನು ಈಗಾಗಲೇ ಅಹಮದಾಬಾದ್‌ನಲ್ಲಿಆರಂಭಿಸಿದ್ದು, ಶೀಘ್ರದಲ್ಲೇ ಬೆಂಗಳೂರು ಸೇರಿದಂತೆ ಪ್ರಮುಖ ಹತ್ತು ನಗರಗಳಲ್ಲಿ ಮುಂದಿನ ಕೆಲವೇ ವಾರಗಳಲ್ಲಿ ಹೊಸ ಕಾರು ಮಾರಾಟ ಮಳಿಗೆಗಳು ಆರಂಭವಾಗಲಿವೆ.

ಪ್ರಮುಖ ನಗರಗಳಲ್ಲಿ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಸಿಟ್ರನ್

ಸಿಟ್ರನ್ ಕಂಪನಿಯು ಫ್ರೆಂಚ್ ಶೈಲಿಯ ಕಾರು ಮಾರಾಟ ಮಳಿಗೆಗಳನ್ನು ಭಾರತದಲ್ಲೂ ಪರಿಚಯಿಸುತ್ತಿದ್ದು, ಹೊಸ ಕಾರು ಮಾರಾಟ ಮಳಿಗೆಗಳನ್ನು ಲಾ ಮೇಸನ್(ಸಿಟ್ರನ್ ಮನೆ) ಹೆಸರಿಸುವ ಮೂಲಕ ವಿಭಿನ್ನ ಶೈಲಿಯ ಮಾರಾಟ ಸೌಲಭ್ಯವನ್ನು ಅಳವಡಿಸಿಕೊಳ್ಳುತ್ತಿದೆ.

ಪ್ರಮುಖ ನಗರಗಳಲ್ಲಿ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಸಿಟ್ರನ್

ನಮ್ಮ ಬೆಂಗಳೂರಿನಲ್ಲಿ ಪಿಪಿಎಸ್‌ ಮೋಟಾರ್ಸ್ ಜೊತೆಗೂಡಿರುವ ಸಿಟ್ರನ್ ಕಂಪನಿಯು ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಹೊಸ ಕಾರು ಮಾರಾಟ ಮಳಿಗೆಗಳನ್ನು ತೆರೆಯುತ್ತಿದ್ದು, ಕರ್ನಾಟಕದಲ್ಲಿ ಅತಿ ದೊಡ್ಡ ಕಾರು ಮಾರಾಟ ಮಳಿಗೆಗಳ ಜಾಲ ಹೊಂದಿರುವ ಪಿಪಿಎಸ್ ಮೋಟಾರ್ಸ್ ಕಂಪನಿಯು ಫ್ರೆಂಚ್ ಮೂಲದ ಹೊಸ ಕಾರು ಮಾರಾಟ ಕಂಪನಿಗೆ ಉತ್ತಮ ಮಾರುಕಟ್ಟೆ ಒದಗಿಸುವ ವಿಶ್ವಾಸ ವ್ಯಕ್ತಪಡಿಸಿದೆ.

ಪ್ರಮುಖ ನಗರಗಳಲ್ಲಿ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಸಿಟ್ರನ್

ಇನ್ನು ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಕಾರಿನ ಖದರ್‌ಗೆ ಪೂರಕವಾದ ಸರೌಂಡ್ ಬ್ಲ್ಯಾಕ್ ಕ್ಲಾಡಿಂಗ್ ಸೌಲಭ್ಯ ಹೊಂದಿದೆ.

ಪ್ರಮುಖ ನಗರಗಳಲ್ಲಿ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಸಿಟ್ರನ್

ಹಾಗೆಯೇ ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ಎಲ್ಇಡಿ ಟೈಲ್‌ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್‌ನೊಂದಿಗೆ ಆಕರ್ಷಕ ನೋಟ ಹೊಂದಿದ್ದು, ಹೊಸ ಕಾರಿನ ಕಾರಿನ ಒಳಭಾಗವು ಕೂಡಾ ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳಿಂದ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ. ಇದರೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೊಲ್ ಜೊತೆ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಟೋಟೈನ್‌ಮೆಂಟ್ ಸೌಲಭ್ಯವಿದೆ.

ಪ್ರಮುಖ ನಗರಗಳಲ್ಲಿ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಸಿಟ್ರನ್

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, ಏರ್ ಪ್ಯೂರಿಫೈರ್, ಪ್ರತ್ಯೇಕವಾಗಿರುವ ಆಗಿರುವ ಎಸಿ ವೆಂಟ್ಸ್ ಹೊಂದಿದೆ.

ಪ್ರಮುಖ ನಗರಗಳಲ್ಲಿ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಸಿಟ್ರನ್

ಜೊತೆಗೆ ಹೊಸ ಕಾರಿನ ಹಿಂಬದಿಯಲ್ಲಿ ಆಸನ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಆರಾಮವಾಗಿ ಕುಳಿತುಕೊಳ್ಳಬಹುದಾದ ಆಸನ ಸೌಲಭ್ಯವನ್ನು ನೀಡಿದ್ದು, ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವುದೇ ಕ್ಯಾಬಿನ್ ವಿಶಾಲವಾಗಿರಲು ಪ್ರಮುಖ ಕಾರಣವಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಪ್ರಮುಖ ನಗರಗಳಲ್ಲಿ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಸಿಟ್ರನ್

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದ್ದು, ಹೊಸ ಕಾರು ಫೀಲ್ ಮತ್ತು ಶೈನ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿ ಲಭ್ಯವಾಗಲಿದೆ.

ಪ್ರಮುಖ ನಗರಗಳಲ್ಲಿ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಸಿಟ್ರನ್

ಎಂಜಿನ್ ಮತ್ತು ಪರ್ಫಾಮೆನ್ಸ್

ಸಿ5 ಏರ್‌ಕ್ರಾಸ್ ಕಾರಿನಲ್ಲಿ ಸಿಟ್ರನ್ ಕಂಪನಿಯು 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡುತ್ತಿದ್ದು, ಹೊಸ ಎಂಜಿನ್ ಮಾದರಿಯು 8 ಸ್ಟೀಡ್ ಆಟೋಮ್ಯಾಟಿಕ್ ಸ್ಟ್ಯಾಂಡರ್ಡ್ ಗೇರ್‌ಬಾಕ್ಸ್‌ನೊಂದಿಗೆ 175-ಬಿಎಚ್‌ಪಿ ಮತ್ತು 400 ಎನ್ಎಂ ಉತ್ಪಾದಿಸುವ ಮೂಲಕ ಪ್ರತಿ ಲೀಟರ್‌ಗೆ 18.06 ಕಿಮೀ ಮೈಲೇಜ್ ಹಿಂದಿರುಗಿಸುವುದಾಗಿ ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಪ್ರಮುಖ ನಗರಗಳಲ್ಲಿ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಸಿಟ್ರನ್

ಈ ಮೂಲಕ ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾದರಿಗಳಾದ ಹ್ಯುಂಡೈ ಟ್ಯುಸಾನ್, ಸ್ಕೋಡಾ ಕರೋಕ್, ಫೋಕ್ಸ್‌ವ್ಯಾಗನ್ ಟಿ ರಾಕ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 25 ಲಕ್ಷದಿಂದ ರೂ. 28 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

More from DriveSpark

Article Published On: Monday, February 15, 2021, 11:18 [IST]
English summary
Citroen India Dealership Location Details Revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+