ಸಿ5 ಏರ್‌ಕ್ರಾಸ್ ಬಿಡುಗಡೆಗೂ ಮುನ್ನ ಹೊಸ ಕಾರ್ ಡಿಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಸಿಟ್ರನ್ ಕಂಪನಿಯು ತನ್ನ ಹೊಚ್ಚ ಹೊಸ ಸಿ5 ಏರ್‌ಕ್ರಾಸ್ ಮಾದರಿಯೊಂದಿಗೆ ದೇಶಿಯ ಮಾರುಕಟ್ಟೆಯನ್ನು ಅಧಿಕೃತವಾಗಿ ಪ್ರವೇಶಿಸುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ದೇಶದ ಪ್ರಮುಖ ಮಾಹಾನಗರಗಳಲ್ಲಿ ತನ್ನ ಹೊಸ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡುತ್ತಿದೆ.

ಸಿ5 ಏರ್‌ಕ್ರಾಸ್ ಬಿಡುಗಡೆಗೂ ಮುನ್ನ ಹೊಸ ಕಾರ್ ಡಿಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಸಿಟ್ರನ್ ಕಂಪನಿಯು ದೇಶಾದ್ಯಂತ ಪ್ರಮುಖ 10 ನಗರಗಳಲ್ಲಿ ಮೊದಲ ಹಂತದಲ್ಲಿ ಹತ್ತಕ್ಕೂ ಹೆಚ್ಚು ಕಾರು ಮಾರಾಟಗಳಿಗೆ ಚಾಲನೆ ನೀಡುತ್ತಿದ್ದು, ಹೊಸ ಕಾರು ಬಿಡುಗಡೆಯ ನಂತರ ಗ್ರಾಹಕರ ಬೇಡಿಕೆಯೆಂತೆ ಕಾರು ಮಾರಾಟ ಮಳಿಗೆಗಳನ್ನು ವಿವಿಧ ನಗರಗಳಿಗೂ ವಿಸ್ತರಿಸುವ ಯೋಜನೆ ಹೊಂದಿದೆ. ಸಿಟ್ರನ್ ಕಂಪನಿಯು ಮೊದಲ ಕಾರು ಮಾರಾಟ ಮಳಿಗೆಯನ್ನು ಈಗಾಗಲೇ ಅಹಮದಾಬಾದ್‌ನಲ್ಲಿ ಆರಂಭಿಸಿದ್ದು, ಇಂದು ಎರಡನೇ ಕಾರು ಮಾರಾಟ ಮಳಿಗೆಯನ್ನು ಚೆನ್ನೈನಲ್ಲಿ ಆರಂಭಿಸಲಾಯ್ತು.

ಸಿ5 ಏರ್‌ಕ್ರಾಸ್ ಬಿಡುಗಡೆಗೂ ಮುನ್ನ ಹೊಸ ಕಾರ್ ಡಿಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಶೀಘ್ರದಲ್ಲೇ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಮುಂದಿನ ಕೆಲವೇ ವಾರಗಳಲ್ಲಿ ಹೊಸ ಕಾರು ಮಾರಾಟ ಮಳಿಗೆಗಳು ಅಧಿಕೃತವಾಗಿ ಚಾಲನೆ ಪಡೆದುಕೊಳ್ಳಲಿದ್ದು, ನಮ್ಮ ಬೆಂಗಳೂರಿನಲ್ಲಿ ಪಿಪಿಎಸ್‌ ಮೋಟಾರ್ಸ್ ಜೊತೆಗೂಡಿ ಹೊಸ ಕಾರು ಮಾರಾಟ ಮಳಿಗೆಯನ್ನು ನಿರ್ಮಾಣ ಮಾಡುತ್ತಿದೆ.

ಸಿ5 ಏರ್‌ಕ್ರಾಸ್ ಬಿಡುಗಡೆಗೂ ಮುನ್ನ ಹೊಸ ಕಾರ್ ಡಿಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಸಿಟ್ರನ್ ಕಂಪನಿಯು ಫ್ರೆಂಚ್ ಶೈಲಿಯಲ್ಲಿ ತನ್ನ ಕಾರು ಮಾರಾಟ ಮಳಿಗೆಗಳನ್ನು ಭಾರತದಲ್ಲೂ ಪರಿಚಯಿಸಿದ್ದು, ಹೊಸ ಕಾರು ಮಾರಾಟ ಮಳಿಗೆಗಳನ್ನು ಲಾ ಮೇಸನ್(ಸಿಟ್ರನ್ ಮನೆ) ಹೆಸರಿಸುವ ಮೂಲಕ ವಿಭಿನ್ನ ಶೈಲಿಯ ಮಾರಾಟ ಸೌಲಭ್ಯವನ್ನು ಅಳವಡಿಸಿಕೊಳ್ಳುತ್ತಿದೆ.

ಸಿ5 ಏರ್‌ಕ್ರಾಸ್ ಬಿಡುಗಡೆಗೂ ಮುನ್ನ ಹೊಸ ಕಾರ್ ಡಿಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಆಧುನಿಕ ಮಾರಾಟ ಸೌಲಭ್ಯಗಳನ್ನು ಒಳಗೊಂಡಿರುವ ಸಿಟ್ರನ್ ಹೊಸ ಕಾರು ಮಾರಾಟ ಮಳಿಗೆಗಳಲ್ಲಿ ತನ್ನ ಪುರಾತನ ಕಾರು ಮಾದರಿಗಳನ್ನು ಸಹ ಗ್ರಾಹಕರ ಆಕರ್ಷಣೆ ಪ್ರದರ್ಶನಗೊಳಿಸಲಾಗುತ್ತಿದ್ದು, ಕಾರು ಖರೀದಿಯನ್ನು ಸರಳಗೊಳಿಸಲು ಕಾನ್ಫಿಗ್ರೆಷನ್ ಸ್ಕೀನ್ ಜೊತೆ ಕಫೆ ಸೆಂಟರ್ ಸೌಲಭ್ಯವನ್ನು ಅಳವಡಿಸಿಕೊಳ್ಳಲಾಗಿದೆ. ಇನ್ನು ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯನ್ನು ಮಾರ್ಚ್ 1ರಿಂದ ಆರಂಭಿಸಲಿರುವ ಸಿಟ್ರನ್ ಕಂಪನಿಯು ಮುಂದಿನ ಕೆಲವೇ ವಾರಗಳಲ್ಲಿ ಹೊಸ ಕಾರಿನ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಲಿದೆ.

ಸಿ5 ಏರ್‌ಕ್ರಾಸ್ ಬಿಡುಗಡೆಗೂ ಮುನ್ನ ಹೊಸ ಕಾರ್ ಡಿಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಹೊಸ ಕಾರಿನಲ್ಲಿ ಸಿಟ್ರನ್ ಕಂಪನಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಫೀಲ್ ಮತ್ತು ಶೈನ್ ಎನ್ನುವ ಪ್ರಮುಖ ವೆರಿಯೆಂಟ್‌ಗಳೊಂದಿಗೆ ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಕಾರಿನ ಖದರ್‌ಗೆ ಪೂರಕವಾದ ಸರೌಂಡ್ ಬ್ಲ್ಯಾಕ್ ಕ್ಲಾಡಿಂಗ್ ಸೌಲಭ್ಯ ಹೊಂದಿದೆ.

ಸಿ5 ಏರ್‌ಕ್ರಾಸ್ ಬಿಡುಗಡೆಗೂ ಮುನ್ನ ಹೊಸ ಕಾರ್ ಡಿಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಹಾಗೆಯೇ ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ಎಲ್ಇಡಿ ಟೈಲ್‌ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್‌ನೊಂದಿಗೆ ಆಕರ್ಷಕ ನೋಟ ಹೊಂದಿದ್ದು, ಹೊಸ ಕಾರಿನ ಕಾರಿನ ಒಳಭಾಗವು ಕೂಡಾ ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳಿಂದ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ. ಇದರೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೊಲ್ ಜೊತೆ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಟೋಟೈನ್‌ಮೆಂಟ್ ಸೌಲಭ್ಯವಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸಿ5 ಏರ್‌ಕ್ರಾಸ್ ಬಿಡುಗಡೆಗೂ ಮುನ್ನ ಹೊಸ ಕಾರ್ ಡಿಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, ಏರ್ ಪ್ಯೂರಿಫೈರ್, ಪ್ರತ್ಯೇಕವಾಗಿರುವ ಆಗಿರುವ ಎಸಿ ವೆಂಟ್ಸ್ ಹೊಂದಿದೆ.

ಸಿ5 ಏರ್‌ಕ್ರಾಸ್ ಬಿಡುಗಡೆಗೂ ಮುನ್ನ ಹೊಸ ಕಾರ್ ಡಿಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಜೊತೆಗೆ ಹೊಸ ಕಾರಿನ ಹಿಂಬದಿಯಲ್ಲಿ ಆಸನ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಆರಾಮವಾಗಿ ಕುಳಿತುಕೊಳ್ಳಬಹುದಾದ ಆಸನ ಸೌಲಭ್ಯವನ್ನು ನೀಡಿದ್ದು, ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವುದೇ ಕ್ಯಾಬಿನ್ ವಿಶಾಲವಾಗಿರಲು ಪ್ರಮುಖ ಕಾರಣವಾಗಿದೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಸಿ5 ಏರ್‌ಕ್ರಾಸ್ ಬಿಡುಗಡೆಗೂ ಮುನ್ನ ಹೊಸ ಕಾರ್ ಡಿಲರ್ಸ್‌ಗಳಿಗೆ ಚಾಲನೆ ನೀಡಿದ ಸಿಟ್ರನ್

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದೆ. ಕಂಪನಿಯು ಹೊಸ ಕಾರಿನಲ್ಲಿ 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 25 ಲಕ್ಷದಿಂದ ರೂ. 28 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

More from DriveSpark

Article Published On: Thursday, February 18, 2021, 20:59 [IST]
English summary
Citroen India Inaugurate New Dealership In Chennai. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+