ಭಾರತದಲ್ಲಿ ವರ್ಷಕ್ಕೊಂದು ಹೊಚ್ಚ ಹೊಸ ಕಾರು ಮಾದರಿಯನ್ನು ಬಿಡುಗಡೆ ಮಾಡಲಿದೆ ಸಿಟ್ರನ್
ಫ್ರೆಂಚ್ ಆಟೋ ಉತ್ಪಾದನಾ ಕಂಪನಿಯಾಗಿರುವ ಸಿಟ್ರನ್ ಶೀಘ್ರದಲ್ಲೇ ಭಾರತದಲ್ಲಿ ತನ್ನ ಮೊದಲ ಕಾರು ಮಾದರಿಯ ಬಿಡುಗಡೆಯ ಸಿದ್ದತೆಯಲ್ಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ದೇಶದ ಪ್ರಮುಖ ನಗರಗಳಲ್ಲಿ ಕಾರು ಮಾರಾಟ ಮಳಿಗೆಗಳ ವಿಸ್ತರಣೆಗೆ ಚಾಲನೆ ನೀಡಿದೆ.

ಸಿಟ್ರನ್ ಬಿಡುಗಡೆ ಮಾಡಲಿರುವ ಮೊದಲ ಕಾರು ಮಾದರಿಯು ಮುಂದಿನ ತಿಂಗಳು 1ರಂದು ಅನಾವರಣಗೊಳ್ಳುತ್ತಿದ್ದು, ಅನಾವರಣಗೊಳ್ಳಲಿರುವ ಹೊಸ ಸಿ5 ಏರ್‌ಕ್ರಾಸ್ ಕಾರು ಮಾದರಿಯು ಫೆಬ್ರುವರಿ ಮಧ್ಯಂತರದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದೆ. ಸಿ5 ಏರ್‌ಕ್ರಾಸ್ ಬಿಡುಗಡೆಯ ನಂತರ ಬ್ರಾಂಡ್ ಜನಪ್ರಿಯತೆಯನ್ನು ಸಾರಲಿರುವ ಕಂಪನಿಯು ಮುಂದಿನ ಕೆಲ ವರ್ಷಗಳವರೆಗೆ ವರ್ಷಕ್ಕೊಂದು ಹೊಸ ಕಾರು ಮಾದರಿಯನ್ನು ಬಿಡುಗಡೆಗೊಳಿಸುವುದಾಗಿ ಹೇಳಿಕೊಂಡಿದೆ.

ಮೊದಲ ಹಂತದಲ್ಲಿ ಬಿಡುಗಡೆಯಾಗಲಿರುವ ಮಧ್ಯಮ ಕ್ರಮಾಂಕದ ಐಷಾರಾಮಿ ಎಸ್‌ಯುವಿ ಮಾದರಿಯಾಗಿರುವ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಪ್ರೀಮಿಯಂ ಎಸ್‌ಯುವಿ ಮಾದರಿಯಾಗಿ ಮಾರಾಟಗೊಳ್ಳಲಿದೆ.

ಸಿಟ್ರನ್ ಕಂಪನಿಯ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಬೆಲೆ ವಿಚಾರದಲ್ಲೂ ಗಮನಸೆಳೆಯಲಿದೆ. ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿರುವ ಕಂಪನಿಯು ಮೊದಲ ಹಂತದಲ್ಲಿ ಸಿ5 ಏರ್‌ಕ್ರಾಸ್ ರಸ್ತೆಗಿಳಿಸಲಿದೆ.

ಸಿಟ್ರನ್ ಕಂಪನಿಯು ಸಿ5 ಏರ್‌ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವು ಯೋಜನೆ ಹೊಂದಿದೆ. ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್‌ಗಳು ಯುರೋಪ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆಯುಳ್ಳ ಕಾರುಗಳಾಗಿದ್ದು, ಸಿಟ್ರನ್ ಕಂಪನಿಯು ಇದೀಗ ದೇಶಿಯ ಮಾರುಕಟ್ಟೆಯನ್ನು ಮೊದಲ ಬಾರಿಗೆ ಪ್ರವೇಶಿಸುತ್ತಿದೆ.

ಏರ್‌ಕ್ರಾಸ್ ಎಸ್‌ಯುವಿ ಕಾರು ಬಿಡುಗಡೆಯ ನಂತರ ಮಧ್ಯಮ ಕ್ರಮಾಂಕದ ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಯಾಗ ಸಾಧ್ಯತೆಗಳಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಸಿಟ್ರನ್ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಂಡಿವೆ.

ಸಿ5 ಏರ್‌ಕ್ರಾಸ್ ಕಾರು ಮಾದರಿಯು ಹೊಸ ಎಮಿಷನ್ ಪ್ರೇರಿತ 2.0-ಲೀಟರ್ ಇನ್‌ಲೈನ್ ಟರ್ಬೊ ಡೀಸೆಲ್ ಎಂಜಿನ್ ಪಡೆದುಕೊಳ್ಳುವುದು ಖಚಿತವಾಗಿದ್ದು, ಹೊಸ ಎಂಜಿನ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಬಹುದಾಗಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಆದರೆ ಹೊಸ ಕಾರಿನಲ್ಲಿ ಪೆಟ್ರೋಲ್ ಮಾದರಿಯನ್ನು ಬಿಡುಗಡೆಗೊಳಿಸುವ ಬಗ್ಗೆ ಯಾವುದೇ ಮಾಹಿತಿ ನೀಡದ ಕಂಪನಿಯು ಅನಾವರಣ ಸಂದರ್ಭದಲ್ಲಿ ಹೊಸ ಕಾರಿನ ಮತ್ತಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಿದ್ದು, ಭವಿಷ್ಯ ಕಾರು ಮಾದರಿಗಳಿಗಾಗಿ ಪೆಟ್ರೋಲ್ ಮಾದರಿಗಳನ್ನು ಮಾತ್ರವೇ ಅಭಿವೃದ್ದಿಪಡಿಸುತ್ತಿರುವ ಮಾಹಿತಿಗಳಿವೆ.

ಇದರೊಂದಿಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್, 360 ಡಿಗ್ರಿ ವ್ಯೂ ಕ್ಯಾಮೆರಾ, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಕೀ ಲೆಸ್ ಎಂಟ್ರಿ, ಸ್ಟಾರ್ಟ್/ಸ್ಟಾಪ್ ಬಟನ್, ಹಿಲ್ ಅಸಿಸ್ಟ್, ಸ್ಟ್ಯಾಬಿಲಿಟಿ ಕಂಟ್ರೋಲ್, ಪಾರ್ಕಿಂಗ್ ಅಸಿಸ್ಟ್ ಸೇರಿದಂತೆ ಆಫ್ ರೋಡ್ ಕೌಶಲ್ಯಕ್ಕಾಗಿ 4x4 ಡ್ರೈವ್ ಸಿಸ್ಟಂ ಪಡೆದುಕೊಳ್ಳುವ ಸಾಧ್ಯತೆಗಳಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಈ ಮೂಲಕ ಮಧ್ಯಮ ಕ್ರಮಾಂಕ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಆಯ್ಕೆಯಾಗಲಿರುವ ಸಿಟ್ರನ್ ಸಿ5 ಏರ್‌ಕ್ರಾಸ್ ಮಾದರಿಯು ಜೀಪ್ ಕಂಪಾಸ್, ಸ್ಕೋಡಾ ಕರೋಕ್ ಮತ್ತು ಹ್ಯುಂಡೈ ಟಕ್ಸನ್ ಕಾರು ಮಾದರಿಗಳಿಗೆ ಪ್ರಬಲ ಪೈಪೋಟಿ ನೀಡಲಿದ್ದದರೆ, ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಹ್ಯುಂಡೈ ಕ್ರೆಟಾ, ಮಾರುತಿ ಎಸ್ ಕ್ರಾಸ್, ಕಿಯಾ ಸೆಲ್ಟೊಸ್, ರೆನಾಲ್ಟ್ ಡಸ್ಟರ್ ಕಾರುಗಳಿಗೆ ಪೈಪೋಟಿ ನೀಡಲಿದೆ.


Click it and Unblock the Notifications








