Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 4 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 5 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮುಂಬರುವ ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿದೆ ಸಿಟ್ರನ್ ಹೊಸ ಸಿ3 ಏರ್ಕ್ರಾಸ್
ಸಿಟ್ರನ್ ಕಂಪನಿಯು ಶೀಘ್ರದಲ್ಲೇ ಭಾರತದಲ್ಲಿ ತನ್ನ ಮೊದಲ ಕಾರು ಮಾದರಿಯ ಬಿಡುಗಡೆಯ ಸಿದ್ದತೆಯಲ್ಲಿದ್ದು, ಮೊದಲ ಹಂತದಲ್ಲಿ ಸಿ5 ಏರ್ಕ್ರಾಸ್ ಎಸ್ಯುವಿ ಕಾರು ಬಿಡುಗಡೆ ಮಾಡಲಿದೆ. ತದನಂತರ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿರುವ ಕಂಪನಿಯು ಮುಂಬರುವ ದೀಪಾವಳಿ ಹೊತ್ತಿಗೆ ಕಂಪ್ಯಾಕ್ಟ್ ಎಸ್ಯುವಿಯನ್ನು ರಸ್ತೆಗಿಳಿಸುವ ಯೋಜನೆಯಲ್ಲಿದೆ.

ಸಿಟ್ರನ್ ಇಂಡಿಯಾ ಬಿಡುಗಡೆ ಮಾಡಲಿರುವ ಮೊದಲ ಕಾರು ಮಾದರಿಯು ಮುಂದಿನ ತಿಂಗಳು 1ರಂದು ಅನಾವರಣಗೊಳ್ಳುತ್ತಿದ್ದು, ಅನಾವರಣಗೊಳ್ಳಲಿರುವ ಹೊಸ ಸಿ5 ಏರ್ಕ್ರಾಸ್ ಕಾರು ಮಾದರಿಯು ಫೆಬ್ರುವರಿ ಮಧ್ಯಂತರದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದೆ. ಸಿ5 ಏರ್ಕ್ರಾಸ್ ಬಿಡುಗಡೆಯ ನಂತರ ಬ್ರಾಂಡ್ ಜನಪ್ರಿಯತೆಯನ್ನು ಸಾರಲಿರುವ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ.

ಸಿಟ್ರನ್ ಕಂಪನಿಯ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಬೆಲೆ ವಿಚಾರದಲ್ಲೂ ಹೊಸ ಕಾರುಗಳು ಭಾರತೀಯ ಗ್ರಾಹಕರ ಗಮನಸೆಳೆಯಲಿವೆ.

ಗ್ರಾಹಕರ ಬೇಡಿಕೆಯೆಂತೆ ಸಿಟ್ರನ್ ಕಂಪನಿಯು ಭಾರತದಲ್ಲಿ ಎಸ್ಯುವಿ, ಹ್ಯಾಚ್ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿದ್ದು, ಸಿಟ್ರನ್ ಕಂಪನಿಯು ಹೊಸ ಕಾರುಗಳನ್ನು ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಉತ್ಪಾದನೆ ಮಾಡಿ ಮಾರಾಟ ಮಾಡುವು ಯೋಜನೆ ಹೊಂದಿದೆ.

ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್ಗಳು ಯುರೋಪ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆಯುಳ್ಳ ಕಾರುಗಳಾಗಿದ್ದು, ಸಿಟ್ರನ್ ಕಂಪನಿಯು ಇದೀಗ ದೇಶಿಯ ಮಾರುಕಟ್ಟೆಯನ್ನು ಮೊದಲ ಬಾರಿಗೆ ಪ್ರವೇಶಿಸುತ್ತಿದೆ. ಸಿ5 ಏರ್ಕ್ರಾಸ್ ಎಸ್ಯುವಿ ಕಾರು ಬಿಡುಗಡೆಯ ನಂತರ ಮಧ್ಯಮ ಕ್ರಮಾಂಕದ ಸಿ3 ಏರ್ಕ್ರಾಸ್ ಕಂಪ್ಯಾಕ್ಟ್ ಎಸ್ಯುವಿ ಕಾರು ಬಿಡುಗಡೆ ಮಾಡುವ ಯೋಜನೆಯಿದ್ದು, ಹೊಸ ಕಾರು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಂಡಿವೆ.

ಯುರೋಪ್ ಮಾರುಕಟ್ಟೆಯಲ್ಲಿ ಬಹುಬೇಡಿಕೆಯ ಕಾರು ಮಾದರಿಯಾಗಿರುವ ಸಿ3 ಏರ್ಕ್ರಾಸ್ ಮಾದರಿಯು ಎಲೆಕ್ಟ್ರಿಕ್ ಮಾದರಿಯಲ್ಲೂ ಮಾರಾಟಗೊಳ್ಳುತ್ತಿದ್ದು, ಇದೀಗ ಭಾರತದಲ್ಲಿ ಪೆಟ್ರೋಲ್ ಮಾದರಿಯಲ್ಲಿ ಮಾತ್ರ ಖರೀದಿಗೆ ಲಭ್ಯವಾಗುವ ಸುಳಿವು ನೀಡಿದೆ.

ಸಿ3 ಏರ್ಕ್ರಾಸ್ ಕಾರು ಮಾದರಿಯು ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್ಯುವಿ300 ಕಾರುಗಳಿಗೆ ಪೈಪೋಟಿ ನೀಡಲಿದ್ದು, ಪೆಟ್ರೋಲ್ ಮಾದರಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ ಎನ್ನಲಾಗಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಬಿಡುಗಡೆಯಾಗಲಿರುವ ಸಿ5 ಏರ್ಕ್ರಾಸ್ ಕಾರು ಮಾದರಿಯಲ್ಲಿ ಮಾತ್ರವೇ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆ ನೀಡಲಿದ್ದು, ಸಿ5 ನಂತರ ಬಿಡುಗಡೆಯಾಗುವ ಕಾರುಗಳಲ್ಲಿ ಪೆಟ್ರೋಲ್ ಮಾದರಿಗಳನ್ನು ಮಾತ್ರ ಮಾರಾಟ ಮಾಡಲಿದೆಯೆಂತೆ.

ಸಿ3 ಏರ್ಕ್ರಾಸ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 7 ಲಕ್ಷದಿಂದ ರೂ.12 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಹೊಸ ಸಿ3 ಏರ್ಕ್ರಾಸ್ ಕಾರು ಮಾದರಿಯು ಮುಂಬರುವ ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿದೆ ಎನ್ನಲಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಸಿ5 ಏರ್ಕ್ರಾಸ್ ಮಾದರಿಯೊಂದಿಗೆ ಮಾರಾಟ ಮಳಿಗೆಗಳನ್ನು ವಿಸ್ತರಣೆ ಮಾಡಲು ನಿರ್ಧರಿಸಿದೆ.