Just In
- 8 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 9 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 10 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 10 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಭಾರತದಲ್ಲಿ ಲಸಿಕೆ ಉತ್ಸವದ 4ನೇ ದಿನ ಲಸಿಕೆ ಪಡೆದ ಫಲಾನುಭವಿಗಳೆಷ್ಟು?
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಆರಂಭಿಸಿದ ಸಿಟ್ರನ್
ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಸಿ5 ಏರ್‌ಕ್ರಾಸ್ ಕಾರು ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಸಿ5 ಏರ್‌ಕ್ರಾಸ್ ಕಾರು ಖರೀದಿಗಾಗಿ ಸಿಟ್ರನ್ ಕಂಪನಿಯು ರೂ.50 ಸಾವಿರ ಬುಕ್ಕಿಂಗ್ ದರ ನಿಗದಿಪಡಿಸಿದ್ದು, ಆಸಕ್ತ ಗ್ರಾಹಕರು ಶೋರೂಂನಲ್ಲಿ ಅಥವಾ ವೆಬ್‌ಸೈಟ್ ಮೂಲಕ ಬುಕ್ಕಿಂಗ್ ಮಾಡಬಹುದಾಗಿದೆ. ಹೊಸ ಕಾರು ಈ ತಿಂಗಳು ಮಧ್ಯಂತರದಲ್ಲಿ ಖರೀದಿಗೆ ಲಭ್ಯವಾಗಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ವಿವಿಧ ನಗರಗಳಲ್ಲಿ ಮತ್ತಷ್ಟು ಹೊಸ ಶೋರೂಂಗಳಿಗೆ ಚಾಲನೆ ನೀಡುವ ಸಿದ್ದತೆಯಲ್ಲಿದೆ.

ಹೊಸ ಸಿ5 ಏರ್‌ಕ್ರಾಸ್ ಮೂಲಕ ಎಸ್‌ಯುವಿ ಕಾರು ಮಾರಾಟದಲ್ಲಿ ಭಾರೀ ನೀರಿಕ್ಷೆಯಿಟ್ಟುಕೊಂಡಿರುವ ಸಿಟ್ರನ್ ಕಂಪನಿಯು ಹೊಸ ಕಾರು ಖರೀದಿದಾರರನ್ನು ಸೆಳೆಯುತ್ತಿದ್ದು, ಹೊಸ ಕಾರಿಗೆ ನಿಗದಿತ ಅವಧಿಯ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಸ್ಟ್ಯಾಂಡರ್ಡ್ ವಾರಂಟಿ ಜೊತೆಗೆ ಹೆಚ್ಚುವರಿಯಾಗಿ 50 ಸಾವಿರ ಕಿ.ಮೀ ಅಥವಾ 5 ವರ್ಷಗಳ ಹೆಚ್ಚುವರಿ ವಾರಂಟಿಯನ್ನು ಉಚಿತವಾಗಿ ನೀಡುತ್ತಿದೆ.

ಹೊಸ ವಾರಂಟಿ ಆಫರ್ ಅನ್ನು ಮುಂದಿನ ತಿಂಗಳು ಏಪ್ರಿಲ್ 6ರ ತನಕ ಬುಕ್ಕಿಂಗ್ ಮಾಡುವ ಎಲ್ಲಾ ಗ್ರಾಹಕರಿಗೆ ಲಭ್ಯವಾಗಲಿದ್ದು, ನಿಗದಿತ ಅವಧಿ ನಂತರ ಬುಕ್ಕಿಂಗ್ ಮಾಡಲಾಗುವ ಗ್ರಾಹಕರಿಗೆ ಸ್ಟ್ಯಾಂಡರ್ಡ್ ವಾರಂಟಿ ಸೌಲಭ್ಯಗಳು ಎಂದಿನಂತೆ ಅನ್ವಯವಾಗಲಿವೆ.

ಇನ್ನು ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಫೀಲ್ ಮತ್ತು ಶೈನ್ ಎನ್ನುವ ಪ್ರಮುಖ ವೆರಿಯೆಂಟ್‌ಗಳೊಂದಿಗೆ ಖರೀದಿ ಲಭ್ಯವಾಗಲಿರುವ ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಕಾರಿನ ಖದರ್‌ಗೆ ಪೂರಕವಾದ ಸರೌಂಡ್ ಬ್ಲ್ಯಾಕ್ ಕ್ಲಾಡಿಂಗ್ ಸೌಲಭ್ಯವಿದೆ.

ಹಾಗೆಯೇ ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ಎಲ್ಇಡಿ ಟೈಲ್‌ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್‌ನೊಂದಿಗೆ ಆಕರ್ಷಕ ನೋಟ ಹೊಂದಿದ್ದು, ಹೊಸ ಕಾರಿನ ಕಾರಿನ ಒಳಭಾಗವು ಕೂಡಾ ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳಿಂದ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ.

ಇದರೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೊಲ್ ಜೊತೆ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಟೋಟೈನ್‌ಮೆಂಟ್ ಸೌಲಭ್ಯವಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, ಏರ್ ಪ್ಯೂರಿಫೈರ್, ಪ್ರತ್ಯೇಕವಾಗಿರುವ ಆಗಿರುವ ಎಸಿ ವೆಂಟ್ಸ್ ಹೊಂದಿದೆ.

ಜೊತೆಗೆ ಹೊಸ ಕಾರಿನ ಹಿಂಬದಿಯಲ್ಲಿ ಆಸನ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಆರಾಮವಾಗಿ ಕುಳಿತುಕೊಳ್ಳಬಹುದಾದ ಆಸನ ಸೌಲಭ್ಯವನ್ನು ನೀಡಿದ್ದು, ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವುದೇ ಕ್ಯಾಬಿನ್ ವಿಶಾಲವಾಗಿರಲು ಪ್ರಮುಖ ಕಾರಣವಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದೆ. ಕಂಪನಿಯು ಹೊಸ ಕಾರಿನಲ್ಲಿ 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 25 ಲಕ್ಷದಿಂದ ರೂ. 28 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.