Just In
- 2 hrs ago
ಅನಾವರಣವಾಯ್ತು ಫೋಕ್ಸ್‌ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್‌ವ್ಯಾಗನ್
Don't Miss!
- News
ಉತ್ತರಾಖಂಡ್: ದಿಢೀರ್ ಕೋರ್ ಕಮಿಟಿ ಸಭೆ ನಡೆಸಿದ ಬಿಜೆಪಿ
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರ್ಚ್ 1ರಿಂದ ಸಿ5 ಏರ್‌ಕ್ರಾಸ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸಲಿದೆ ಸಿಟ್ರನ್
ಸಿಟ್ರನ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಹೊಸ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಮಾದರಿಯನ್ನು ಅನಾವರಣಗೊಳಿಸುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಮಾರ್ಚ್ 1ರಿಂದ ಹೊಸ ಕಾರು ಖರೀದಿಗೆ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ.

ಆರಂಭಿಕವಾಗಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಹತ್ತು ಮಾಹಾನಗರಗಳಲ್ಲಿ ಮಾತ್ರವೇ ಕಾರು ಮಾರಾಟವನ್ನು ಆರಂಭಿಸುತ್ತಿರುವ ಸಿಟ್ರನ್ ಕಂಪನಿಯು ಗ್ರಾಹಕರ ಬೇಡಿಕೆಯನ್ನು ಆಧರಿಸಿ ಮಾರಾಟ ಮಳಿಗೆಗಳನ್ನು ಇತರೆ ನಗರಗಳಿಗೂ ವಿಸ್ತರಿಸುವ ಯೋಜನೆಯಲ್ಲಿದ್ದು, ಮೊದಲ ಕಾರು ಮಾದರಿಯಾಗಿ ಬಿಡುಗಡೆಯಾಗಲಿರುವ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯು ಹಲವಾರು ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಹೊಂದಿರಲಿದೆ.

ನಮ್ಮ ಬೆಂಗಳೂರಿನಲ್ಲಿ ಪಿಪಿಎಸ್ ಮೋಟಾರ್ಸ್ ಜೊತೆಗೂಡಿರುವ ಸಿಟ್ರನ್ ಕಂಪನಿಯು ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಹೊಸ ಕಾರು ಮಾರಾಟ ಮಳಿಗೆಗಳನ್ನು ತೆರೆಯುತ್ತಿದ್ದು, ಸಿ5 ಏರ್‌ಕ್ರಾಸ್ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿದೆ.

ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಕಾರಿನ ಖದರ್‌ಗೆ ಪೂರಕವಾದ ಸರೌಂಡ್ ಬ್ಲ್ಯಾಕ್ ಕ್ಲಾಡಿಂಗ್ ಸೌಲಭ್ಯ ಹೊಂದಿದೆ.

ಹಾಗೆಯೇ ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ಎಲ್ಇಡಿ ಟೈಲ್‌ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್‌ನೊಂದಿಗೆ ಆಕರ್ಷಕ ನೋಟ ಹೊಂದಿದ್ದು, ಹೊಸ ಕಾರಿನ ಕಾರಿನ ಒಳಭಾಗವು ಕೂಡಾ ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳಿಂದ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ. ಇದರೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೊಲ್ ಜೊತೆ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಟೋಟೈನ್‌ಮೆಂಟ್ ಸೌಲಭ್ಯವಿದೆ.

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, ಏರ್ ಪ್ಯೂರಿಫೈರ್, ಪ್ರತ್ಯೇಕವಾಗಿರುವ ಆಗಿರುವ ಎಸಿ ವೆಂಟ್ಸ್ ಹೊಂದಿದೆ.

ಜೊತೆಗೆ ಹೊಸ ಕಾರಿನ ಹಿಂಬದಿಯಲ್ಲಿ ಆಸನ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಆರಾಮವಾಗಿ ಕುಳಿತುಕೊಳ್ಳಬಹುದಾದ ಆಸನ ಸೌಲಭ್ಯವನ್ನು ನೀಡಿದ್ದು, ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವುದೇ ಕ್ಯಾಬಿನ್ ವಿಶಾಲವಾಗಿರಲು ಪ್ರಮುಖ ಕಾರಣವಾಗಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಸಿ5 ಏರ್‌ಕ್ರಾಸ್ ಕಾರು ಮಾದರಿಯು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದ್ದು, ಹೊಸ ಕಾರು ಫೀಲ್ ಮತ್ತು ಶೈನ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿ ಲಭ್ಯವಾಗಲಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ಸಿ5 ಏರ್‌ಕ್ರಾಸ್ ಕಾರಿನಲ್ಲಿ ಸಿಟ್ರನ್ ಕಂಪನಿಯು 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡುತ್ತಿದ್ದು, ಹೊಸ ಎಂಜಿನ್ ಮಾದರಿಯು 8 ಸ್ಟೀಡ್ ಆಟೋಮ್ಯಾಟಿಕ್ ಸ್ಟ್ಯಾಂಡರ್ಡ್ ಗೇರ್‌ಬಾಕ್ಸ್‌ನೊಂದಿಗೆ 175-ಬಿಎಚ್‌ಪಿ ಮತ್ತು 400 ಎನ್ಎಂ ಉತ್ಪಾದಿಸುವ ಮೂಲಕ ಪ್ರತಿ ಲೀಟರ್‌ಗೆ 18.06 ಕಿಮೀ ಮೈಲೇಜ್ ಹಿಂದಿರುಗಿಸುವುದಾಗಿ ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಈ ಮೂಲಕ ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾದರಿಗಳಾದ ಹ್ಯುಂಡೈ ಟ್ಯುಸಾನ್, ಸ್ಕೋಡಾ ಕರೋಕ್, ಫೋಕ್ಸ್‌ವ್ಯಾಗನ್ ಟಿ ರಾಕ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 25 ಲಕ್ಷದಿಂದ ರೂ. 28 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.