ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಖರೀದಿಗಾಗಿ ಬರೋಬ್ಬರಿ 1 ಸಾವಿರ ಬುಕ್ಕಿಂಗ್ ಸಲ್ಲಿಕೆ

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಮೊದಲ ಕಾರು ಮಾದರಿಯಾಗಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಖರೀದಿಗೆ ಇದುವರೆಗೆ ಸುಮಾರು 1 ಸಾವಿರ ಗ್ರಾಹಕರು ಬುಕ್ಕಿಂಗ್ ಸಲ್ಲಿಕೆ ಮಾಡಿದ್ದಾರೆ.

ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಖರೀದಿಗಾಗಿ ಬರೋಬ್ಬರಿ 1 ಸಾವಿರ ಬುಕ್ಕಿಂಗ್ ಸಲ್ಲಿಕೆ

ಸಿ5 ಏರ್‌ಕ್ರಾಸ್ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಐಷಾರಾಮಿ ಎಸ್‌ಯುವಿ ಮಾದರಿಯಾಗಿ ಮಾರಾಟಗೊಳ್ಳುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 29.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 31.90 ಲಕ್ಷ ಬೆಲೆ ಹೊಂದಿದೆ. ಹೊಸ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದ್ದು, ಫೀಲ್ ಮತ್ತು ಶೈನ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಖರೀದಿಗಾಗಿ ಬರೋಬ್ಬರಿ 1 ಸಾವಿರ ಬುಕ್ಕಿಂಗ್ ಸಲ್ಲಿಕೆ

ಬಿಡುಗಡೆಗೂ ಮುನ್ನ ಹೊಸ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಯುಗಾದಿ ವಿಶೇಷತೆಗಾಗಿ ಸ್ಪೆಷಲ್ ಆಫರ್‌ ಸಹ ಘೋಷಿಸಿರುವ ಸಿಟ್ರನ್ ಕಂಪನಿಯು ಹೆಚ್ಚುವರಿಯಾಗಿ 50 ಸಾವಿರ ಕಿ.ಮೀ ಅಥವಾ 5 ವರ್ಷಗಳ ವಾರಂಟಿಯನ್ನು ಉಚಿತವಾಗಿ ನೀಡುತ್ತಿದೆ.

ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಖರೀದಿಗಾಗಿ ಬರೋಬ್ಬರಿ 1 ಸಾವಿರ ಬುಕ್ಕಿಂಗ್ ಸಲ್ಲಿಕೆ

ಮಧ್ಯಮ ಗಾತ್ರದ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್ ಹೊಂದಿರುವ ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಕಾರಿನ ಖದರ್‌ಗೆ ಪೂರಕವಾದ ಸರೌಂಡ್ ಬ್ಲ್ಯಾಕ್ ಕ್ಲಾಡಿಂಗ್ ಸೌಲಭ್ಯವಿದೆ.

ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಖರೀದಿಗಾಗಿ ಬರೋಬ್ಬರಿ 1 ಸಾವಿರ ಬುಕ್ಕಿಂಗ್ ಸಲ್ಲಿಕೆ

ಹಾಗೆಯೇ ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ಎಲ್ಇಡಿ ಟೈಲ್‌ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್‌ನೊಂದಿಗೆ ಆಕರ್ಷಕ ನೋಟ ಹೊಂದಿದ್ದು, ಹೊಸ ಕಾರಿನ ಕಾರಿನ ಒಳಭಾಗವು ಕೂಡಾ ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳಿಂದ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ. ಇದರೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೊಲ್ ಜೊತೆ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಟೋಟೈನ್‌ಮೆಂಟ್ ಸೌಲಭ್ಯವಿದೆ.

ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಖರೀದಿಗಾಗಿ ಬರೋಬ್ಬರಿ 1 ಸಾವಿರ ಬುಕ್ಕಿಂಗ್ ಸಲ್ಲಿಕೆ

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, ಏರ್ ಪ್ಯೂರಿಫೈರ್, ಪ್ರತ್ಯೇಕವಾಗಿರುವ ಆಗಿರುವ ಎಸಿ ವೆಂಟ್ಸ್ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಖರೀದಿಗಾಗಿ ಬರೋಬ್ಬರಿ 1 ಸಾವಿರ ಬುಕ್ಕಿಂಗ್ ಸಲ್ಲಿಕೆ

ಜೊತೆಗೆ ಹೊಸ ಕಾರಿನ ಹಿಂಬದಿಯಲ್ಲಿ ಆಸನ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಆರಾಮವಾಗಿ ಕುಳಿತುಕೊಳ್ಳಬಹುದಾದ ಆಸನ ಸೌಲಭ್ಯವನ್ನು ನೀಡಿದ್ದು, ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವುದೇ ಕ್ಯಾಬಿನ್ ವಿಶಾಲವಾಗಿರಲು ಪ್ರಮುಖ ಕಾರಣವಾಗಿದೆ.

ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಖರೀದಿಗಾಗಿ ಬರೋಬ್ಬರಿ 1 ಸಾವಿರ ಬುಕ್ಕಿಂಗ್ ಸಲ್ಲಿಕೆ

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಖರೀದಿಗಾಗಿ ಬರೋಬ್ಬರಿ 1 ಸಾವಿರ ಬುಕ್ಕಿಂಗ್ ಸಲ್ಲಿಕೆ

ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡಿದ್ದು, 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 177-ಬಿಎಚ್‌ಪಿ ಮತ್ತು 400ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಹ್ಯುಂಡೈ ಟ್ಯುಸಾನ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಪೈಪೋಟಿ ನೀಡುವ ತವಕದಲ್ಲಿದೆ.

More from DriveSpark

Article Published On: Thursday, April 8, 2021, 21:03 [IST]
English summary
Citroen C5 Aircross SUV Receives Over 1,000 Bookings. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+