ನೆಕ್ಸಾನ್ ಮತ್ತು ಬ್ರೆಝಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿಟ್ರನ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಮೊದಲ ಕಾರು ಮಾದರಿಯಾದ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯನ್ನು ಇದೇ ತಿಂಗಳಾಂತ್ಯಕ್ಕೆ ಬಿಡುಗಡೆ ಮಾಡುತ್ತಿದ್ದು, ಸಿ5 ಏರ್‌ಕ್ರಾಸ್ ಎಸ್‌ಯುವಿ ನಂತರ ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ನೆಕ್ಸಾನ್ ಮತ್ತು ಬ್ರೆಝಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಚ್ಚ ಹೊಸ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಆಟೋ ಉದ್ಯಮಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿರುವ ಸಿಟ್ರನ್ ಕಂಪನಿಯು ಈಗಾಗಲೇ ಹೊಸ ಕಾರುಗಳ ಉತ್ಪಾದನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು, ಮೊದಲ ಹಂತವಾಗಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗೊಳಿಸಿದ ನಂತರ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹಲವು ಕಾರು ಆವೃತ್ತಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ನೆಕ್ಸಾನ್ ಮತ್ತು ಬ್ರೆಝಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಸಂಸ್ಥೆಯ ಅಂಗಸಂಸ್ಥೆಯಾಗಿರುವ ಸಿಟ್ರನ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟಗೊಂದಿಗೆ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿ ಗುರುತಿಸಿಕೊಂಡಿದ್ದು, ಆಟೋ ಉತ್ಪಾದನೆಯಲ್ಲಿ ಬರೋಬ್ಬರಿ 100 ವರ್ಷಗಳ ಅನುಭವವನ್ನು ಹೊಂದಿದೆ.

ನೆಕ್ಸಾನ್ ಮತ್ತು ಬ್ರೆಝಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಆಟೋ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಭಾರತದಲ್ಲೂ ಇದೀಗ ಸಿಟ್ರನ್ ಕಂಪನಿಯು ತನ್ನ ಮಾರಾಟ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಕಂಪನಿಯು ವಿವಿಧ ಮಾದರಿಯ ಎಸ್‌ಯುವಿ, ಕಂಪ್ಯಾಕ್ಟ್ ಎಸ್‌ಯುವಿ, ಎಂಪಿವಿ ಮತ್ತು ಹ್ಯಾಚ್‌ಬ್ಯಾಕ್ ಕಾರುಗಳನ್ನು ಮಾರಾಟ ಮಾಡುವ ಯೋಜನೆಯಲ್ಲಿದೆ.

ನೆಕ್ಸಾನ್ ಮತ್ತು ಬ್ರೆಝಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿಟ್ರನ್ ಕಂಪನಿಯು ಸಿ5 ಏರ್‌ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವ ಯೋಜನೆ ಹೊಂದಿದೆ. ಸಿ5 ಏರ್‌ಕ್ರಾಸ್ ಎಸ್‌ಯುವಿ ನಂತರ ಸಿ21 ಸ್ಪೋರ್ಟಿ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಮೈಕ್ರೊ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡಲಿರುವ ಸಿಟ್ರನ್ ಇಂಡಿಯಾ ಕಂಪನಿಯು ಐಷಾರಾಮಿ ಜೊತೆಗೆ ಬಜೆಟ್ ಕಾರುಗಳ ಮಾರಾಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ನೆಕ್ಸಾನ್ ಮತ್ತು ಬ್ರೆಝಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿಟ್ರನ್ ಕಂಪನಿಯ ಹೊಸ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಈಗಾಗಲೇ ಭಾರತದಲ್ಲಿ ವಿವಿಧ ಹಂತದ ಎಂಜಿನ್ ಕಾರ್ಯಕ್ಷಮತೆಯ ಪರೀಕ್ಷೆಗಳನ್ನು ಕೈಗೊಂಡಿದ್ದು, ಮೊದಲ ಬಾರಿಗೆ ಸಿ21 ಕೋಡ್ ನೆಮ್ ಆಧರಿಸಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಮುಂಬರುವ ದೀಪಾವಳಿ ಹೊತ್ತಿಗೆ ಬಿಡುಗಡೆಯಾಗುವ ಸಿದ್ದತೆಯಲ್ಲಿದೆ.

ನೆಕ್ಸಾನ್ ಮತ್ತು ಬ್ರೆಝಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿ21 ಕಾರು ಕಾರು ಸಿ3 ಏರ್‌ಕ್ರಾಸ್ ಅಥವಾ ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಬಹುದಾಗಿದ್ದು, ಹೊಸ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಪೈಪೋಟಿ ನೀಡಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ನೆಕ್ಸಾನ್ ಮತ್ತು ಬ್ರೆಝಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಎರಡು ಪ್ರಮುಖ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ.

ನೆಕ್ಸಾನ್ ಮತ್ತು ಬ್ರೆಝಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಬಿಡುಗಡೆ ಮಾಡುತ್ತಿರುವ ಸಿ5 ಏರ್‌ಕ್ರಾಸ್ ಕಾರು ಮಾದರಿಯಲ್ಲಿ ಮಾತ್ರವೇ ಡೀಸೆಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಮುಂಬರುವ ಹೊಸ ಕಾರುಗಳಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಮಾತ್ರ ನೀಡುವ ಯೋಜನೆ ಹೊಂದಿದೆ.

MOST READ: ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ನೆಕ್ಸಾನ್ ಮತ್ತು ಬ್ರೆಝಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿಟ್ರನ್ ಹೊಸ ಕಾರುಗಳಲ್ಲಿ ಸದ್ಯ ಬಿಡುಗಡೆಯಾಗುತ್ತಿರುವ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 23 ಲಕ್ಷದಿಂದ ರೂ. 26 ಲಕ್ಷ ಬೆಲೆ ಹೊಂದಲಿದ್ದರೆ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.12 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.

More from DriveSpark

Article Published On: Tuesday, March 9, 2021, 13:21 [IST]
English summary
Citroen CC21 Compact SUV Spotted Testing Could Be Brands Second Product In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+