ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಅನಾವರಣದ ಮಾಹಿತಿ ಹಂಚಿಕೊಂಡ ಸಿಟ್ರನ್ ಇಂಡಿಯಾ

ಸಿಟ್ರನ್ ಕಂಪನಿಯು ಭಾರತದಲ್ಲಿ ಶೀಘ್ರವೇ ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಕಂಪನಿಯು ತನ್ನ ಮೊದಲ ಕಾರು ಮಾದರಿಯಾದ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯನ್ನು ಮುಂದಿನ ತಿಂಗಳು ಫೆಬ್ರುವರಿ 1ರಂದು ಅನಾವರಣಗೊಳಿಸುತ್ತಿರುವುದಾಗಿ ಹೇಳಿಕೊಂಡಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಅನಾವರಣದ ಮಾಹಿತಿ ಬಹಿರಂಗ

2020ರ ಮಧ್ಯಂತರದಲ್ಲಿ ಹೊಸ ವಾಹನ ಮಾರಾಟಕ್ಕೆ ಚಾಲನೆ ನೀಡುವ ಯೋಜನೆಯಲ್ಲಿದ್ದ ಸಿಟ್ರನ್ ಕಂಪನಿಯು ಕರೋನಾ ವೈರಸ್ ಪರಿಣಾಮ ಹೊಸ ಯೋಜನೆಯನ್ನು ಮುಂದೂಡಿಕೆ ಮಾಡುತ್ತಾ ಬಂದಿದ್ದು, ಇದೀಗ ಹೊಸ ಕಾರು ಮೊದಲ ಹಂತವಾಗಿ ಸಿ5 ಏರ್‌ಕ್ರಾಸ್ ಎಸ್‌ಯುವಿಯ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯಲ್ಲಿನ ತನ್ನ ಯೋಜನೆಗಳ ಕುರಿತಾಗಿ ಮಹತ್ವದ ಮಾಹಿತಿ ಹಂಚಿಕೊಳ್ಳಲಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಅನಾವರಣದ ಮಾಹಿತಿ ಬಹಿರಂಗ

ಮಧ್ಯಮ ಕ್ರಮಾಂಕದ ಐಷಾರಾಮಿ ಎಸ್‌ಯುವಿ ಮಾದರಿಯಾಗಿರುವ ಹೊಸ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಹೊಸ ಕಾರು ಮುಂಬರುವ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಖರೀದಿಗೆ ಲಭ್ಯವಿರಲಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಅನಾವರಣದ ಮಾಹಿತಿ ಬಹಿರಂಗ

ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಬೆಲೆ ವಿಚಾರದಲ್ಲೂ ಗಮನಸೆಳೆಯಲಿದೆ. ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿರುವ ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಸಿ5 ಏರ್‌ಕ್ರಾಸ್ ಕಾರನ್ನು ಬಿಡುಗಡೆ ಮಾಡುವುದು ಖಚಿತವಾಗಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಅನಾವರಣದ ಮಾಹಿತಿ ಬಹಿರಂಗ

ಸಿಟ್ರನ್ ಕಂಪನಿಯು ಸಿ5 ಏರ್‌ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವು ಯೋಜನೆ ಹೊಂದಿದೆ. ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್‌ಗಳು ಯುರೋಪ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆಯುಳ್ಳ ಕಾರುಗಳಾಗಿದ್ದು, ಸಿಟ್ರನ್ ಕಂಪನಿಯು ಇದೀಗ ದೇಶಿಯ ಮಾರುಕಟ್ಟೆಯನ್ನು ಮೊದಲ ಬಾರಿಗೆ ಪ್ರವೇಶಿಸುತ್ತಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಅನಾವರಣದ ಮಾಹಿತಿ ಬಹಿರಂಗ

ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಬಿಡುಗಡೆಯ ನಂತರ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಂಡಿವೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಅನಾವರಣದ ಮಾಹಿತಿ ಬಹಿರಂಗ

ಸಿ5 ಏರ್‌ಕ್ರಾಸ್ ಕಾರು ಮಾದರಿಯು ಹೊಸ ಎಮಿಷನ್ ಬಿಎಸ್-6 ಪ್ರೇರಿತ 2.0-ಲೀಟರ್ ಇನ್‌ಲೈನ್ ಟರ್ಬೊ ಡೀಸೆಲ್ ಎಂಜಿನ್ ಪಡೆದುಕೊಳ್ಳುವುದು ಖಚಿತವಾಗಿದ್ದು, ಹೊಸ ಎಂಜಿನ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಅನಾವರಣದ ಮಾಹಿತಿ ಬಹಿರಂಗ

ಆದರೆ ಹೊಸ ಕಾರಿನಲ್ಲಿ ಪೆಟ್ರೋಲ್ ಮಾದರಿಯನ್ನು ಬಿಡುಗಡೆಗೊಳಿಸುವ ಬಗ್ಗೆ ಯಾವುದೇ ಮಾಹಿತಿ ನೀಡದ ಕಂಪನಿಯು ಶೀಘ್ರದಲ್ಲೇ ಹೊಸ ಕಾರಿನ ಮತ್ತಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಿದ್ದು, ಭವಿಷ್ಯ ಕಾರು ಮಾದರಿಗಳಿಗಾಗಿ ಪೆಟ್ರೋಲ್ ಮಾದರಿಗಳನ್ನು ಮಾತ್ರವೇ ಅಭಿವೃದ್ದಿಪಡಿಸುತ್ತಿರುವ ಮಾಹಿತಿಗಳಿವೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಅನಾವರಣದ ಮಾಹಿತಿ ಬಹಿರಂಗ

ಇದರೊಂದಿಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್, 360 ಡಿಗ್ರಿ ವ್ಯೂ ಕ್ಯಾಮೆರಾ, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಕೀ ಲೆಸ್ ಎಂಟ್ರಿ, ಸ್ಟಾರ್ಟ್/ಸ್ಟಾಪ್ ಬಟನ್, ಹಿಲ್ ಅಸಿಸ್ಟ್, ಸ್ಟ್ಯಾಬಿಲಿಟಿ ಕಂಟ್ರೋಲ್, ಪಾರ್ಕಿಂಗ್ ಅಸಿಸ್ಟ್ ಸೇರಿದಂತೆ ಆಫ್ ರೋಡ್ ಕೌಶಲ್ಯಕ್ಕಾಗಿ 4x4 ಡ್ರೈವ್ ಸಿಸ್ಟಂ ಪಡೆದುಕೊಳ್ಳುವ ಸಾಧ್ಯತೆಗಳಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಅನಾವರಣದ ಮಾಹಿತಿ ಬಹಿರಂಗ

ಈ ಮೂಲಕ ಮಧ್ಯಮ ಕ್ರಮಾಂಕರ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಆಯ್ಕೆಯಾಗಲಿರುವ ಸಿಟ್ರನ್ ಸಿ5 ಏರ್‌ಕ್ರಾಸ್ ಮಾದರಿಯು ಜೀಪ್ ಕಂಪಾಸ್, ಸ್ಕೋಡಾ ಕರೋಕ್ ಮತ್ತು ಹ್ಯುಂಡೈ ಟಕ್ಸನ್ ಕಾರು ಮಾದರಿಗಳಿಗೆ ಪ್ರಬಲ ಪೈಪೋಟಿ ನೀಡಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.22 ಲಕ್ಷದಿಂದ ರೂ. 25 ಲಕ್ಷ ಬೆಲೆ ಅಂತರದಲ್ಲಿ ಖರೀದಿಗೆ ಲಭ್ಯವಿರಲಿದೆ ಎನ್ನಲಾಗಿದೆ.

More from DriveSpark

Article Published On: Tuesday, January 5, 2021, 8:45 [IST]
English summary
Citroen To C5 Aircross SUV Unveil On 1st February 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+