Just In
- 21 min ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 2 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 12 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 14 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- News
ರಾಮನಗರ; ಟ್ರಕ್ಕಿಂಗ್ ಮೂಲಕ ತ್ಯಾಜ್ಯ ಸಂಗ್ರಹಿಸಿದ ಸಿಇಓ
- Movies
ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿರುವ ಮೆಗಾಸ್ಟಾರ್ ಅಮಿತಾಭ್ ಬಚ್ಚನ್
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Sports
"ಮೈಲಿಗಲ್ಲುಗಳ ಬಗ್ಗೆ ಬಹಳಷ್ಟು ಹಿಂದೆಯೇ ಯೋಚಿಸುವುದು ಬಿಟ್ಟಿದ್ದೇನೆ"
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಿ5 ಏರ್‌ಕ್ರಾಸ್ ಎಸ್‌ಯುವಿ ಖರೀದಿ ಮೇಲೆ ಗರಿಷ್ಠ ವಾರಂಟಿ ಘೋಷಣೆ ಮಾಡಲಿದೆ ಸಿಟ್ರನ್
ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಆಟೋ ಉತ್ಪಾದನಾ ವಲಯಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿರುವ ಸಿಟ್ರನ್ ಕಂಪನಿಯು ಶೀಘ್ರದಲ್ಲೇ ಹೊಸ ಕಾರಿನ ಮಾರಾಟಕ್ಕೆ ಚಾಲನೆ ನೀಡಲಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ಎಸ್‌ಯುವಿ ಕಾರು ಮಾದರಿಯಲ್ಲೇ ವಿಭಿನ್ನವಾದ ಶೈಲಿ ಹೊಂದಿರುವ ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರು ಮಾದರಿಯ ಮಾರುಕಟ್ಟೆಯಲ್ಲಿ ಬೇಡಿಕೆಯೆಂತೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದು, ಕಂಪನಿಯು ಹೊಸ ಕಾರು ಖರೀದಿದಾರರಿಗೆ ಗರಿಷ್ಠ ಪ್ರಮಾಣದ ವಾರಂಟಿ ಯೋಜನೆಯನ್ನು ಘೋಷಣೆ ಮಾಡುತ್ತಿರುವುದು ಹೊಸ ಕಾರು ಖರೀದಿಯ ಮೌಲ್ಯವನ್ನು ಹೆಚ್ಚಿಸಲಿದೆ.

ಸಿಟ್ರನ್ ಕಂಪನಿಯು ಹೊಸ ಸಿ5 ಏರ್‌ಕ್ರಾಸ್ ಎಸ್‌ಯುವಿ ಖರೀದಿ ಗ್ರಾಹಕರಿಗೆ 1 ಲಕ್ಷ ಕಿಮೀ ಅಥವಾ 3 ವರ್ಷಗಳ ಸ್ಟ್ಯಾಂಡರ್ಡ್ ವಾರಂಟಿ ನೀಡುತ್ತಿದ್ದು, ಸ್ಟ್ಯಾಂಡರ್ಡ್ ವಾರಂಟಿ ಹೊರತುಪಡಿಸಿ ಹೆಚ್ಚುವರಿ ಪ್ಯಾಕೇಜ್ ಮೂಲಕ ಐದು ವರ್ಷಗಳಿಗೆ ವಿಸ್ತರಿಸಿಕೊಳ್ಳಬಹುದಾಗಿದೆ.

ಇನ್ನು ಹೊಸ ಕಾರನ್ನು ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಸಿ5 ಏರ್‌ಕ್ರಾಸ್ ಎಸ್‌ಯುವಿಯಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಕಾರಿನ ಖದರ್‌ಗೆ ಪೂರಕವಾದ ಸರೌಂಡ್ ಬ್ಲ್ಯಾಕ್ ಕ್ಲಾಡಿಂಗ್ ಸೌಲಭ್ಯವಿದೆ.

ಹಾಗೆಯೇ ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ಎಲ್ಇಡಿ ಟೈಲ್‌ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್‌ನೊಂದಿಗೆ ಆಕರ್ಷಕ ನೋಟ ಹೊಂದಿದ್ದು, ಹೊಸ ಕಾರಿನ ಕಾರಿನ ಒಳಭಾಗವು ಕೂಡಾ ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳಿಂದ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ. ಇದರೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೊಲ್ ಜೊತೆ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಟೋಟೈನ್‌ಮೆಂಟ್ ಸೌಲಭ್ಯವಿದೆ.

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, ಏರ್ ಪ್ಯೂರಿಫೈರ್, ಪ್ರತ್ಯೇಕವಾಗಿರುವ ಆಗಿರುವ ಎಸಿ ವೆಂಟ್ಸ್ ಹೊಂದಿದೆ.

ಜೊತೆಗೆ ಹೊಸ ಕಾರಿನ ಹಿಂಬದಿಯಲ್ಲಿ ಆಸನ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಆರಾಮವಾಗಿ ಕುಳಿತುಕೊಳ್ಳಬಹುದಾದ ಆಸನ ಸೌಲಭ್ಯವನ್ನು ನೀಡಿದ್ದು, ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವುದೇ ಕ್ಯಾಬಿನ್ ವಿಶಾಲವಾಗಿರಲು ಪ್ರಮುಖ ಕಾರಣವಾಗಿದೆ.
MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 1,969 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದ್ದು, ಹೊಸ ಕಾರು ಫೀಲ್ ಮತ್ತು ಶೈನ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿ ಲಭ್ಯವಾಗಲಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ಸಿ5 ಏರ್‌ಕ್ರಾಸ್ ಕಾರಿನಲ್ಲಿ ಸಿಟ್ರನ್ ಕಂಪನಿಯು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡುತ್ತಿದ್ದು, ಹೊಸ ಎಂಜಿನ್ ಮಾದರಿಯು 8 ಸ್ಟೀಡ್ ಆಟೋಮ್ಯಾಟಿಕ್ ಸ್ಟ್ಯಾಂಡರ್ಡ್ ಗೇರ್‌ಬಾಕ್ಸ್‌ನೊಂದಿಗೆ 175-ಬಿಎಚ್‌ಪಿ ಮತ್ತು 400 ಎನ್ಎಂ ಉತ್ಪಾದಿಸುವ ಮೂಲಕ ಪ್ರತಿ ಲೀಟರ್‌ಗೆ 18.06 ಕಿಮೀ ಮೈಲೇಜ್ ಹಿಂದಿರುಗಿಸುವುದಾಗಿ ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಈ ಮೂಲಕ ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾದರಿಗಳಾದ ಹ್ಯುಂಡೈ ಟ್ಯುಸಾನ್, ಸ್ಕೋಡಾ ಕರೋಕ್, ಫೋಕ್ಸ್‌ವ್ಯಾಗನ್ ಟಿ ರಾಕ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 23 ಲಕ್ಷದಿಂದ ರೂ. 27 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.