Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ಕಾರುಗಳ ಬಗೆಗಿರುವ ಸಾಮಾನ್ಯ ತಪ್ಪು ಕಲ್ಪನೆಗಳಿವು
ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಹನ ತಯಾರಕ ಕಂಪನಿಗಳು ಸಹ ಹೊಸ ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ. ಮುಂದಿನ 10-15 ವರ್ಷಗಳ ನಂತರ ಕೇವಲ ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಉತ್ಪಾದಿಸುವುದಾಗಿ ಹಲವು ಕಂಪನಿಗಳು ಘೋಷಿಸಿವೆ.

ಈ ಸಂಗತಿಗಳ ನಡುವೆಯೂ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರ ಸಂಖ್ಯೆ ಕಡಿಮೆಯೆಂದೇ ಹೇಳಬಹುದು. ಎಲೆಕ್ಟ್ರಿಕ್ ಕಾರುಗಳ ಬಗೆಗಿರುವ ತಪ್ಪು ಕಲ್ಪನೆಯಿಂದಾಗಿ ಜನರು ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಜನರು ಹೊಂದಿರುವ ತಪ್ಪು ಭಾವನೆಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಎಲೆಕ್ಟ್ರಿಕ್ ಕಾರುಗಳು ದೀರ್ಘ ಪ್ರಯಾಣಕ್ಕೆ ಸೂಕ್ತವಲ್ಲ
ಎಲೆಕ್ಟ್ರಿಕ್ ಕಾರುಗಳಿಂದ ಒಂದು ನಗರದಿಂದ ಮತ್ತೊಂದು ನಗರಕ್ಕೆ ಚಲಿಸಲು ಸಾಧ್ಯವಿಲ್ಲವೆಂಬುದು ಹಲವು ಜನರ ಭಾವನೆಯಾಗಿದೆ. ಆದರೆ ಇದು ನಿಜವಲ್ಲ.ಸದ್ಯಕ್ಕೆ ಮಾರುಕಟ್ಟೆಯಲ್ಲಿರುವ ಹಲವು ಎಲೆಕ್ಟ್ರಿಕ್ ಕಾರುಗಳು ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದ ನಂತರ 300 ಕಿ.ಮೀಗಳಿಗಿಂತ ಹೆಚ್ಚು ದೂರ ಚಲಿಸುತ್ತವೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಕೆಲವು ಕಾರುಗಳು ಇಂಧನ ಹಾಗೂ ಬ್ಯಾಟರಿಗಳೆರಡರಲ್ಲೂ ಚಲಿಸುತ್ತವೆ. ಎಂಜಿ ಮೋಟಾರ್ ಕಂಪನಿಯ ಝಡ್ ಎಸ್ ಎಲೆಕ್ಟ್ರಿಕ್ ಎಸ್‌ಯುವಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ 340 ಕಿ.ಮೀಗಳವರೆಗೆ ಚಲಿಸುತ್ತದೆ. ಇನ್ನು ಇತ್ತೀಚೆಗೆ ಅನಾವರಣಗೊಂಡ ಎಲೆಕ್ಟ್ರಿಕ್ ಮೋಷನ್ ಕಾರು ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಸಾಗುತ್ತದೆ.

ಎಲೆಕ್ಟ್ರಿಕ್ ಕಾರುಗಳು ವೇಗವಾಗಿ ಚಲಿಸುವುದಿಲ್ಲ
ಎಲೆಕ್ಟ್ರಿಕ್ ಕಾರುಗಳು ಕಡಿಮೆ ವೇಗವನ್ನು ಹೊಂದಿರುತ್ತವೆ. ಇವು ಹೆದ್ದಾರಿಗಳಿಗೆ ಸೂಕ್ತವಲ್ಲ ಎಂಬುದು ಸಾಮಾನ್ಯ ತಪ್ಪು ಕಲ್ಪನೆ. ಇದು ಸಹ ನಿಜವಲ್ಲ. ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಕೇವಲ 9 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 120 ಕಿ.ಮೀಗಳಾಗಿದೆ. ಎಂಜಿ ಝಡ್ಎಸ್ ಇವಿ 8.5 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುತ್ತದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಇದರ ಜೊತೆಗೆ ಹಲವು ಎಲೆಕ್ಟ್ರಿಕ್ ಕಾರುಗಳು ಕೇವಲ 2-3 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುತ್ತವೆ. ಪವರ್ ಉತ್ಪಾದನೆಯಲ್ಲಿಯೂ ಎಲೆಕ್ಟ್ರಿಕ್ ಕಾರುಗಳು ಕಾರುಗಳು ಇಂಧನದಲ್ಲಿ ಚಲಿಸುವ ಕಾರುಗಳಿಗಿಂತ ಬಹಳ ಮುಂದಿವೆ. ಟಾಟಾ ನೆಕ್ಸಾನ್ ಇವಿ 129 ಬಿಹೆಚ್‌ಪಿ ಪವರ್ ಹಾಗೂ 245 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇದು ಪೆಟ್ರೋಲ್ ಮಾದರಿಗಿಂತ ಹೆಚ್ಚಿನ ಪ್ರಮಾಣದಾಗಿದೆ.

ಚಾರ್ಜಿಂಗ್ ಮಾಡಲು ಹೆಚ್ಚು ಸಮಯ ಬೇಕಾಗುತ್ತದೆ
ಎಲೆಕ್ಟ್ರಿಕ್ ಕಾರುಗಳು ಚಾರ್ಜ್ ಮಾಡಲು ಹೆಚ್ಚು ಸಮಯ ತೆಗೆದುಕೊಳ್ಳುತ್ತವೆ. ಎಲೆಕ್ಟ್ರಿಕ್ ಕಾರುಗಳು ಪೂರ್ತಿಯಾಗಿ ಚಾರ್ಜ್ ಮಾಡಲು 6-10 ಗಂಟೆಗಳನ್ನು ತೆಗೆದುಕೊಳ್ಳುತ್ತವೆ. ಆದರೆ ಫಾಸ್ಟ್ ಚಾರ್ಜರ್‌ಗಳ ಸಹಾಯದಿಂದ, 60 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಕಾರುಗಳನ್ನು ಚಾರ್ಜ್ ಮಾಡಬಹುದು.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಟಾಟಾ ಮೋಟಾರ್ಸ್, ಹ್ಯುಂಡೈ ಹಾಗೂ ಎಂಜಿ ಮೋಟಾರ್'ನಂತಹ ಕಂಪನಿಗಳು ದೇಶದಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ನಿರ್ಮಿಸುತ್ತಿವೆ. ಈ ನಿಲ್ದಾಣಗಳಲ್ಲಿ ಕಾರನ್ನು ವೇಗವಾಗಿ ಚಾರ್ಜ್ ಮಾಡುವ ಆಯ್ಕೆಯೂ ಇದೆ. ಕೆಲವು ಕಂಪನಿಗಳು ಗ್ರಾಹಕರ ಮನೆಗಳಲ್ಲಿ ಫಾಸ್ಟ್ ಚಾರ್ಜರ್‌ಗಳನ್ನು ಸ್ಥಾಪಿಸಲು ಮುಂದಾಗಿವೆ.

ಎಲೆಕ್ಟ್ರಿಕ್ ಕಾರುಗಳ ಬೆಲೆ ದುಬಾರಿ
ಭಾರತದಲ್ಲಿ ಸಾಮಾನ್ಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸುತ್ತಿಲ್ಲ. ಕಡಿಮೆ ಪ್ರಮಾಣದ ಮಾರಾಟ ಹಾಗೂ ಹೆಚ್ಚಿನ ಉತ್ಪಾದನಾ ವೆಚ್ಚದ ಕಾರಣಕ್ಕೆ ಎಲೆಕ್ಟ್ರಿಕ್ ಕಾರುಗಳ ಬೆಲೆ ದುಬಾರಿಯಾಗಿದೆ. ಆದರೆ ಕೆಲವು ಎಲೆಕ್ಟ್ರಿಕ್ ಕಾರುಗಳು ಪೆಟ್ರೋಲ್, ಡೀಸೆಲ್ ಕಾರಿನ ಬೆಲೆಯನ್ನೇ ಹೊಂದಿವೆ. ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಇದಕ್ಕೆ ಉತ್ತಮ ಉದಾಹರಣೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಈ ಕಾರಿನ ಬೆಲೆ ರೂ.13 ಲಕ್ಷಗಳಿಂದ ರೂ.16 ಲಕ್ಷಗಳಾಗಿದೆ. ಈ ಕಾರು ಕಾಂಪ್ಯಾಕ್ಟ್ ಎಸ್‌ಯುವಿಯಂತಿದ್ದು ಕೈಗೆಟುಕುವ ಬೆಲೆಯನ್ನು ಹೊಂದಿದೆ. ಎಲೆಕ್ಟ್ರಿಕ್ ಕಾರುಗಳು ಹೆಚ್ಚು ಮೆಕಾನಿಕಲ್ ಭಾಗಗಳನ್ನು ಹೊಂದಿಲ್ಲದ ಕಾರಣಕ್ಕೆ ಅವುಗಳ ನಿರ್ವಹಣಾ ವೆಚ್ಚವು ಕಡಿಮೆ.

ಬ್ಯಾಟರಿ ಬದಲಿಸುವ ಸಮಸ್ಯೆ
ಎಲೆಕ್ಟ್ರಿಕ್ ಕಾರಿನ ಬಗ್ಗೆ ಹೇಳುವಾಗ ಅದರ ಬ್ಯಾಟರಿಗೆ ಸಂಬಂಧಿಸಿದ ಸಮಸ್ಯೆಯ ಬಗ್ಗೆ ಹೇಳಲಾಗುತ್ತದೆ. ಯಾವುದೇ ಕಾರು 1.5 ಲಕ್ಷದಿಂದ 2 ಲಕ್ಷ ಕಿ.ಮೀಗಳವರೆಗೆ ಸಂಚರಿಸಿದ ನಂತರ ಅದರ ಕಾರ್ಯಕ್ಷಮತೆ ಕಡಿಮೆಯಾಗುತ್ತದೆ. ಎಲೆಕ್ಟ್ರಿಕ್ ಕಾರು 2.50 ಲಕ್ಷ ಕಿ.ಮೀ ಸಂಚರಿಸಿದರೂ ಅದರ ಬ್ಯಾಟರಿ 90%ನಷ್ಟು ಉಳಿಯುತ್ತದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಅಂಕಿ ಅಂಶಗಳ ಪ್ರಕಾರ 10 ವರ್ಷಗಳ ಕಾಲ ಎಲೆಕ್ಟ್ರಿಕ್ ಕಾರನ್ನು ಚಾಲನೆ ಮಾಡಿದರೆ ಆಗುವ ವೆಚ್ಚವು ಪೆಟ್ರೋಲ್ ಕಾರಿಗಿಂತ 40%ನಷ್ಟು ಕಡಿಮೆ. ಬ್ಯಾಟರಿ ಸಮಸ್ಯೆಯನ್ನು ಹೋಗಲಾಡಿಸಲು ಕಂಪನಿಗಳು 8 ವರ್ಷ ಅಥವಾ 1.50 ಲಕ್ಷ ಕಿ.ಮೀಗಳ ವಾರಂಟಿ ನೀಡುತ್ತಿವೆ.