ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

ಕಾಂಪ್ಯಾಕ್ಟ್ ಎಸ್‌ಯುವಿ ಸೆಗ್ ಮೆಂಟ್ ಭಾರತದ ಆಟೋ ಮೊಬೈಲ್ ಉದ್ಯಮದ ಜನಪ್ರಿಯ ಸೆಗ್ ಮೆಂಟ್ ಆಗಿದೆ. ಬಹುತೇಕ ಎಲ್ಲಾ ಕಾರು ತಯಾರಕ ಕಂಪನಿಗಳು ತಮ್ಮ ವಾಹನಗಳನ್ನು ಈ ಸೆಗ್ ಮೆಂಟಿನಲ್ಲಿ ಬಿಡುಗಡೆಗೊಳಿಸಿವೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

ಕಳೆದ ತಿಂಗಳ ಮಾರಾಟದ ಬಗ್ಗೆ ಹೇಳುವುದಾದರೆ, ಕಾಂಪ್ಯಾಕ್ಟ್ ಎಸ್‌ಯುವಿ ಸೆಗ್ ಮೆಂಟಿನಲ್ಲಿ ಒಟ್ಟು 43,072 ಯುನಿಟ್ ವಾಹನಗಳನ್ನು ಮಾರಾಟ ಮಾಡಲಾಗಿದೆ. ಯಾವ ಯಾವ ಮಾದರಿಗಳು ಎಷ್ಟು ಪ್ರಮಾಣದಲ್ಲಿ ಮಾರಾಟವಾಗಿವೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

1. ಮಾರುತಿ ಸುಜುಕಿ ವಿಟಾರಾ ಬ್ರೆಝಾ

ಈ ಪಟ್ಟಿಯಲ್ಲಿ ಮಾರುತಿ ಸುಜುಕಿ ಕಂಪನಿಯ ವಿಟಾರಾ ಬ್ರೆಝಾ ಮೊದಲ ಸ್ಥಾನದಲ್ಲಿದೆ. ಮಾರುತಿ ಸುಜುಕಿ ಕಂಪನಿಯು ಜೂನ್ ತಿಂಗಳಿನಲ್ಲಿ ಈ ಕಾಂಪ್ಯಾಕ್ಟ್ ಎಸ್‌ಯುವಿಯ ಒಟ್ಟು 12,833 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

2020ರ ಜೂನ್ ತಿಂಗಳಿನಲ್ಲಿ ವಿಟಾರಾ ಬ್ರೆಝಾ ಎಸ್‌ಯುವಿಯ 4,542 ಯುನಿಟ್‌ಗಳು ಮಾರಾಟವಾಗಿದ್ದವು. ವಿಟಾರಾ ಬ್ರೆಝಾ ಮಾರಾಟ ಪ್ರಮಾಣವು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 182.54%ನಷ್ಟು ಹೆಚ್ಚಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

2. ಟಾಟಾ ನೆಕ್ಸಾನ್

ಭಾರತೀಯ ಮೂಲದ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್‌ ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ ತನ್ನ ನೆಕ್ಸಾನ್ ಎಸ್‌ಯುವಿಯ 8,033 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

ಕಳೆದ ವರ್ಷ ಜೂನ್ ತಿಂಗಳಿನಲ್ಲಿ ಟಾಟಾ ನೆಕ್ಸಾನ್ ಎಸ್‌ಯುವಿಯ 3,040 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ವರ್ಷ ನೆಕ್ಸಾನ್ ಎಸ್‌ಯುವಿಯ ಮಾರಾಟ ಪ್ರಮಾಣವು 164.24%ನಷ್ಟು ಹೆಚ್ಚಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

3. ಕಿಯಾ ಸೊನೆಟ್

ದಕ್ಷಿಣ ಕೊರಿಯಾ ಮೂಲದ ಕಾರು ತಯಾರಕ ಕಂಪನಿಯಾದ ಕಿಯಾ ಮೋಟಾರ್ಸ್'ನ ಸೊನೆಟ್ ಎಸ್‌ಯುವಿಯು ಈ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

ಕಿಯಾ ಮೋಟಾರ್ಸ್ ಕಂಪನಿಯು ಜೂನ್ ತಿಂಗಳಿನಲ್ಲಿ ಈ ಎಸ್‌ಯುವಿಯ 5,963 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷ ಈ ಎಸ್‌ಯುವಿಯು ಮಾರುಕಟ್ಟೆಯಲ್ಲಿ ಇರಲಿಲ್ಲ. ಮೇ ತಿಂಗಳಿಗೆ ಹೊಲಿಸಿದರೆ ಈ ಎಸ್‌ಯುವಿಯ ಮಾರಾಟ ಪ್ರಮಾಣವು ಜೂನ್ ತಿಂಗಳಿನಲ್ಲಿ 10.02%ನಷ್ಟು ಕುಸಿದಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

4. ಹ್ಯುಂಡೈ ವೆನ್ಯೂ

ಕಿಯಾ ಪಾಲುದಾರ ಕಂಪನಿಯಾದ ಹ್ಯುಂಡೈನ ವೆನ್ಯೂ ಎಸ್‌ಯುವಿಯು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ತಿಂಗಳು ಹ್ಯುಂಡೈ ಕಂಪನಿಯು ವೆನ್ಯೂ ಎಸ್‌ಯುವಿಯ 4,865 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

2020ರ ಜೂನ್ ತಿಂಗಳಿನಲ್ಲಿ ಈ ಎಸ್‌ಯುವಿಯ 4,129 ಯುನಿಟ್‌ಗಳು ಮಾರಾಟವಾಗಿದ್ದವು. ಈ ವರ್ಷ ವೆನ್ಯೂ ಎಸ್‌ಯುವಿಯ ಮಾರಾಟ ಪ್ರಮಾಣವು 17.83%ನಷ್ಟು ಹೆಚ್ಚಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

5. ಮಹೀಂದ್ರಾ ಎಕ್ಸ್‌ಯುವಿ 300

ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯ ಎಕ್ಸ್‌ಯುವಿ 300 ಈ ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಪಡೆದುಕೊಂಡಿದೆ. ಮಹೀಂದ್ರಾ ಕಂಪನಿಯು ಜೂನ್‌ ತಿಂಗಳಿನಲ್ಲಿ ಎಕ್ಸ್‌ಯುವಿ 300ನ 4,615 ಯುನಿಟ್‌ಗಳನ್ನು ಮಾರಾಟ ಮಾಡಿದೆ, ಕಳೆದ ವರ್ಷ ಈ ಎಸ್‌ಯುವಿಯ 1,812 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಎಸ್‌ಯುವಿಯ ಮಾರಾಟ ಪ್ರಮಾಣವು ಈ ಬಾರಿ 154.69%ನಷ್ಟು ಹೆಚ್ಚಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

6. ಫೋರ್ಡ್ ಇಕೋಸ್ಪೋರ್ಟ್

ಫೋರ್ಡ್ ಕಂಪನಿಯ ಇಕೋಸ್ಪೋರ್ಟ್ ಎಸ್‌ಯುವಿಯು ಈ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಕಳೆದ ತಿಂಗಳು ಫೋರ್ಡ್ ಇಂಡಿಯಾ ಕಂಪನಿಯು ಇಕೋಸ್ಪೋರ್ಟ್ ಎಸ್‌ಯುವಿಯ 3,511 ಯುನಿಟ್'ಗಳನ್ನು ಮಾರಾಟ ಮಾಡಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

ಫೋರ್ಡ್ ಕಂಪನಿಯು 2020ರ ಜೂನ್ ತಿಂಗಳಿನಲ್ಲಿ ಈ ಕಾಂಪ್ಯಾಕ್ಟ್ ಎಸ್‌ಯುವಿಯ 1,212 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಈ ವರ್ಷ ಇಕೋಸ್ಪೋರ್ಟ್ ಎಸ್‌ಯುವಿಯ ಮಾರಾಟ ಪ್ರಮಾಣವು 189.69%ನಷ್ಟು ಹೆಚ್ಚಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು

7. ನಿಸ್ಸಾನ್ ಮ್ಯಾಗ್ನೈಟ್

ನಿಸ್ಸಾನ್ ಕಂಪನಿಯು ಕಳೆದ ತಿಂಗಳು ಮ್ಯಾಗ್ನೈಟ್ ಎಸ್‌ಯುವಿಯ ಒಟ್ಟು 3,252 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಈ ವರ್ಷದ ಮೇ ತಿಂಗಳಿಗೆ ಹೋಲಿಸಿದರೆ ಜೂನ್ ತಿಂಗಳಿನಲ್ಲಿ ಮ್ಯಾಗ್ನೈಟ್ ಎಸ್‌ಯುವಿಯ ಮಾರಾಟವು 171%ನಷ್ಟು ಹೆಚ್ಚಳವಾಗಿದೆ. ಕಳೆದ ವರ್ಷದ ಜೂನ್‌ ತಿಂಗಳಿನಲ್ಲಿ ಈ ಎಸ್‌ಯುವಿಯು ಮಾರಾಟಕ್ಕೆ ಲಭ್ಯವಿರಲಿಲ್ಲ.

Most Read Articles

Kannada
English summary
Compact SUV sales in domestic market during June 2021. Read in Kannada.
Story first published: Saturday, July 3, 2021, 18:03 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X