ಜುಲೈ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ಕೋವಿಡ್ 2ನೇ ಅಲೆ ಪರಿಣಾಮ ಕುಸಿದಿರುವ ಹೊಸ ವಾಹನಗಳ ಮಾರಾಟವನ್ನು ಸುಧಾರಿಸಲು ವಿವಿಧ ಕಾರು ಕಂಪನಿಗಳು ಆಕರ್ಷಕ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ದಟ್ಸನ್ ಕಂಪನಿಯು ಸಹ ವಿವಿಧ ಕಾರುಗಳ ಮೇಲೆ ಜುಲೈ ಅವಧಿಗಾಗಿ ಹಲವಾರು ಕೊಡುಗೆಗಳನ್ನು ಪ್ರಕಟಿಸಿದೆ.

ಜುಲೈ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ಸಂಕಷ್ಟದ ಸಮಯದಲ್ಲಿ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನ ಖರೀದಿದಾರರು ವಾಹನ ಖರೀದಿಯಿಂದ ಹಿಂದೆ ಸರಿಯುತ್ತಿರುವುದು ಆಟೋ ಕಂಪನಿಗಳಿಗೆ ಭಾರೀ ನಷ್ಟ ಭೀತಿ ಎದುರಾಗಿದ್ದು, ಈ ಹಿನ್ನಲೆಯಲ್ಲಿ ಪ್ರಮುಖ ಕಾರು ಕಂಪನಿಗಳು ಹೊಸ ವಾಹನ ಖರೀದಿಯನ್ನು ಉತ್ತೇಜಿಸಲು ಹೊಸ ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿವೆ.

ಜುಲೈ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ದಟ್ಸನ್ ಕಂಪನಿಯು ಸಹ ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿವೆ.

ಜುಲೈ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ದಟ್ಸನ್ ಕಂಪನಿಯು ತನ್ನ ರೆಡಿ-ಗೊ, ಗೊ ಮತ್ತು ಗೊ ಪ್ಲಸ್ ಮಾದರಿಗಳ ಮೇಲೆ ಆಫರ್ ನೀಡಲಾಗುತ್ತಿದ್ದು, ಎಂಟ್ರಿ ಲೆವಲ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಉತ್ತಮ ಆಯ್ಕೆಗಳಿವೆ

ಜುಲೈ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ಹೊಸ ಆಫರ್‌ಗಳಲ್ಲಿ ರೆಡಿ-ಗೊ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ರೂ.39 ಸಾವಿರ ಡಿಸ್ಕೌಂಟ್ ಪಡೆದುಕೊಂಡಿದ್ದು, ಇದರಲ್ಲಿ ರೂ. 20 ಸಾವಿರ ಕ್ಯಾಶ್‌ಬ್ಯಾಕ್, ರೂ.15 ಸಾವಿರ ಎಕ್ಸ್‌ಚೆಂಜ್ ಆಫರ್ ಪಡೆಯಬಹುದಾಗಿದೆ.

ಜುಲೈ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ಜೊತೆಗೆ ದಟ್ಸನ್ ನಿರ್ಮಾಣದ ಯಾವುದೇ ಕಾರು ಖರೀದಿಸುವ ಗ್ರಾಹಕರಿಗೆ ವಿವಿಧ ಆಫರ್ ಜೊತೆಗೆ ಹೆಚ್ಚುವರಿಯಾಗಿ ರೂ. 4 ಸಾವಿರದಷ್ಟು ಸರ್ಕಾರಿ ಅಧಿಕಾರಿಗಳಿಗಾಗಿ ಕ್ಯಾಶ್‌ಬ್ಯಾಕ್ ಲಭ್ಯವಿರಲಿದ್ದು, ರೆಡಿ-ಗೊ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 3.83 ಲಕ್ಷದಿಂದ ರೂ. 4.95 ಲಕ್ಷ ಬೆಲೆ ಹೊಂದಿದೆ.

ಜುಲೈ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ಮಧ್ಯಮ ಕ್ರಮಾಂಕದ ಗೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯ ಮೇಲೆ ರೂ. 40 ಸಾವಿರ ಆಫರ್ ನೀಡಲಾಗುತ್ತಿದ್ದ, ಇದರಲ್ಲಿ ರೂ. 20 ಸಾವಿರ ಎಕ್ಸ್‌ಚೆಂಜ್ ಮತ್ತು ರೂ.20 ಸಾವಿರ ಕ್ಯಾಶ್‌ಬ್ಯಾಕ್ ಆಫರ್ ಹೊಂದಿದೆ.

ಜುಲೈ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ದಟ್ಸನ್ ಗೊ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.02 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 6.51 ಲಕ್ಷ ಬೆಲೆ ಹೊಂದಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರುವ ಬಜೆಟ್ ಬೆಲೆಯ ಕಾರು ಮಾದರಿಯಾಗಿದೆ.

ಜುಲೈ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ಇನ್ನು ಗೊ ಪ್ಲಸ್ ಕಾರು ಮಾದರಿಯು ದಟ್ಸನ್ ನಿರ್ಮಾಣದ ಎಂಟ್ರಿ ಲೆವಲ್ ಕಂಪ್ಯಾಕ್ಟ್ ಎಂಪಿವಿ ಕಾರು ಮಾದರಿಯಾಗಿದ್ದು, ಗೊ ಪ್ಲಸ್ ಕಾರು ಮಾದರಿಯ ಮೇಲೂ ರೂ. 40 ಸಾವಿರ ಡಿಸ್ಕೌಂಟ್ ಲಭ್ಯವಿದೆ.

ಜುಲೈ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ರೂ. 40 ಸಾವಿರ ಮೌಲ್ಯದ ವಿವಿಧ ಆಫರ್‌ಗಳಲ್ಲಿ ರೂ.20 ಸಾವಿರ ಕ್ಯಾಶ್‌ ಡಿಸ್ಕೌಂಟ್, ರೂ. 20 ಸಾವಿರ ಎಕ್ಸ್‌ಚೆಂಜ್ ಬೋನಸ್‌ನೊಂದಿಗೆ ರೂ. 5 ಸಾವಿರ ಹೆಚ್ಚುವರಿಯಾಗಿ ಆನ್‌ಲೈನ್ ಬುಕ್ಕಿಂಗ್ ಮೇಲೆ ವಿನಾಯ್ತಿ ಪಡೆಯಬಹುದಾಗಿದೆ.

ಜುಲೈ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ಗೊ ಪ್ಲಸ್ ಕಾರು ಮಾದರಿಯು ಗೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯಲ್ಲಿರುವಂತೆಯೇ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಜುಲೈ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ದಟ್ಸನ್ ಗೊ ಪ್ಲಸ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.25 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 6.99 ಲಕ್ಷ ಬೆಲೆ ಹೊಂದಿದ್ದು, ಈ ಹಣಕಾಸು ವರ್ಷದ ಕೊನೆಯಲ್ಲಿ ಕಾರು ಖರೀದಿಸುವ ಗ್ರಾಹಕರಿಗೆ ದಟ್ಸನ್ ಕಾರುಗಳ ಖರೀದಿ ಮೇಲೆ ಅತ್ಯುತ್ತಮ ಆಫರ್‌ಗಳನ್ನು ಪಡೆಯಬಹುದಾಗಿದೆ.

Most Read Articles

Kannada
English summary
Datsun India Announced Offers And Benefits. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X