ಜೂನ್ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ಕೋವಿಡ್ ಪರಿಣಾಮ ಕಳೆದ ವರ್ಷ ಕನಿಷ್ಠ ಪ್ರಮಾಣದ ಹೊಸ ವಾಹನಗಳನ್ನು ಮಾರಾಟ ಮಾಡಿದ್ದ ಕಾರು ಕಂಪನಿಗಳಿಗೆ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದ ಬೇಡಿಕೆ ಹರಿದುಬಂದಿದ್ದು, ಇದೀಗ ಕೋವಿಡ್ 2ನೇ ಅಲೆ ಪರಿಣಾಮ ಹಲವು ಕಾರು ಕಂಪನಿಗಳು ಮತ್ತೆ ಸಂಕಷ್ಟ ಎದುರಿಸುತ್ತಿವೆ.

ಜೂನ್ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ಸಂಕಷ್ಟದ ಸಮಯದಲ್ಲಿ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನ ಖರೀದಿದಾರರು ವಾಹನ ಖರೀದಿಯಿಂದ ಹಿಂದೆ ಸರಿಯುತ್ತಿರುವುದು ಆಟೋ ಕಂಪನಿಗಳಿಗೆ ಭಾರೀ ನಷ್ಟ ಭೀತಿ ಎದುರಾಗಿದ್ದು, ಈ ಹಿನ್ನಲೆಯಲ್ಲಿ ಪ್ರಮುಖ ಕಾರು ಕಂಪನಿಗಳು ಹೊಸ ವಾಹನ ಖರೀದಿಯನ್ನು ಉತ್ತೇಜಿಸಲು ಹೊಸ ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿವೆ.

ಜೂನ್ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ದಟ್ಸನ್ ಕಂಪನಿಯು ಸಹ ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿವೆ.

ಜೂನ್ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ದಟ್ಸನ್ ಕಂಪನಿಯು ತನ್ನ ರೆಡಿ-ಗೊ, ಗೊ ಮತ್ತು ಗೊ ಪ್ಲಸ್ ಮಾದರಿಗಳ ಮೇಲೆ ಆಫರ್ ನೀಡಲಾಗುತ್ತಿದ್ದು, ಎಂಟ್ರಿ ಲೆವಲ್ ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರಿಗೆ ಉತ್ತಮ ಆಯ್ಕೆಗಳಿವೆ

ಜೂನ್ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ಹೊಸ ಆಫರ್‌ಗಳಲ್ಲಿ ರೆಡಿ-ಗೊ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ರೂ.35 ಸಾವಿರ ಡಿಸ್ಕೌಂಟ್ ಪಡೆದುಕೊಂಡಿದ್ದು, ಇದರಲ್ಲಿ ರೂ. 20 ಸಾವಿರ ಕ್ಯಾಶ್‌ಬ್ಯಾಕ್, ರೂ.15 ಸಾವಿರ ಎಕ್ಸ್‌ಚೆಂಜ್ ಆಫರ್ ಪಡೆಯಬಹುದಾಗಿದೆ.

ಜೂನ್ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ಜೊತೆಗೆ ದಟ್ಸನ್ ನಿರ್ಮಾಣದ ಯಾವುದೇ ಕಾರು ಖರೀದಿಸುವ ಗ್ರಾಹಕರಿಗೆ ವಿವಿಧ ಆಫರ್ ಜೊತೆಗೆ ಹೆಚ್ಚುವರಿಯಾಗಿ ರೂ. 7 ಸಾವಿರದಷ್ಟು ಕ್ರೆಡಿಟ್ ಕಾರ್ಡ್‌ನ ಸಿವಿಲ್ ಸ್ಕೋರ್ ಆಧರಿಸಿ ಕ್ಯಾಶ್‌ಬ್ಯಾಕ್ ಲಭ್ಯವಿರಲಿದ್ದು, ರೆಡಿ-ಗೊ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 3.83 ಲಕ್ಷದಿಂದ ರೂ. 4.95 ಲಕ್ಷ ಬೆಲೆ ಹೊಂದಿದೆ.

ಜೂನ್ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ದಟ್ಸನ್ ಗೊ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.02 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 6.51 ಲಕ್ಷ ಬೆಲೆ ಹೊಂದಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರುವ ಬಜೆಟ್ ಬೆಲೆಯ ಕಾರು ಮಾದರಿಯಾಗಿದೆ.

ಜೂನ್ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ಇನ್ನು ಗೊ ಪ್ಲಸ್ ಕಾರು ಮಾದರಿಯು ದಟ್ಸನ್ ನಿರ್ಮಾಣದ ಎಂಟ್ರಿ ಲೆವಲ್ ಕಂಪ್ಯಾಕ್ಟ್ ಎಂಪಿವಿ ಕಾರು ಮಾದರಿಯಾಗಿದ್ದು, ಗೊ ಪ್ಲಸ್ ಕಾರು ಮಾದರಿಯ ಮೇಲೂ ರೂ. 37 ಸಾವಿರ ಡಿಸ್ಕೌಂಟ್ ಲಭ್ಯವಿದೆ.

ಜೂನ್ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ರೂ. 37 ಸಾವಿರ ಮೌಲ್ಯದ ವಿವಿಧ ಆಫರ್‌ಗಳಲ್ಲಿ ರೂ.15 ಸಾವಿರ ಕ್ಯಾಶ್‌ ಡಿಸ್ಕೌಂಟ್, ರೂ. 15 ಸಾವಿರ ಎಕ್ಸ್‌ಚೆಂಜ್ ಬೋನಸ್‌ನೊಂದಿಗೆ ರೂ. 7 ಸಾವಿರ ಹೆಚ್ಚುವರಿಯಾಗಿ ಕ್ರೆಡಿಟ್ ಕಾರ್ಡ್ ಸಿವಿಲ್ ಸ್ಕೋರ್ ಆಧರಿಸಿ ಕ್ಯಾಶ್‌ಬ್ಯಾಕ್ ಪಡೆಯಬಹುದಾಗಿದೆ.

ಜೂನ್ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ಗೊ ಪ್ಲಸ್ ಕಾರು ಮಾದರಿಯು ಗೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯಲ್ಲಿರುವಂತೆಯೇ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಜೂನ್ ಅವಧಿಗಾಗಿ ದಟ್ಸನ್ ಕಾರುಗಳ ಖರೀದಿ ಮೇಲೆ ವಿವಿಧ ಆಫರ್ ಘೋಷಣೆ

ದಟ್ಸನ್ ಗೊ ಪ್ಲಸ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.25 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 6.99 ಲಕ್ಷ ಬೆಲೆ ಹೊಂದಿದ್ದು, ಈ ಹಣಕಾಸು ವರ್ಷದ ಕೊನೆಯಲ್ಲಿ ಕಾರು ಖರೀದಿಸುವ ಗ್ರಾಹಕರಿಗೆ ದಟ್ಸನ್ ಕಾರುಗಳ ಖರೀದಿ ಮೇಲೆ ಅತ್ಯುತ್ತಮ ಆಫರ್‌ಗಳನ್ನು ಪಡೆಯಬಹುದಾಗಿದೆ.

More from DriveSpark

Article Published On: Saturday, June 12, 2021, 8:45 [IST]
English summary
Datsun Announced Discounts And Offers For Its Models In June 2021. Read in Kannada.
Read more on ದಟ್ಸನ್ datsun
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+