ದಟ್ಸನ್ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಣೆ
ದಟ್ಸನ್ ಕಂಪನಿಯು ತನ್ನ ವಿವಿಧ ಕಾರು ಮಾದರಿಗಳ ಖರೀದಿ ಮೇಲೆ ಮಾರ್ಚ್ ಅವಧಿಗಾಗಿ ಗರಿಷ್ಠ ಪ್ರಮಾಣದ ಡಿಸ್ಕೌಂಟ್ ಆಫರ್ ನೀಡುತ್ತಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಗ್ರಾಹಕರು ಗರಿಷ್ಠ ರೂ.45 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಕೋವಿಡ್-19 ಪರಿಣಾಮ ಕಾರು ಮಾರಾಟದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಪ್ರಮುಖ ಆಟೋ ಕಂಪನಿಗಳು ಪರಿಸ್ಥಿತಿಗೆ ಅನುಗುಣವಾಗಿ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ವಿವಿಧ ಆಫರ್‌ಗಳು ಮತ್ತು ಸರಳ ಸಾಲ ಸೌಲಭ್ಯಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ. ಲಾಕ್‌ಡೌನ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಕಾರು ಖರೀದಿ ಯೋಜನೆಯಿಂದ ಹಿಂದೆ ಸರಿದಿದ್ದ ಹಲವು ಗ್ರಾಹಕರು ಇದೀಗ ಕಾರು ಖರೀದಿಗೆ ಮುಂದಾಗುತ್ತಿರುವುದು ಕಾರು ಕಂಪನಿಗಳಿಗೆ ಭರ್ಜರಿ ಬೇಡಿಕೆ ಹರಿದುಬರುತ್ತಿದೆ.

ಹೊಸ ಕಾರು ಮಾದರಿಗಳಿಗೆ ಬೇಡಿಕೆ ಹೆಚ್ಚಿದ ಹಿನ್ನಲೆಯಲ್ಲಿ ವಾಹನಗಳ ಖರೀದಿಯ ಮೇಲೆ ಗರಿಷ್ಠ ಆಫರ್‌ಗಳ ಜೊತೆಗೆ ಸರಳ ಸಾಲ-ಸೌಲಭ್ಯ ನೀಡುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ದಟ್ಸನ್ ಸಹ ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಆಫರ್ ಘೋಷಿಸಿದೆ.

ದಟ್ಸನ್ ಕಂಪನಿಯು ವಿವಿಧ ಕಾರುಗಳ ಖರೀದಿ ಮೇಲೆ ರೂ.45 ಸಾವಿರದಿಂದ ರೂ. 50 ಸಾವಿರದಷ್ಟು ಆಫರ್ ಲಭ್ಯವಿರಲಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್‌ಬ್ಯಾಕ್, ಎಕ್ಸ್‌ಚೆಂಜ್, ಲೊಯಾಲಿಟಿ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಆಕ್ಸೆಸರಿಸ್‌ಗಳ ಮೇಲೆ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ಹೊಸ ಆಫರ್‌ಗಳು ಈ ತಿಂಗಳ ಕೊನೆಯ ತನಕ ಲಭ್ಯವಿದ್ದು, ರೆಡಿ-ಗೊ, ಗೊ ಮತ್ತು ಗೊ ಪ್ಲಸ್ ಮಾದರಿಗಳ ಮೇಲೆ ಆಫರ್ ನೀಡಲಾಗುತ್ತಿದೆ. ಹೊಸ ಆಫರ್‌ಗಳಲ್ಲಿ ರೆಡಿ-ಗೊ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಯು ರೂ.40 ಸಾವಿರ ಡಿಸ್ಕೌಂಟ್ ಪಡೆದುಕೊಂಡಿದ್ದು, ಇದರಲ್ಲಿ ರೂ. 15 ಸಾವಿರ ಕ್ಯಾಶ್‌ಬ್ಯಾಕ್, ರೂ.15 ಸಾವಿರ ಎಕ್ಸ್‌ಚೆಂಜ್ ಆಫರ್ ಪಡೆಯಬಹುದಾಗಿದೆ.

ಜೊತೆಗೆ ದಟ್ಸನ್ ನಿರ್ಮಾಣದ ಯಾವುದೇ ಕಾರು ಖರೀದಿಸುವ ಗ್ರಾಹಕರಿಗೆ ವಿವಿಧ ಆಫರ್ ಜೊತೆಗೆ ಹೆಚ್ಚುವರಿಯಾಗಿ ರೂ. 10 ಸಾವಿರದಷ್ಟು ಸರ್ಕಾರಿ ಅಧಿಕಾರಿಗಳು ಅಥವಾ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಕ್ಯಾಶ್‌ಬ್ಯಾಕ್ ಲಭ್ಯವಿರಲಿದ್ದು, ರೆಡಿ-ಗೊ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 2.86 ಲಕ್ಷದಿಂದ ರೂ. 4.82 ಲಕ್ಷ ಬೆಲೆ ಹೊಂದಿದೆ.

ದಟ್ಸನ್ ಕಂಪನಿಯು ರೆಡಿ-ಗೊ ಮಾದರಿಯಂತೆ ಗೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯ ಮೇಲೂ ಆಕರ್ಷಕ ಡಿಸ್ಕೌಂಟ್ ಆಫರ್ ನೀಡುತ್ತಿದ್ದು, ರೂ. 40 ಸಾವಿರ ಮೌಲ್ಯದ ವಿವಿಧ ಆಫರ್‌ಗಳನ್ನು ನೀಡುತ್ತಿದೆ. ಇದರಲ್ಲಿ ರೂ.20 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 20 ಸಾವಿರ ಎಕ್ಸ್‌ಚೆಂಜ್ ಬೋನಸ್ ದೊರೆಯಲಿದೆ.

ದಟ್ಸನ್ ಗೊ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.02 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 6.51 ಲಕ್ಷ ಬೆಲೆ ಹೊಂದಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರುವ ಬಜೆಟ್ ಬೆಲೆಯ ಕಾರು ಮಾದರಿಯಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಇನ್ನು ಗೊ ಪ್ಲಸ್ ಕಾರು ಮಾದರಿಯು ದಟ್ಸನ್ ನಿರ್ಮಾಣದ ಎಂಟ್ರಿ ಲೆವಲ್ ಕಂಪ್ಯಾಕ್ಟ್ ಎಂಪಿವಿ ಕಾರು ಮಾದರಿಯಾಗಿದ್ದು, ಗೊ ಪ್ಲಸ್ ಕಾರು ಮಾದರಿಯ ಮೇಲೂ ರೂ. 40 ಸಾವಿರ ಡಿಸ್ಕೌಂಟ್ ಲಭ್ಯವಿದೆ. ರೂ. 40 ಸಾವಿರ ಮೌಲ್ಯದ ವಿವಿಧ ಆಫರ್‌ಗಳಲ್ಲಿ ರೂ.20 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 20 ಸಾವಿರ ಎಕ್ಸ್‌ಚೆಂಜ್ ಬೋನಸ್ ದೊರೆಯಲಿದೆ.

ಗೊ ಪ್ಲಸ್ ಕಾರು ಮಾದರಿಯು ಗೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯಲ್ಲಿರುವಂತೆಯೇ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ದಟ್ಸನ್ ಗೊ ಪ್ಲಸ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.25 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 6.99 ಲಕ್ಷ ಬೆಲೆ ಹೊಂದಿದ್ದು, ಈ ಹಣಕಾಸು ವರ್ಷದ ಕೊನೆಯಲ್ಲಿ ಕಾರು ಖರೀದಿಸುವ ಗ್ರಾಹಕರಿಗೆ ದಟ್ಸನ್ ಕಾರುಗಳ ಖರೀದಿ ಮೇಲೆ ಅತ್ಯುತ್ತಮ ಆಫರ್‌ಗಳನ್ನು ಪಡೆಯಬಹುದಾಗಿದೆ.


Click it and Unblock the Notifications








