ದಟ್ಸನ್ ಕಾರುಗಳ ಖರೀದಿಯ ಮೇಲೆ ಇಯರ್ ಎಂಡ್ ಆಫರ್ ಘೋಷಣೆ
ದಟ್ಸನ್ ಕಾರು ಕಂಪನಿಯು ಹೊಸ ಕಾರು ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳುತ್ತಿದ್ದು, ಕೋವಿಡ್ ಪರಿಣಾಮ ತಗ್ಗಿರುವ ಏರಿಳಿತವಾಗುತ್ತಿರುವ ಹೊಸ ವಾಹನಗಳ ಮಾರಾಟವನ್ನು ಸುಧಾರಿಸಲು ಹಲವು ಹೊಸ ಕೊಡುಗೆಗಳನ್ನು ಪ್ರಕಟಿಸುತ್ತಿದೆ.

ಕೋವಿಡ್ ಪರಿಣಾಮ ಏರಿಳಿತವಾಗಿರುವ ಹೊಸ ವಾಹನಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಮುಂದಾಗಿರುವ ಪ್ರಮುಖ ಕಾರು ಕಂಪನಿಗಳು ವರ್ಷಾಂತ್ಯದಲ್ಲಿ ವಾಹನ ಖರೀದಿದಾರರನ್ನು ಸೆಳೆಯಲು ವಿವಿಧ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ದಟ್ಸನ್ ಇಂಡಿಯಾ ಕಂಪನಿಯು ಸಹ ಡಿಸೆಂಬರ್ ಅವಧಿಯಲ್ಲಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ನೀಡುತ್ತಿದೆ.

ದಟ್ಸನ್ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ದಟ್ಸನ್ ಕಾರು ಕಂಪನಿಯು ಸಹ ಡಿಸೆಂಬರ್ ಅವಧಿಗಾಗಿ ಹಲವಾರು ಕೊಡುಗೆಗಳನ್ನು ಪ್ರಕಟಿಸಿದೆ.

ದಟ್ಸನ್ ಕಂಪನಿಯು ತನ್ನ ರೆಡಿ-ಗೊ, ಗೊ ಮತ್ತು ಗೊ ಪ್ಲಸ್ ಮಾದರಿಗಳ ಮೇಲೆ ಆಫರ್ ನೀಡಲಾಗುತ್ತಿದ್ದು, ಎಂಟ್ರಿ ಲೆವಲ್ ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರಿಗೆ ಉತ್ತಮ ಆಯ್ಕೆಗಳಿವೆ.

ಜೊತೆಗೆ ದಟ್ಸನ್ ನಿರ್ಮಾಣದ ಯಾವುದೇ ಕಾರು ಖರೀದಿಸುವ ಗ್ರಾಹಕರಿಗೆ ವಿವಿಧ ಆಫರ್ ಜೊತೆಗೆ ಹೆಚ್ಚುವರಿಯಾಗಿ ರೂ. 4 ಸಾವಿರದಷ್ಟು ಸರ್ಕಾರಿ ಅಧಿಕಾರಿಗಳಿಗಾಗಿ ಕ್ಯಾಶ್‌ಬ್ಯಾಕ್ ಲಭ್ಯವಿರಲಿದ್ದು, ರೆಡಿ-ಗೊ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 3.83 ಲಕ್ಷದಿಂದ ರೂ. 4.95 ಲಕ್ಷ ಬೆಲೆ ಹೊಂದಿದೆ.

ಮಧ್ಯಮ ಕ್ರಮಾಂಕದ ಗೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯ ಮೇಲೆ ರೂ. 40 ಸಾವಿರ ಆಫರ್ ನೀಡಲಾಗುತ್ತಿದ್ದ, ಇದರಲ್ಲಿ ರೂ. 20 ಸಾವಿರ ಎಕ್ಸ್‌ಚೆಂಜ್ ಮತ್ತು ರೂ.20 ಸಾವಿರ ಕ್ಯಾಶ್‌ಬ್ಯಾಕ್ ಆಫರ್ ಹೊಂದಿದೆ.

ದಟ್ಸನ್ ಗೊ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.02 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 6.51 ಲಕ್ಷ ಬೆಲೆ ಹೊಂದಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರುವ ಬಜೆಟ್ ಬೆಲೆಯ ಕಾರು ಮಾದರಿಯಾಗಿದೆ.

ಇನ್ನು ಗೊ ಪ್ಲಸ್ ಕಾರು ಮಾದರಿಯು ದಟ್ಸನ್ ನಿರ್ಮಾಣದ ಎಂಟ್ರಿ ಲೆವಲ್ ಕಂಪ್ಯಾಕ್ಟ್ ಎಂಪಿವಿ ಕಾರು ಮಾದರಿಯಾಗಿದ್ದು, ಗೊ ಪ್ಲಸ್ ಕಾರು ಮಾದರಿಯ ಮೇಲೂ ರೂ. 40 ಸಾವಿರ ಡಿಸ್ಕೌಂಟ್ ಲಭ್ಯವಿದೆ.

ರೂ. 40 ಸಾವಿರ ಮೌಲ್ಯದ ವಿವಿಧ ಆಫರ್‌ಗಳಲ್ಲಿ ರೂ.20 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 20 ಸಾವಿರ ಎಕ್ಸ್‌ಚೆಂಜ್ ಬೋನಸ್‌ನೊಂದಿಗೆ ರೂ. 5 ಸಾವಿರ ಹೆಚ್ಚುವರಿಯಾಗಿ ಆನ್‌ಲೈನ್ ಬುಕ್ಕಿಂಗ್ ಮೇಲೆ ವಿನಾಯ್ತಿ ಪಡೆಯಬಹುದಾಗಿದೆ.

ಗೊ ಪ್ಲಸ್ ಕಾರು ಮಾದರಿಯು ಗೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯಲ್ಲಿರುವಂತೆಯೇ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ದಟ್ಸನ್ ಗೊ ಪ್ಲಸ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.25 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 6.99 ಲಕ್ಷ ಬೆಲೆ ಹೊಂದಿದ್ದು, ಈ ಹಣಕಾಸು ವರ್ಷದ ಕೊನೆಯಲ್ಲಿ ಕಾರು ಖರೀದಿಸುವ ಗ್ರಾಹಕರಿಗೆ ದಟ್ಸನ್ ಕಾರುಗಳ ಖರೀದಿ ಮೇಲೆ ಅತ್ಯುತ್ತಮ ಆಫರ್‌ಗಳನ್ನು ಪಡೆಯಬಹುದಾಗಿದೆ.
ಇನ್ನು ಹೊಸ ಕಾರುಗಳು ಕೋವಿಡ್ ಪರಿಣಾಮ ತಗ್ಗಿರುವ ಏರಿಳಿತವಾಗುತ್ತಿರುವ ಹೊಸ ವಾಹನಗಳ ಮಾರಾಟವನ್ನು ಸುಧಾರಿಸಲು ಹಲವು ಹೊಸ ಕೊಡುಗೆಗಳನ್ನು ಪ್ರಕಟಿಸುತ್ತಿದ್ದು, ದಟ್ಸನ್ ಸೇರಿದಂತೆ ಹವವ ಹೊಸ ಕಾರುಗಳ ಮೇಲೆ ಡಿಸೆಂಬರ್ ಅವಧಿಗಾಗಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ನೀಡುತ್ತಿದೆ.


Click it and Unblock the Notifications








