ಹೊಸ ವರ್ಷದ ಸಂಭ್ರಮಕ್ಕಾಗಿ ದಟ್ಸನ್ ವಿವಿಧ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ದಟ್ಸನ್ ಇಂಡಿಯಾ ಕಂಪನಿಯು ತನ್ನ ವಿವಿಧ ಕಾರು ಮಾದರಿಗಳ ಮೇಲೆ ಗರಿಷ್ಠ ಪ್ರಮಾಣದ ಡಿಸ್ಕೌಂಟ್ ಆಫರ್ ನೀಡುತ್ತಿದ್ದು, ಹೊಸ ಕಾರುಗಳ ಖರೀದಿ ಮೇಲೆ ಗ್ರಾಹಕರು ಗರಿಷ್ಠ ರೂ.40 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಹೊಸ ವರ್ಷದ ಸಂಭ್ರಮಕ್ಕಾಗಿ ದಟ್ಸನ್ ವಿವಿಧ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಕೋವಿಡ್-19 ಪರಿಣಾಮ ಕಾರು ಮಾರಾಟದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಪ್ರಮುಖ ಆಟೋ ಕಂಪನಿಗಳು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ದಸರಾ ಮತ್ತು ದೀಪಾವಳಿಯ ನಂತರ ವಾಹನ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಆಫರ್‌ಗಳು ಮತ್ತು ಸರಳ ಸಾಲ ಸೌಲಭ್ಯಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ. ಲಾಕ್‌ಡೌನ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಕಾರು ಖರೀದಿ ಯೋಜನೆಯಿಂದ ಹಿಂದೆ ಸರಿದಿದ್ದ ಹಲವು ಗ್ರಾಹಕರು ಇದೀಗ ಕಾರು ಖರೀದಿಗೆ ಮುಂದಾಗುತ್ತಿರುವುದು ಕಾರು ಕಂಪನಿಗಳಿಗೆ ಭರ್ಜರಿ ಬೇಡಿಕೆ ಹರಿದುಬರುತ್ತಿದೆ.

ಹೊಸ ವರ್ಷದ ಸಂಭ್ರಮಕ್ಕಾಗಿ ದಟ್ಸನ್ ವಿವಿಧ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ಕಾರು ಮಾದರಿಗಳಿಗೆ ಬೇಡಿಕೆ ಹೆಚ್ಚಿದ ಹಿನ್ನಲೆಯಲ್ಲಿ ಕಾರು ಖರೀದಿ ಮೇಲೆ ಗರಿಷ್ಠ ಆಫರ್‌ಗಳ ಜೊತೆಗೆ ಸರಳ ಸಾಲ-ಸೌಲಭ್ಯ ನೀಡುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ದಟ್ಸನ್ ಸಹ ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಆಫರ್ ಘೋಷಣೆ ಮಾಡಿದೆ.

ಹೊಸ ವರ್ಷದ ಸಂಭ್ರಮಕ್ಕಾಗಿ ದಟ್ಸನ್ ವಿವಿಧ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ದಟ್ಸನ್ ಕಂಪನಿಯು ವಿವಿಧ ಕಾರುಗಳ ಖರೀದಿ ಮೇಲೆ ಗರಿಷ್ಠ ರೂ. 40 ಸಾವಿರದಷ್ಟು ಆಫರ್ ಲಭ್ಯವಿರಲಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್‌ಬ್ಯಾಕ್, ಎಕ್ಸ್‌ಚೆಂಜ್, ಲೊಯಾಲಿಟಿ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಆಕ್ಸೆಸರಿಸ್‌ಗಳ ಮೇಲೆ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ಹೊಸ ವರ್ಷದ ಸಂಭ್ರಮಕ್ಕಾಗಿ ದಟ್ಸನ್ ವಿವಿಧ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ಆಫರ್‌ಗಳು ಈ ತಿಂಗಳ ಅಂತ್ಯವರೆಗೆ ಲಭ್ಯವಿದ್ದು, ರೆಡಿ-ಗೊ, ಗೊ ಮತ್ತು ಗೊ ಪ್ಲಸ್ ಮಾದರಿಗಳ ಮೇಲೆ ಆಫರ್ ನೀಡಲಾಗುತ್ತಿದೆ. ಹೊಸ ಆಫರ್‌ಗಳಲ್ಲಿ ರೆಡಿ-ಗೊ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಯು ರೂ.35,000 ಡಿಸ್ಕೌಂಟ್ ಪಡೆದುಕೊಂಡಿದ್ದು, ಇದರಲ್ಲಿ ರೂ. 15 ಸಾವಿರ ಕ್ಯಾಶ್‌ಬ್ಯಾಕ್, ರೂ.15 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡಲಾಗುತ್ತಿದೆ.

ಹೊಸ ವರ್ಷದ ಸಂಭ್ರಮಕ್ಕಾಗಿ ದಟ್ಸನ್ ವಿವಿಧ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಜೊತೆಗೆ ದಟ್ಸನ್ ನಿರ್ಮಾಣದ ಯಾವುದೇ ಕಾರು ಖರೀದಿಸುವ ಗ್ರಾಹಕರಿಗೆ ವಿವಿಧ ಆಫರ್ ಜೊತೆಗೆ ಹೆಚ್ಚುವರಿಯಾಗಿ ರೂ. 5 ಸಾವಿರ ಕಾರ್ಪೋರೇಟ್ ಆಫರ್ ಲಭ್ಯವಿರಲಿದ್ದು, ರೆಡಿ-ಗೊ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 2.86 ಲಕ್ಷದಿಂದ ರೂ. 4.82 ಲಕ್ಷ ಬೆಲೆ ಹೊಂದಿದೆ.

ಹೊಸ ವರ್ಷದ ಸಂಭ್ರಮಕ್ಕಾಗಿ ದಟ್ಸನ್ ವಿವಿಧ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ದಟ್ಸನ್ ಕಂಪನಿಯು ರೆಡಿ-ಗೊ ಮಾದರಿಯಂತೆ ಗೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯ ಮೇಲೂ ಆಕರ್ಷಕ ಡಿಸ್ಕೌಂಟ್ ಆಫರ್ ನೀಡುತ್ತಿದ್ದು, ರೂ. 40 ಸಾವಿರ ಮೌಲ್ಯದ ವಿವಿಧ ಆಫರ್‌ಗಳನ್ನು ನೀಡುತ್ತಿದೆ. ಇದರಲ್ಲಿ ರೂ.20 ಸಾವಿರ ಕ್ಯಾಶ್‌ ಡಿಸ್ಕೌಂಟ್, ರೂ. 20 ಸಾವಿರ ಎಕ್ಸ್‌ಚೆಂಜ್ ಬೋನಸ್ ದೊರೆಯಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ವರ್ಷದ ಸಂಭ್ರಮಕ್ಕಾಗಿ ದಟ್ಸನ್ ವಿವಿಧ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ದಟ್ಸನ್ ಗೊ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.02 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 6.31 ಲಕ್ಷ ಬೆಲೆ ಹೊಂದಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರುವ ಬಜೆಟ್ ಬೆಲೆಯ ಕಾರು ಮಾದರಿಯಾಗಿದೆ.

ಹೊಸ ವರ್ಷದ ಸಂಭ್ರಮಕ್ಕಾಗಿ ದಟ್ಸನ್ ವಿವಿಧ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಇನ್ನು ಗೊ ಪ್ಲಸ್ ಕಾರು ಮಾದರಿಯು ದಟ್ಸನ್ ನಿರ್ಮಾಣದ ಎಂಟ್ರಿ ಲೆವಲ್ ಕಂಪ್ಯಾಕ್ಟ್ ಎಂಪಿವಿ ಕಾರು ಮಾದರಿಯಾಗಿದ್ದು, ಗೊ ಪ್ಲಸ್ ಕಾರು ಮಾದರಿಯ ಮೇಲೆ ರೂ. 40 ಸಾವಿರ ಡಿಸ್ಕೌಂಟ್ ಲಭ್ಯವಿದೆ. ರೂ. 40 ಸಾವಿರ ಮೌಲ್ಯದ ವಿವಿಧ ಆಫರ್‌ಗಳಲ್ಲಿ ರೂ.20 ಸಾವಿರ ಕ್ಯಾಶ್‌ ಡಿಸ್ಕೌಂಟ್, ರೂ. 20 ಸಾವಿರ ಎಕ್ಸ್‌ಚೆಂಜ್ ಬೋನಸ್ ದೊರೆಯಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ವರ್ಷದ ಸಂಭ್ರಮಕ್ಕಾಗಿ ದಟ್ಸನ್ ವಿವಿಧ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಗೊ ಪ್ಲಸ್ ಕಾರು ಮಾದರಿಯು ಗೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯಲ್ಲಿರುವಂತೆಯೇ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

More from DriveSpark

Article Published On: Thursday, January 14, 2021, 8:45 [IST]
English summary
Datsun Cars Discounts & New Year Offers Announced For January 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+