Just In
Don't Miss!
- Sports
ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್, Live ಸ್ಕೋರ್, ಪ್ಲೇಯಿಂಗ್ XI
- News
ಮಗಳ ಶಿರಚ್ಛೇದ ಮಾಡಿ, ರುಂಡದೊಂದಿಗೆ ಪೊಲೀಸರಿಗೆ ಶರಣಾದ ತಂದೆ
- Finance
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 8.5 ರೂ. ಕಡಿತಗೊಳಿಸಬಹುದು!
- Movies
ಮೊದಲ ವಾರವೇ ಹೊರಹೋಗ್ತಾರಾ ಶುಭಾ ಪೂಂಜಾ: ನಾಮಿನೇಟ್ ಆಗಿದ್ದು ಹೇಗೆ?
- Lifestyle
ದಿನ ಭವಿಷ್ಯ: ಗುರುವಾರದ ರಾಶಿಫಲ ಹೇಗಿದೆ ನೋಡಿ
- Education
Vijayapura District Court Recruitment 2021: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದಟ್ಸನ್ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್
ದಟ್ಸನ್ ಕಂಪನಿಯು ತನ್ನ ವಿವಿಧ ಕಾರು ಮಾದರಿಗಳ ಖರೀದಿ ಮೇಲೆ ಫೆಬ್ರುವರಿ ಅವಧಿಗಾಗಿ ಗರಿಷ್ಠ ಪ್ರಮಾಣದ ಡಿಸ್ಕೌಂಟ್ ಆಫರ್ ನೀಡುತ್ತಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಗ್ರಾಹಕರು ಗರಿಷ್ಠ ರೂ.40 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಕೋವಿಡ್-19 ಪರಿಣಾಮ ಕಾರು ಮಾರಾಟದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಪ್ರಮುಖ ಆಟೋ ಕಂಪನಿಗಳು ಪರಿಸ್ಥಿತಿಗೆ ಅನುಗುಣವಾಗಿ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ವಿವಿಧ ಆಫರ್‌ಗಳು ಮತ್ತು ಸರಳ ಸಾಲ ಸೌಲಭ್ಯಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ. ಲಾಕ್‌ಡೌನ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಕಾರು ಖರೀದಿ ಯೋಜನೆಯಿಂದ ಹಿಂದೆ ಸರಿದಿದ್ದ ಹಲವು ಗ್ರಾಹಕರು ಇದೀಗ ಕಾರು ಖರೀದಿಗೆ ಮುಂದಾಗುತ್ತಿರುವುದು ಕಾರು ಕಂಪನಿಗಳಿಗೆ ಭರ್ಜರಿ ಬೇಡಿಕೆ ಹರಿದುಬರುತ್ತಿದೆ.

ಹೊಸ ಕಾರು ಮಾದರಿಗಳಿಗೆ ಬೇಡಿಕೆ ಹೆಚ್ಚಿದ ಹಿನ್ನಲೆಯಲ್ಲಿ ಕಾರು ಖರೀದಿಯ ಮೇಲೆ ಗರಿಷ್ಠ ಆಫರ್‌ಗಳ ಜೊತೆಗೆ ಸರಳ ಸಾಲ-ಸೌಲಭ್ಯ ನೀಡುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ದಟ್ಸನ್ ಸಹ ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಆಫರ್ ಘೋಷಿಸಿದೆ.

ದಟ್ಸನ್ ಕಂಪನಿಯು ವಿವಿಧ ಕಾರುಗಳ ಖರೀದಿ ಮೇಲೆ ರೂ.34 ಸಾವಿರದಿಂದ ರೂ. 40 ಸಾವಿರದಷ್ಟು ಆಫರ್ ಲಭ್ಯವಿರಲಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್‌ಬ್ಯಾಕ್, ಎಕ್ಸ್‌ಚೆಂಜ್, ಲೊಯಾಲಿಟಿ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಆಕ್ಸೆಸರಿಸ್‌ಗಳ ಮೇಲೆ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ಹೊಸ ಆಫರ್‌ಗಳು ಈ ತಿಂಗಳ 28ರ ತನಕ ಲಭ್ಯವಿದ್ದು, ರೆಡಿ-ಗೊ, ಗೊ ಮತ್ತು ಗೊ ಪ್ಲಸ್ ಮಾದರಿಗಳ ಮೇಲೆ ಆಫರ್ ನೀಡಲಾಗುತ್ತಿದೆ. ಹೊಸ ಆಫರ್‌ಗಳಲ್ಲಿ ರೆಡಿ-ಗೊ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಯು ರೂ.34,000 ಡಿಸ್ಕೌಂಟ್ ಪಡೆದುಕೊಂಡಿದ್ದು, ಇದರಲ್ಲಿ ರೂ. 15 ಸಾವಿರ ಕ್ಯಾಶ್‌ಬ್ಯಾಕ್, ರೂ.15 ಸಾವಿರ ಎಕ್ಸ್‌ಚೆಂಜ್ ಆಫರ್ ಪಡೆಯಬಹುದಾಗಿದೆ.

ಜೊತೆಗೆ ದಟ್ಸನ್ ನಿರ್ಮಾಣದ ಯಾವುದೇ ಕಾರು ಖರೀದಿಸುವ ಗ್ರಾಹಕರಿಗೆ ವಿವಿಧ ಆಫರ್ ಜೊತೆಗೆ ಹೆಚ್ಚುವರಿಯಾಗಿ ರೂ. 4 ಸಾವಿರ ಕಾರ್ಪೋರೇಟ್ ಆಫರ್ ಲಭ್ಯವಿರಲಿದ್ದು, ರೆಡಿ-ಗೊ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 2.92 ಲಕ್ಷದಿಂದ ರೂ. 4.92 ಲಕ್ಷ ಬೆಲೆ ಹೊಂದಿದೆ.

ದಟ್ಸನ್ ಕಂಪನಿಯು ರೆಡಿ-ಗೊ ಮಾದರಿಯಂತೆ ಗೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯ ಮೇಲೂ ಆಕರ್ಷಕ ಡಿಸ್ಕೌಂಟ್ ಆಫರ್ ನೀಡುತ್ತಿದ್ದು, ರೂ. 40 ಸಾವಿರ ಮೌಲ್ಯದ ವಿವಿಧ ಆಫರ್‌ಗಳನ್ನು ನೀಡುತ್ತಿದೆ. ಇದರಲ್ಲಿ ರೂ.20 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 20 ಸಾವಿರ ಎಕ್ಸ್‌ಚೆಂಜ್ ಬೋನಸ್ ದೊರೆಯಲಿದೆ.

ದಟ್ಸನ್ ಗೊ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.03 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 6.51 ಲಕ್ಷ ಬೆಲೆ ಹೊಂದಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರುವ ಬಜೆಟ್ ಬೆಲೆಯ ಕಾರು ಮಾದರಿಯಾಗಿದೆ.

ಇನ್ನು ಗೊ ಪ್ಲಸ್ ಕಾರು ಮಾದರಿಯು ದಟ್ಸನ್ ನಿರ್ಮಾಣದ ಎಂಟ್ರಿ ಲೆವಲ್ ಕಂಪ್ಯಾಕ್ಟ್ ಎಂಪಿವಿ ಕಾರು ಮಾದರಿಯಾಗಿದ್ದು, ಗೊ ಪ್ಲಸ್ ಕಾರು ಮಾದರಿಯ ಮೇಲೆ ರೂ. 40 ಸಾವಿರ ಡಿಸ್ಕೌಂಟ್ ಲಭ್ಯವಿದೆ. ರೂ. 40 ಸಾವಿರ ಮೌಲ್ಯದ ವಿವಿಧ ಆಫರ್‌ಗಳಲ್ಲಿ ರೂ.20 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 20 ಸಾವಿರ ಎಕ್ಸ್‌ಚೆಂಜ್ ಬೋನಸ್ ದೊರೆಯಲಿದೆ.

ಗೊ ಪ್ಲಸ್ ಕಾರು ಮಾದರಿಯು ಗೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯಲ್ಲಿರುವಂತೆಯೇ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.26 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 7 ಲಕ್ಷ ಬೆಲೆ ಹೊಂದಿದೆ.