ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ಇವಿ ವಾಹನಗಳಿಗೆ ಪೂರಕವಾಗಿ ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ಇವಿ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸುವತ್ತ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಸ್ವದೇಶಿ ಕಂಪನಿಯಾಗಿರುವ ಇವೊಲ್ಟ್ ಕಂಪನಿಯು ಕೂಡಾ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕೆ ಬೃಹತ್ ಯೋಜನೆಗೆ ಚಾಲನೆ ನೀಡಿದೆ.

ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ಭಾರತದಲ್ಲಿ ಹೆಚ್ಚುತ್ತಿರುವ ಇವಿ ವಾಹನಗಳಿಗೆ ಪೂರಕವಾಗಿ ವಿವಿಧ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಇವಿ ವಾಹನಗಳ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯನ್ನು ಹೆಚ್ಚಿಸಿದ್ದು, ಚಾರ್ಜಿಂಗ್ ಕೇಂದ್ರಗಳ ಹೆಚ್ಚಳಕ್ಕೆ ವಿಶೇಷ ಆಸಕ್ತಿ ವಹಿಸಿರುವ ಇವೊಲ್ಟ್ ಕಂಪನಿಯು ಪ್ರಮುಖ ಮೂರು ವಿದ್ಯುತ್ ಸರಬರಾಜು ಕಂಪನಿಗಳ ಜೊತೆ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಮುಂದಾಗಿದೆ.

ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಕ್ರಿಯೆಯನ್ನು ವಿವಿಧ ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ತ್ವರಿತಗೊಳಿದ್ದು, ಇವೊಲ್ಟ್ ಕಂಪನಿಯು ಸಹ ದೆಹಲಿಯ ಪ್ರಮುಖ ಮೂರು ವಿದ್ಯುತ್ ಸರಬರಾಜು ಕಂಪನಿಗಳ ಜೊತೆಗೂಡಿ ಅಗತ್ಯವಾದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಯೋಜನೆ ರೂಪಿಸಿದೆ.

ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ಹೊಸ ಯೋಜನೆಗಾಗಿ ಬಿಎಸ್‌ಇಎಸ್ ರಾಜಧಾನಿ ಪವರ್ ಲಿಮಿಟೆಡ್, ಬಿಎಸ್‌ಇಎಸ್ ಯಮುನಾ ಪವರ್ ಲಿಮಿಟೆಡ್ ಮತ್ತು ಟಾಟಾ ಪವರ್ ದೆಹಲಿ ಡಿಸ್ಟ್ರಿಬ್ಯೂಷನ್ ಲಿಮಿಟೆಡ್ ಕಂಪನಿಗಳು ಜೊತೆಗೂಡಿ ಇವೊಲ್ಟ್ ಕಂಪನಿಯನ್ನು ನೇಮಕಗೊಳಿಸಿದ್ದು, ಇವೊಲ್ಟ್ ಕಂಪನಿಯು ಮುಂದಿನ ಕೆಲ ತಿಂಗಳಿನಲ್ಲಿ ದೆಹಲಿಯ ಅಗತ್ಯ ಸ್ಥಳಗಳಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯಲಿದೆ.

ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ವಿದ್ಯುತ್ ಸರಬರಾಜು ಕಂಪನಿಗಳಿಂದಲೇ ನೇಮಕವಾಗಿರುವುದರಿಂದ ಇವೊಲ್ಟ್ ಕಂಪನಿಯು ಹೊಸ ಯೋಜನೆಯ ಮೇಲೆ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು, ದೆಹಲಿ ಸರ್ಕಾರವು ಇವೊಲ್ಟ್ ನಿರ್ಮಾಣದ ಪ್ರತಿ ಚಾರ್ಜಿಂಗ್ ನಿಲ್ದಾಣ ನಿರ್ಮಾಣದ ಮೇಲೆ ರೂ. 6 ಸಾವಿರ ಸಬ್ಸಡಿ ಒದಗಿಸಲು ಒಪ್ಪಿಗೆ ಸೂಚಿಸಿದೆ.

ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ಇವೊಲ್ಟ್ ಕಂಪನಿಯು ಮೊದಲ ಹಂತದಲ್ಲಿ ನಿರ್ಮಾಣಗೊಳ್ಳುವ 30 ಸಾವಿರ ಚಾರ್ಜರ್‌ಗಳ ಮೇಲೆ ಸಬ್ಸಡಿ ನೀಡಲು ನಿರ್ಧರಿಸಿದ್ದು, ಕಂಪನಿಯು ಬಸ್ ನಿಲ್ದಾಣಗಳ ಪಾರ್ಕಿಂಗ್ ಸ್ಥಳಗಳಲ್ಲಿ, ರೈಲ್ವೆ ನಿಲ್ದಾಣಗಳ ಪಾರ್ಕಿಂಗ್ ಸ್ಥಳಗಳಲ್ಲಿ, ಮಾಲ್ ಮತ್ತು ವಾಣಿಜ್ಯ ಸಂಕಿರ್ಣಗಳಲ್ಲಿ ಚಾರ್ಜಿಂಗ್ ಪಾಯಿಂಟ್ ತೆರೆಯಲಿದೆ.

ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ಇನ್ನು ಹೆಚ್ಚುತ್ತಿರುವ ಇಂಧನ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ವಿವಿಧ ರಾಜ್ಯಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ಸಬ್ಸಡಿ ಜೊತೆಗೆ ರಾಜ್ಯ ಮಟ್ಟದಲ್ಲೂ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ಕಳೆದ ಕೆಲ ತಿಂಗಳಿನಿಂದ ವಿವಿಧ ರಾಜ್ಯಗಳಲ್ಲಿ ಇವಿ ವಾಹನಗಳ ನೋಂದಣಿ ಸಂಖ್ಯೆಯಲ್ಲಿ ಸಾಕಷ್ಟು ಏರಿಕೆಯಾಗಿದೆ.

ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದರೂ ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇವಿ ವಾಹನಗಳ ಹೆಚ್ಚಳ ಯೋಜನೆಗೆ ಪೂರಕವಾಗಿ ಇಂಧನ ಪೂರೈಕೆ ಕಂಪನಿಗಳು ಕೂಡಾ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸುತ್ತಿದ್ದು, ಅಸ್ತಿತ್ವದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಚಾರ್ಜಿಂಗ್ ಸೌಲಭ್ಯ ಹೆಚ್ಚಿಸಲು ದೇಶದ ಎರಡನೇ ಅತಿದೊಡ್ಡ ಪೆಟ್ರೋಲಿಯಂ ಚಿಲ್ಲರೆ ವ್ಯಾಪಾರಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಕಂಪನಿಯು ಭಾರೀ ಪ್ರಮಾಣದ ಹೂಡಿಕೆ ಮಾಡಿದೆ.

ರಾಜಧಾನಿ ದೆಹಲಿಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ಆರಂಭಿಸಿದ ಇವೊಲ್ಟ್

ಪೆಟ್ರೋಲ್ ಬಂಕ್ ಆವರಣದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಪ್ರತ್ಯೇಕವಾದ ಚಾರ್ಜಿಂಗ್ ಸ್ಥಾನವನ್ನು ಕಲ್ಪಿಸುವ ಮೂಲಕ ಇವಿ ವಾಹನಗಳನ್ನು ಪ್ರೋತ್ಸಾಹಿಸುವ ಗುರಿಹೊಂದಿದ್ದು, ದೇಶಾದ್ಯಂತ ಕಾರ್ಯನಿರ್ವಹಣೆಯಲ್ಲಿರುವ ತನ್ನ ಅಧೀನದ ಪೆಟ್ರೋಲ್ ಬಂಕ್‌ಗಳಲ್ಲಿ ಚಾರ್ಜಿಂಗ್ ನಿಲ್ದಾಣ ತೆರೆಯುವ ಯೋಜನೆಗಾಗಿ ಸುಮಾರು ರೂ. 1 ಲಕ್ಷ ಕೋಟಿ ಹೂಡಿಕೆ ಮಾಡಿದೆ.

Most Read Articles

Kannada
English summary
Delhi electricity distribution companies to set up ev charging stations across nation s capital
Story first published: Sunday, October 31, 2021, 21:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X