ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ

ರಾಷ್ಟ್ರ ರಾಜಧಾನಿ ದೆಹಲಿ ವಾಯು ಮಾಲಿನ್ಯದಿಂದ ತೀವ್ರವಾಗಿ ತತ್ತರಿಸಿದೆ. ದೀಪಾವಳಿಯ ನಂತರ ದೆಹಲಿಯಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರವು ವಾಯು ಮಾಲಿನ್ಯದ ವಿರುದ್ಧ ಸಮರ ಸಾರಿದ್ದು, ದೆಹಲಿ ನಗರದೊಳಗೆ ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳನ್ನು ನಿರ್ದಿಷ್ಟ ಸಮಯದಲ್ಲಿ ಮಾತ್ರ ಬಳಸಬೇಕು ಎಂದು ಸೂಚಿಸಿದೆ.

ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ

ನಗರದ 250 ಪ್ರಮುಖ ರಸ್ತೆಗಳಲ್ಲಿ ಬೆಳಗ್ಗೆ 7ರಿಂದ ರಾತ್ರಿ 11ರವರೆಗೆ ಹಾಗೂ ಸಂಜೆ 5ರಿಂದ ರಾತ್ರಿ 9ರವರೆಗೆ ವಾಣಿಜ್ಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ವಾಯು ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಇದನ್ನು ಉಲ್ಲಂಘಿಸುವ ವಾಹನಗಳಿಗೆ ಭಾರಿ ದಂಡ ವಿಧಿಸಲಾಗುವುದು ಎಂದು ವರದಿಯಾಗಿದೆ. ಈ ಅವಧಿಯಲ್ಲಿ ಮೇಲ್ಕಂಡ ನಿಷೇಧವು ಕೆಲವು ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ.

ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ

ಯಾವುದೇ ರೀತಿಯಲ್ಲಿ ಪರಿಸರ ಮಾಲಿನ್ಯವನ್ನುಂಟು ಮಾಡದ ಎಲೆಕ್ಟ್ರಿಕ್ ವಾಹನಗಳಿಗೆ ಈ ನಿಷೇಧದಿಂದ ವಿನಾಯಿತಿ ನೀಡಲಾಗಿದೆ. ದೆಹಲಿ ರಾಜ್ಯ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಈ ಘೋಷಣೆ ಮಾಡಿದ್ದಾರೆ. ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳು ಮಾತ್ರ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ

ಈ ಮೂಲಕ ಎಲೆಕ್ಟ್ರಿಕ್ ಕಮರ್ಷಿಯಲ್ ವಾಹನಗಳ ಕಾರ್ಯಾಚರಣೆಗೆ ಅಧಿಕೃತ ಅನುಮೋದನೆ ನೀಡಲಾಗಿದೆ. ಎಲೆಕ್ಟ್ರಿಕ್ ವಾಹನಗಳು ದೆಹಲಿ ನಗರದ ಯಾವುದೇ ರಸ್ತೆಯಲ್ಲಿ ಯಾವಾಗ ಬೇಕಾದರೂ ಸಂಚರಿಸಬಹುದು. ವಾಣಿಜ್ಯ ವಾಹನ ಬಳಕೆದಾರರ ತೀವ್ರ ವಿರೋಧದ ನಡುವೆ ಈ ಘೋಷಣೆ ಮಾಡಲಾಗಿದೆ. ಭವಿಷ್ಯದಲ್ಲಿ ಯಾವುದೇ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರವನ್ನು ನಿಷೇಧಿಸುವುದಿಲ್ಲ ಎಂದು ಈ ಮೂಲಕ ತಿಳಿಸಲಾಗಿದೆ.

ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ

ಅದರಲ್ಲೂ ವಿಶೇಷವಾಗಿ ವಾಯು ಮಾಲಿನ್ಯವನ್ನು ಪರಿಗಣಿಸಿ ತೆಗೆದುಕೊಂಡ ಯಾವುದೇ ಕ್ರಮವು ಎಲೆಕ್ಟ್ರಿಕ್ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿದು ಬಂದಿದೆ. ಇದರಿಂದ ಭವಿಷ್ಯದಲ್ಲಿ ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಗಣನೀಯವಾಗಿ ಹೆಚ್ಚಾಗುತ್ತದೆ ಎಂದು ಹೇಳಲಾಗಿದೆ. ದೆಹಲಿ ಸರ್ಕಾರವು ವಾಯು ಮಾಲಿನ್ಯವನ್ನು ಪರಿಹರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ

ಇವುಗಳಲ್ಲಿ ಹಳೆಯ ವಾಹನಗಳ ಕಾರ್ಯಾಚರಣೆಗೆ ನಿಷೇಧ, ಮಾನ್ಯವಾದ ವಾಯು ಮಾಲಿನ್ಯ ಪ್ರಮಾಣಪತ್ರ ಸೇರಿದಂತೆ ಹಲವಾರು ಕಠಿಣ ನಿಯಮಗಳು ಸೇರಿವೆ. ಇವುಗಳನ್ನು ಹೊಂದಿರದ ವಾಹನಗಳಿಗೆ ಈ ಹಿಂದೆ ದಂಡ ವಿಧಿಸಲಾಗಿತ್ತು. ಇತ್ತೀಚೆಗಷ್ಟೇ ವಾಯು ಮಾಲಿನ್ಯ ಪ್ರಮಾಣಪತ್ರ ಹೊಂದಿಲ್ಲದ ಸುಮಾರು 300 ವಾಹನಗಳಿಗೆ ದಂಡ ವಿಧಿಸಲಾಗಿತ್ತು.

ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ

ವರದಿಗಳ ಪ್ರಕಾರ, ಪೆಟ್ರೋಲ್ ಬಂಕ್‌ಗಳಲ್ಲಿ ಮಂಗಳವಾರ ಒಂದೇ ದಿನ 280 ವಾಹನಗಳಿಗೆ ಹಾಗೂ ಬುಧವಾರ 390 ವಾಹನಗಳಿಗೆ ದಂಡ ವಿಧಿಸಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ವಾಯು ಮಾಲಿನ್ಯವನ್ನು ಹೊರಸೂಸುವ ವಾಹನಗಳ ವಿರುದ್ಧ ರಾಜ್ಯ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದು ಕೊಳ್ಳುತ್ತಿದೆ. ಸರ್ಕಾರದ ಈ ಕಾರ್ಯದಲ್ಲಿ ಸ್ವಯಂಸೇವಕರು ಸೇರಿದಂತೆ ಹಲವು ಗುಂಪುಗಳು ಕೈಜೋಡಿಸಿವೆ.

ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ

ಈಗ ಪೆಟ್ರೋಲ್, ಡೀಸೆಲ್ ವಾಹನಗಳಿಗೆ ನೋ ಎಂಟ್ರಿ ಸಮಯವನ್ನು ಪ್ರಕಟಿಸಲಾಗಿದೆ. ವಾಹನಗಳಿಂದ ಉಂಟಾಗುವ ವಾಯು ಮಾಲಿನ್ಯವನ್ನು ಕಡಿಮೆ ಮಾಡಲು ಪೆಟ್ರೋಲ್, ಡೀಸೆಲ್ ಎಂಜಿನ್ ಹೊಂದಿರುವ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಬದಲಿಸಬಹುದು ಎಂದು ದೆಹಲಿ ಸರ್ಕಾರ ಘೋಷಿಸಿದೆ. 10 ವರ್ಷಕ್ಕಿಂತ ಹಳೆಯದಾದ ವಾಹನಗಳ ಕಾರ್ಯಾಚರಣೆಯನ್ನು ದೆಹಲಿಯಲ್ಲಿ ಅನುಮತಿ ನೀಡುವುದಿಲ್ಲವೆಂದು ದೆಹಲಿ ಸರ್ಕಾರ ಈಗಾಗಲೇ ತಿಳಿಸಿದೆ.

ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ

ಈ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಬಹುದು ಎಂದು ಸರ್ಕಾರ ಹೇಳಿದ್ದು, ಕೆಲವು ಏಜೆನ್ಸಿಗಳಿಗೆ ಅನುಮೋದನೆ ನೀಡಿದೆ. ಇದರನ್ವಯ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ವಾಹನಗಳನ್ನು ಸರಿಯಾದ ಅನುಮತಿಯೊಂದಿಗೆ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಬಹುದು.

ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ

ವಾಯು ಮಾಲಿನ್ಯವನ್ನು ನಿಯಂತ್ರಿಸಲು ದೆಹಲಿ ಸರ್ಕಾರವು ವಾಹನ ಮಾಲೀಕರಿಗೆ ತಮ್ಮ ವಾಹನಗಳಿಗೆ ಬಣ್ಣದ ಸ್ಟಿಕ್ಕರ್‌ಗಳನ್ನು ಪಡೆಯಲು ಸಲಹೆ ನೀಡುತ್ತಿದೆ. ದೆಹಲಿ ಸಾರಿಗೆ ಇಲಾಖೆಯು ವಾಹನ ಮಾಲೀಕರಿಗೆ ಈ ಸೂಚನೆ ನೀಡಿದೆ. ದೆಹಲಿ ಸಾರಿಗೆ ಇಲಾಖೆಯ ತನ್ನ ಹೇಳಿಕೆಯಲ್ಲಿ, ಸುಪ್ರೀಂ ಕೋರ್ಟ್ ಆದೇಶ ಹಾಗೂ ಕೇಂದ್ರ ಮೋಟಾರು ವಾಹನ ನಿಯಮ 1989 ರ ಪ್ರಕಾರ ದೆಹಲಿಯಲ್ಲಿ ನೋಂದಾಯಿಸಲಾದ ಎಲ್ಲಾ ವಾಹನಗಳಿಗೆ ಕ್ರೋಮಿಯಂ ಆಧಾರಿತ ಹೊಲೊಗ್ರಾಮ್ ಸ್ಟಿಕ್ಕರ್‌ ಕಡ್ಡಾಯವಾಗಿದೆ ಎಂದು ಹೇಳಿದೆ.

ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ

ಈ ಸ್ಟಿಕ್ಕರ್ ಅನ್ನು ವಾಹನಗಳಲ್ಲಿ ಅಳವಡಿಸಬೇಕು. ದೆಹಲಿ ಸಾರಿಗೆ ಇಲಾಖೆ ಈ ಬಗ್ಗೆ ನವೆಂಬರ್ 19ರಂದು ಸೂಚನೆ ನೀಡಿದೆ. ಕ್ರೋಮಿಯಂ ಆಧಾರಿತ ಹೊಲೊಗ್ರಾಮ್ ಸ್ಟಿಕ್ಕರ್‌ಗಳನ್ನು ಅಂಟಿಸಲು ಹಳೆಯ ವಾಹನ ಮಾಲೀಕರು ತಮ್ಮ ವಿತರಕರನ್ನು ಸಂಪರ್ಕಿಸಬೇಕು ಎಂದು ಸಾರಿಗೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇಂಧನದ ಪ್ರಕಾರಕ್ಕೆ ಸೂಕ್ತವಾದ ಬಣ್ಣದಲ್ಲಿ ಸ್ಟಿಕ್ಕರ್ ಅನ್ನು ಅಂಟಿಸಲಾಗುತ್ತದೆ.

ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ

ಕಲರ್ ಲೈನ್ ಸ್ಟಿಕ್ಕರ್‌ಗಳನ್ನು ಅಂಟಿಸುವುದರಿಂದ ಅಧಿಕಾರಿಗಳು ರಸ್ತೆಯಲ್ಲಿ ವಾಹನಗಳನ್ನು ಪರಿಶೀಲಿಸುವಾಗ ಇಂಧನದ ಪ್ರಕಾರವನ್ನು ಸುಲಭವಾಗಿ ಗುರುತಿಸಬಹುದು ಎಂಬುದು ಗಮನಾರ್ಹ. 2019ರ ಏಪ್ರಿಲ್'ಗೂ ಮುನ್ನ ನೋಂದಾಯಿಸಲಾದ ವಾಹನಗಳು ಈ ಸ್ಟಿಕ್ಕರ್‌ಗಳನ್ನು ಹೊಂದಿರುವುದಿಲ್ಲ. ಕೂಡಲೇ ಆ ವಾಹನಗಳ ಮೇಲೆ ಸ್ಟಿಕ್ಕರ್‌ಗಳನ್ನು ಅಂಟಿಸಬೇಕು.

ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ

ಪೆಟ್ರೋಲ್, ಸಿಎನ್‌ಜಿ ವಾಹನಗಳಿಗೆ ನೀಲಿ ಬಣ್ಣದ ಸ್ಟಿಕ್ಕರ್‌ಗಳನ್ನು ಅಂಟಿಸಲಾಗುತ್ತದೆ. ಇನ್ನು ಡೀಸೆಲ್ ವಾಹನಗಳಿಗೆ ಕಿತ್ತಳೆ ಬಣ್ಣದ ಸ್ಟಿಕ್ಕರ್ ಅಂಟಿಸಲಾಗುವುದು. ವಾಹನಗಳಲ್ಲಿ ಕಲರ್ ಲೈನ್ ಸ್ಟಿಕ್ಕರ್ ಅಂಟಿಸದೇ ಇರುವವರಿಗೆ ದಂಡ ವಿಧಿಸುವ ನಿಯಮಗಳಿವೆ. ಆದರೆ ಸದ್ಯಕ್ಕೆ ದಂಡ ವಿಧಿಸುವ ಉದ್ದೇಶವಿಲ್ಲಎಂದು ಹೇಳಿರುವ ಸಾರಿಗೆ ಅಧಿಕಾರಿಗಳು ಸದ್ಯ ಈ ಸ್ಟಿಕ್ಕರ್‌ಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Most Read Articles

Kannada
English summary
Delhi government allows electric vehicles during no entry hours details
Story first published: Sunday, November 21, 2021, 10:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X