ಎಲೆಕ್ಟ್ರಿಕ್ ವಾಹನಗಳಿಗೆ 5% ಪಾರ್ಕಿಂಗ್ ಸ್ಥಳ ಮೀಸಲಿಡಲು ಆದೇಶ ಹೊರಡಿಸಿದ ಸರ್ಕಾರ

ಎಲೆಕ್ಟ್ರಿಕ್ ವಾಹನಗಳು ಭಾರತದಲ್ಲಿ ನಿಧಾನವಾಗಿ ಜನಪ್ರಿಯವಾಗುತ್ತಿವೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.

ಎಲೆಕ್ಟ್ರಿಕ್ ವಾಹನಗಳಿಗೆ 5% ಪಾರ್ಕಿಂಗ್ ಸ್ಥಳ ಮೀಸಲಿಡಲು ಆದೇಶ ಹೊರಡಿಸಿದ ಸರ್ಕಾರ

ಇವುಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆಯಿಂದ ವಿನಾಯಿತಿ, ನೋಂದಣಿ ಶುಲ್ಕದಿಂದ ವಿನಾಯಿತಿಗಳು ಸೇರಿವೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯಲ್ಲಿ ಬೇರೆ ರಾಜ್ಯಗಳಿಗಿಂತ ಒಂದು ಹೆಜ್ಜೆ ಮುಂದಿರುವ ದೆಹಲಿ ಸರ್ಕಾರವು ಶಾಪಿಂಗ್ ಮಾಲ್‌, ಹೋಟೆಲ್‌, ಆಸ್ಪತ್ರೆ ಹಾಗೂ ಕಚೇರಿಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ 5%ನಷ್ಟು ಪಾರ್ಕಿಂಗ್ ಸ್ಥಳವನ್ನು ಮೀಸಲಿಡಬೇಕು ಎಂದು ಆದೇಶ ಹೊರಡಿಸಿದೆ.

ಎಲೆಕ್ಟ್ರಿಕ್ ವಾಹನಗಳಿಗೆ 5% ಪಾರ್ಕಿಂಗ್ ಸ್ಥಳ ಮೀಸಲಿಡಲು ಆದೇಶ ಹೊರಡಿಸಿದ ಸರ್ಕಾರ

ಈ ಆದೇಶವು 100 ಅಥವಾ ಹೆಚ್ಚಿನ ವಾಹನಗಳಿಗೆ ಸ್ಥಳಾವಕಾಶ ನೀಡುವ ಎಲ್ಲಾ ಕಟ್ಟಡಗಳಿಗೂ ಅನ್ವಯಿಸುತ್ತದೆ. ಈ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಪಾರ್ಕಿಂಗ್ ಸ್ಥಳಾವಕಾಶ ಹಾಗೂ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲು ಆದೇಶಿಸಲಾಗಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಎಲೆಕ್ಟ್ರಿಕ್ ವಾಹನಗಳಿಗೆ 5% ಪಾರ್ಕಿಂಗ್ ಸ್ಥಳ ಮೀಸಲಿಡಲು ಆದೇಶ ಹೊರಡಿಸಿದ ಸರ್ಕಾರ

ಇದರಿಂದ ಎಲೆಕ್ಟ್ರಿಕ್ ವಾಹನಗಳ ಬಳಕೆ ಮತ್ತಷ್ಟು ಹೆಚ್ಚಾಗಲಿದೆ ಎಂದು ದೆಹಲಿ ಸರ್ಕಾರವು ಹೇಳಿದೆ. ಈ ಕಟ್ಟಡಗಳ ಪಾರ್ಕಿಂಗ್ ಪ್ರದೇಶದಲ್ಲಿ ಬದಲಾವಣೆಗಳನ್ನು ಮಾಡಲು ನಿರ್ದಿಷ್ಟ ಗಡುವನ್ನು ನೀಡಲಾಗುವುದು ಎಂದು ನಿರೀಕ್ಷಿಸಲಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗೆ 5% ಪಾರ್ಕಿಂಗ್ ಸ್ಥಳ ಮೀಸಲಿಡಲು ಆದೇಶ ಹೊರಡಿಸಿದ ಸರ್ಕಾರ

ಮುಂದಿನ ಡಿಸೆಂಬರ್ ವೇಳೆಗೆ ಈ ಬದಲಾವಣೆಗಳನ್ನು ಜಾರಿಗೊಳಿಸಲು ಗಡುವು ನೀಡುವ ಸಾಧ್ಯತೆಗಳಿವೆ ಎಂದು ವರದಿಗಳು ಸೂಚಿಸಿವೆ. ಈ ಕಟ್ಟಡಗಳಲ್ಲಿ ಅಳವಡಿಸಲಾಗುವ ಪ್ರತಿ ಚಾರ್ಜಿಂಗ್ ಪಾಯಿಂಟ್‌ಗೆ ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನ ನೀತಿಯಡಿ ರೂ.6,000ಗಳ ಅನುದಾನ ನೀಡಲಿದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಎಲೆಕ್ಟ್ರಿಕ್ ವಾಹನಗಳಿಗೆ 5% ಪಾರ್ಕಿಂಗ್ ಸ್ಥಳ ಮೀಸಲಿಡಲು ಆದೇಶ ಹೊರಡಿಸಿದ ಸರ್ಕಾರ

ಶಾಪಿಂಗ್ ಮಾಲ್‌, ಚಿತ್ರಮಂದಿರ, ಹೋಟೆಲ್‌ ಹಾಗೂ ಇತರ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಈ ಹಿಂದೆ ದೆಹಲಿಯ ಸಾರಿಗೆ ಸಚಿವರು ಒತ್ತಾಯಿಸಿದ್ದರು.

ಎಲೆಕ್ಟ್ರಿಕ್ ವಾಹನಗಳಿಗೆ 5% ಪಾರ್ಕಿಂಗ್ ಸ್ಥಳ ಮೀಸಲಿಡಲು ಆದೇಶ ಹೊರಡಿಸಿದ ಸರ್ಕಾರ

ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿರುವುದರಿಂದ ಬಹುತೇಕ ಜನರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗಿದ್ದಾರೆ. ಇನ್ನು ಕೆಲವು ಜನರು ಚಾರ್ಜಿಂಗ್ ಕೇಂದ್ರಗಳ ಕೊರತೆಯಿಂದಾಗಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಎಲೆಕ್ಟ್ರಿಕ್ ವಾಹನಗಳಿಗೆ 5% ಪಾರ್ಕಿಂಗ್ ಸ್ಥಳ ಮೀಸಲಿಡಲು ಆದೇಶ ಹೊರಡಿಸಿದ ಸರ್ಕಾರ

ಈ ಕಾರಣಕ್ಕೆ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲು ದೆಹಲಿ ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ದೆಹಲಿಯ ವಾಯುಮಾಲಿನ್ಯ ಸಮಸ್ಯೆಯನ್ನು ಪರಿಹರಿಸಲು ದೆಹಲಿ ಸರ್ಕಾರವು ಚಿಂತನೆ ನಡೆಸಿದೆ.

ಎಲೆಕ್ಟ್ರಿಕ್ ವಾಹನಗಳಿಗೆ 5% ಪಾರ್ಕಿಂಗ್ ಸ್ಥಳ ಮೀಸಲಿಡಲು ಆದೇಶ ಹೊರಡಿಸಿದ ಸರ್ಕಾರ

ದೆಹಲಿಯಲ್ಲಿ ವಾಯುಮಾಲಿನ್ಯದಿಂದಾಗಿ ಹವಾಮಾನವು ಹದಗೆಟ್ಟಿದೆ. ಈ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ದೆಹಲಿ ಮುಖ್ಯಮಂತ್ರಿಅರವಿಂದ್ ಕೇಜ್ರಿವಾಲ್ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Delhi government orders to reserve 5 percent parking space for electric vehicles. Read in Kannada.
Story first published: Tuesday, March 16, 2021, 14:52 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X