ಹಳೆ ವಾಹನಗಳನ್ನು ರಸ್ತೆಗಿಳಿಸದಂತೆ ವಾಹನ ಸವಾರರಿಗೆ ಸೂಚನೆ ನೀಡಿದ ದೆಹಲಿ ಸರ್ಕಾರ

ದೆಹಲಿಯ ಸಾರಿಗೆ ಇಲಾಖೆಯು 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳನ್ನು ಹಾಗೂ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ರಸ್ತೆಗೆ ಇಳಿಸದಂತೆ ವಾಹನ ಸವಾರರಿಗೆ ಸೂಚನೆ ನೀಡಿದೆ. ಈ ವಾಹನಗಳನ್ನು ಅಧಿಕೃತ ಸ್ಕ್ರ್ಯಾಪಿಂಗ್ ಕೇಂದ್ರಗಳಲ್ಲಿ ಸ್ಕ್ರ್ಯಾಪ್ ಮಾಡುವಂತೆ ಸೂಚಿಸಲಾಗಿದೆ.

ಹಳೆ ವಾಹನಗಳನ್ನು ರಸ್ತೆಗಿಳಿಸದಂತೆ ವಾಹನ ಸವಾರರಿಗೆ ಸೂಚನೆ ನೀಡಿದ ದೆಹಲಿ ಸರ್ಕಾರ

ಎಲ್ಲಾ ರೀತಿಯ ವಾಹನಗಳಿಗೆ ನೋಂದಣಿ ಪ್ರಮಾಣ ಪತ್ರಗಳು 15 ವರ್ಷಗಳವರೆಗೆ ಮಾನ್ಯವಾಗಿದ್ದರೂ ದೆಹಲಿಯಲ್ಲಿ 10 ವರ್ಷಗಳಿಗಿಂತ ಹಳೆಯದಾದ ಡೀಸೆಲ್ ವಾಹನಗಳು ರಸ್ತೆಗಿಳಿಯ ಬಾರದು ಎಂದು ದೆಹಲಿ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಆದರೂ ಜನರು 10 ರಿಂದ 15 ವರ್ಷ ಹಳೆಯ ವಾಹನಗಳಿಗೆ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು (ಎನ್‌ಒಸಿ)ಪಡೆಯಬಹುದು.

ಹಳೆ ವಾಹನಗಳನ್ನು ರಸ್ತೆಗಿಳಿಸದಂತೆ ವಾಹನ ಸವಾರರಿಗೆ ಸೂಚನೆ ನೀಡಿದ ದೆಹಲಿ ಸರ್ಕಾರ

ಹಾಗಾದರೆ ಯಾವ ರಾಜ್ಯಗಳಲ್ಲಿ 10 ವರ್ಷಗಳಿಗಿಂತ ಹಳೆಯದಾದ ಡೀಸೆಲ್ ವಾಹನಗಳ ಬಳಕೆಗೆ ಅನುಮತಿ ನೀಡಲಾಗಿದೆ ಎಂಬುದನ್ನು ಸಂಬಂಧಿಸಿದ ವೆಬ್ ಸೈಟ್ ಮೂಲಕ ಪರಿಶೀಲಿಸಬಹುದು. ದೆಹಲಿ ಸರ್ಕಾರದ ಹೊಸ ಸೂಚನೆಯ ಪ್ರಕಾರ ದೆಹಲಿಯಲ್ಲಿ 10 ವರ್ಷಗಳಿಗಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ಬಳಸುವಂತಿಲ್ಲ. ದೆಹಲಿ ಸರ್ಕಾರದ ಈ ಸೂಚನೆಯು ಹಳೆ ವಾಹನ ಮಾಲೀಕರನ್ನು ಚಿಂತೆಗೀಡು ಮಾಡಿದೆ.

ಹಳೆ ವಾಹನಗಳನ್ನು ರಸ್ತೆಗಿಳಿಸದಂತೆ ವಾಹನ ಸವಾರರಿಗೆ ಸೂಚನೆ ನೀಡಿದ ದೆಹಲಿ ಸರ್ಕಾರ

15 ವರ್ಷಕ್ಕಿಂತ ಹಳೆಯ ಪೆಟ್ರೋಲ್ ವಾಹನಗಳು ಹಾಗೂ 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳು ದೆಹಲಿ / ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಕಾರ್ಯ ನಿರ್ವಹಿಸಬಾರದು. ಅಧಿಕೃತ ಸ್ಕ್ರ್ಯಾಪಿಂಗ್ ಕೇಂದ್ರಗಳಲ್ಲಿ ಅವುಗಳನ್ನು ಸ್ಕ್ರ್ಯಾಪ್ ಮಾಡಬೇಕು ಎಂದು ದೆಹಲಿ ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹಳೆ ವಾಹನಗಳನ್ನು ರಸ್ತೆಗಿಳಿಸದಂತೆ ವಾಹನ ಸವಾರರಿಗೆ ಸೂಚನೆ ನೀಡಿದ ದೆಹಲಿ ಸರ್ಕಾರ

ದೆಹಲಿ ಸಾರಿಗೆ ಇಲಾಖೆಯು, ಅವಧಿ ಮೀರಿರುವ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳನ್ನು ಜಪ್ತಿ ಮಾಡುವ ಬಗ್ಗೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿದೆ. ಮತ್ತೊಂದೆಡೆ ಕೇಂದ್ರ ಸರ್ಕಾರವು ತನ್ನ ವಾಹನ ಸ್ಕ್ರಾಪಿಂಗ್ ನೀತಿಯ ಅಡಿಯಲ್ಲಿ ಹಳೆಯ ವಾಹನಗಳು ರಸ್ತೆಗಳಲ್ಲಿ ಕಾರ್ಯ ನಿರ್ವಹಿಸುವುದಕ್ಕೆ ಅನುವು ಮಾಡಿಕೊಡುತ್ತದೆ.

ಹಳೆ ವಾಹನಗಳನ್ನು ರಸ್ತೆಗಿಳಿಸದಂತೆ ವಾಹನ ಸವಾರರಿಗೆ ಸೂಚನೆ ನೀಡಿದ ದೆಹಲಿ ಸರ್ಕಾರ

ಆದರೆ ಈ ವಾಹನಗಳ ಕಾರ್ಯ ನಿರ್ವಹಣೆಗೂ ಮಿತಿಯಿದೆ. ಕೇಂದ್ರ ಸರ್ಕಾರದ ಸ್ಕ್ರ್ಯಾಪಿಂಗ್ ನೀತಿಯು ಹಳೆಯ ವಾಹನಗಳು ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ರಸ್ತೆಯಲ್ಲಿ ಚಲಿಸಲು ಅನುವು ಮಾಡಿಕೊಡುತ್ತದೆ. ಈ ನೀತಿಯ ಪ್ರಕಾರ ವೈಯಕ್ತಿಕ ವಾಹನಗಳು 20 ವರ್ಷಗಳ ನಂತರ ಫಿಟ್ನೆಸ್ ಪರೀಕ್ಷೆಗೆ ಒಳಪಡಬೇಕಾಗುತ್ತದೆ.

ಹಳೆ ವಾಹನಗಳನ್ನು ರಸ್ತೆಗಿಳಿಸದಂತೆ ವಾಹನ ಸವಾರರಿಗೆ ಸೂಚನೆ ನೀಡಿದ ದೆಹಲಿ ಸರ್ಕಾರ

ಇದೇ ವೇಳೆ 15 ವರ್ಷಗಳನ್ನು ಪೂರೈಸಿದ ಕಮರ್ಷಿಯಲ್ ವಾಹನಗಳಿಗೆ ಫಿಟ್ನೆಸ್ ಪರೀಕ್ಷೆಯ ಅಗತ್ಯವಿದೆ. ಹಳೆಯ ವಾಹನಗಳಿಂದ ಉಂಟಾಗುವ ವಾಯು ಮಾಲಿನ್ಯ ಸಮಸ್ಯೆಯು ಭಾರತದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಹಳೆಯ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡುವ ಮೂಲಕ ವಾಯು ಮಾಲಿನ್ಯ ಸಮಸ್ಯೆಯನ್ನು ನಿಯಂತ್ರಿಸಬಹುದು.

ಹಳೆ ವಾಹನಗಳನ್ನು ರಸ್ತೆಗಿಳಿಸದಂತೆ ವಾಹನ ಸವಾರರಿಗೆ ಸೂಚನೆ ನೀಡಿದ ದೆಹಲಿ ಸರ್ಕಾರ

ದೆಹಲಿಯಲ್ಲಿ ವಾಯು ಮಾಲಿನ್ಯದ ಸಮಸ್ಯೆ ಹೆಚ್ಚಾಗಿರುವುದರಿಂದ ಅಲ್ಲಿ ನಿಯಮಗಳು ಕಠಿಣವಾಗಿವೆ. ಆದರೆ ದೆಹಲಿಯಲ್ಲಿ ಸಮರ್ಪಕ ಸ್ಕ್ರ್ಯಾಪಿಂಗ್ ಕೇಂದ್ರಗಳ ಕೊರತೆ ಇದೆ. ಜೊತೆಗೆ ವಶಕ್ಕೆ ಪಡೆಯುವ ಹಳೆಯ ವಾಹನಗಳಿಗೆ ಸಾಕಷ್ಟು ಪಾರ್ಕಿಂಗ್ ಸೌಲಭ್ಯಗಳ ಕೊರತೆ ಇರುವುದರಿಂದ ಕಠಿಣ ನಿಯಮಗಳ ಹೊರತಾಗಿಯೂ ರಸ್ತೆಗಿಳಿಯುವ ಹಳೆಯ ವಾಹನಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ.

ಹಳೆ ವಾಹನಗಳನ್ನು ರಸ್ತೆಗಿಳಿಸದಂತೆ ವಾಹನ ಸವಾರರಿಗೆ ಸೂಚನೆ ನೀಡಿದ ದೆಹಲಿ ಸರ್ಕಾರ

ಆದರೆ ವಾಯು ಮಾಲಿನ್ಯದ ಸಮಸ್ಯೆ ಬೆಳೆಯುತ್ತಲೇ ಇರುವುದರಿಂದ, ಮುಂಬರುವ ದಿನಗಳಲ್ಲಿ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸುವ ನಿರೀಕ್ಷೆಗಳಿವೆ. ದೆಹಲಿ ರಾಜ್ಯ ಸರ್ಕಾರವು ವಾಯು ಮಾಲಿನ್ಯದ ವಿರುದ್ಧದ ಹೋರಾಟದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿದೆ. ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯ ಬಗ್ಗೆ ಹೆಚ್ಚು ಪ್ರಚಾರ ನೀಡಲಾಗುತ್ತಿದೆ.

ಹಳೆ ವಾಹನಗಳನ್ನು ರಸ್ತೆಗಿಳಿಸದಂತೆ ವಾಹನ ಸವಾರರಿಗೆ ಸೂಚನೆ ನೀಡಿದ ದೆಹಲಿ ಸರ್ಕಾರ

ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ನೀಡುವ ಮೂಲಕ ಹಾಗೂ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುತ್ತಿದೆ. ದೆಹಲಿ ಕೇವಲ ಭಾರತದ ರಾಜಧಾನಿ ಮಾತ್ರವಲ್ಲದೆ ಎಲೆಕ್ಟ್ರಿಕ್ ವಾಹನಗಳ ರಾಜಧಾನಿಯಾಗಬೇಕೆಂದು ಅಲ್ಲಿನ ರಾಜ್ಯ ಸರ್ಕಾರ ಬಯಸುತ್ತಿದೆ.

ಹಳೆ ವಾಹನಗಳನ್ನು ರಸ್ತೆಗಿಳಿಸದಂತೆ ವಾಹನ ಸವಾರರಿಗೆ ಸೂಚನೆ ನೀಡಿದ ದೆಹಲಿ ಸರ್ಕಾರ

ದೆಹಲಿಯ ಜನರು ಸರ್ಕಾರದ ಉದ್ದೇಶಕ್ಕೆ ಅನುಗುಣವಾಗಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಚಾರ್ಜಿಂಗ್ ಕೇಂದ್ರಗಳ ಸಂಖ್ಯೆ ಹೆಚ್ಚಾದ ನಂತರ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸುತ್ತಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ.

ಹಳೆ ವಾಹನಗಳನ್ನು ರಸ್ತೆಗಿಳಿಸದಂತೆ ವಾಹನ ಸವಾರರಿಗೆ ಸೂಚನೆ ನೀಡಿದ ದೆಹಲಿ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಬಳಕೆಯಿಂದ ವಾಯು ಮಾಲಿನ್ಯವನ್ನು ಕಡಿಮೆ ಮಾಡಬಹುದು. ಇದರ ಜೊತೆಗೆ ತೈಲ ಆಮದು ಪ್ರಮಾಣವನ್ನು ಸಹ ಕಡಿಮೆ ಮಾಡಬಹುದು. ಭಾರತವು ತೈಲ ಆಮದು ಮಾಡಿಕೊಳ್ಳಲು ಈಗ ಲಕ್ಷಾಂತರ ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದೆ. ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಈಗಾಗಲೇ ಗಗನಕ್ಕೇರಿದೆ. ಇದರಿಂದ ವಾಹನ ಸವಾರರು ಕಂಗಾಲಾಗಿದ್ದಾರೆ. ಎಲೆಕ್ಟ್ರಿಕ್ ವಾಹನಗಳನ್ನು ಚಾಲನೆ ಮಾಡುವುದರಿಂದ ಪೆಟ್ರೋಲ್, ಡೀಸೆಲ್ ಗಾಗಿ ವ್ಯಯಿಸುವ ಭಾರೀ ಪ್ರಮಾಣದ ಹಣವನ್ನು ಉಳಿಸಬಹುದು. ಜೊತೆಗೆ ಎಲೆಕ್ಟ್ರಿಕ್ ವಾಹನಗಳ ನಿರ್ವಹಣಾ ವೆಚ್ಚವೂ ಕಾದಿದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಆದ್ಯತೆ ನೀಡುತ್ತಿದ್ದಾರೆ. ಇದರಿಂದ ಮುಂಬರುವ ದಿನಗಳಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚು ಮಾರಾಟವಾಗುವ ನಿರೀಕ್ಷೆಗಳಿವೆ.

Most Read Articles

Kannada
English summary
Delhi government tells motorists not to ply 15 year old petrol 10 year old diesel vehicles details
Story first published: Saturday, September 4, 2021, 10:06 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X