Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 7 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ರಾಖಿ ಸಾವಂತ್ ಬಯೋಪಿಕ್ ಈ ಸ್ಟಾರ್ ನಟಿಯೇ ಮಾಡಬೇಕಂತೆ
- News
Breaking: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಬಳಕೆ ಉತ್ತೇಜಿಸಲು ಮತ್ತೊಂದು ಮಹತ್ವದ ಯೋಜನೆಗೆ ಚಾಲನೆ
ದುಬಾರಿ ಇಂಧನ ದರ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ಇತ್ತೀಚೆಗೆ ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಹೆಚ್ಚಿಸಲು ಹೊಸ ಇವಿ ವಾಹನ ನೀತಿಯನ್ನು ಅಳವಡಿಸಿಕೊಂಡಿದೆ.

ಹೊಸ ಇವಿ ವಾಹನ ನೀತಿ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆ ತೆರಿಗೆಯಿಂದ ವಿನಾಯ್ತಿ ನೀಡಿದ್ದು, 2025ರ ವೇಳೆಗೆ ಶೇ.25ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಹೊಂದುವ ಗುರಿ ಹೊಂದಲಾಗಿದೆ. ಸದ್ಯ ದೆಹಲಿಯಲ್ಲಿ ಶೇ. 040ರಷ್ಟು ಮಾತ್ರವೇ ಎಲೆಕ್ಟ್ರಿಕ್ ವಾಹನಗಳ ಓಡಾಡುತ್ತಿದ್ದು, ಪರಿಣಾಮಕಾಗಿಯಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡಲು ಮತ್ತಷ್ಟು ಹೊಸ ಕ್ರಮ ಪ್ರಕಟಿಸಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ದೆಹಲಿ ಸರ್ಕಾರವು ಕೇಂದ್ರದ ಫೇಮ್ 2 ಯೋಜನೆಯ ಜೊತೆ ಜೊತೆಗೆ ರಾಜ್ಯ ಸರ್ಕಾರದ ಎಲೆಕ್ಟ್ರಿಕ್ ವಾಹನಗಳ ನೀತಿ ಹಲವಾರು ವಿನಾಯ್ತಿಗಳನ್ನು ಘೋಷಣೆ ಮಾಡಿದೆ.

ಹೆಚ್ಚುತ್ತಿರುವ ಡೀಸೆಲ್ ಮತ್ತು ಪೆಟ್ರೋಲ್ ಚಾಲಿತ ವಾಹನಗಳಿಂದಾಗಿ ದೆಹಲಿಯಲ್ಲಿ ಭಾರೀ ಪ್ರಮಾಣದ ಮಾಲಿನ್ಯ ಉತ್ಪತ್ತಿಯಾಗುತ್ತಿರುವ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತಿದ್ದು, ಹೊಸ ಇವಿ ವಾಹನ ನೀತಿ ಅಡಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಗರಿಷ್ಠ ಉತ್ತೇಜನ ನೀಡಲಾಗುತ್ತಿದೆ.

ದೆಹಲಿ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಗರಿಷ್ಠ ಪ್ರಮಾಣದ ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ರಸ್ತೆ ತೆರಿಗೆ ಮತ್ತು ವಾಹನ ನೋಂದಣಿಯಿಂದಲೂ ವಿನಾಯ್ತಿ ನೀಡಲಾಗಿದೆ. ಇದು ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಪೂರಕವಾದ ಅಂಶವಾಗಿದ್ದು, ಗ್ರಾಹಕರು ಕೂಡಾ ಡೀಸೆಲ್ ಮತ್ತು ಪೆಟ್ರೋಲ್ ಬದಲಾಗಿ ಇವಿ ವಾಹನಗಳ ಖರೀದಿಯತ್ತ ಗಮಮಸೆಳೆಯಲು ಸಹಕಾರಿಯಾಗಿದೆ.

ಹಾಗೆಯೇ ಇವಿ ವಾಹನಗಳ ಖರೀದಿಗೆ ಉತ್ತೇಜಿಸಲು ಹೆಚ್ಚಿನ ಸಂಖ್ಯೆಯ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗುತ್ತಿದ್ದು, ಶೀಘ್ರದಲ್ಲೇ ಕನಿಷ್ಠ 100 ಇವಿ ನಿಲ್ದಾಣಗಳಿಗೆ ಚಾಲನೆ ನೀಡುವುದಾಗಿ ದೆಹಲಿ ಸರ್ಕಾರವು ಸ್ಪಷ್ಟಪಡಿಸಿದೆ.

ಹೊಸ ಇವಿ ನೀತಿ ಅಡಿ ನಿರ್ಮಾಣ ಮಾಡಲಾಗುತ್ತಿರುವ ಹೊಸ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ದೆಹಲಿ ಮಾಹಾನಗರ ಪಾಲಿಕೆ, ದೆಹಲಿ ಅಭಿವೃದ್ದಿ ಪ್ರಾಧಿಕಾರ, ದೆಹಲಿ ಸಾರಿಗೆ ನಿಗಮ ಸಂಸ್ಥೆಗಳ ಅಧೀನದಲ್ಲಿರುವ ಕಚೇರಿಗಳ ಆವರಣಗಳಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಚಾರ್ಜಿಂಗ್ ಪ್ರಮಾಣಗಳಿಗೆ ಶೀಘ್ರದಲ್ಲೇ ದರ ಪಟ್ಟಿಯನ್ನು ನಿಗದಿಪಡಿಸಲಿದೆ.

ಸರ್ಕಾರ ಅಧೀನದಲ್ಲಿ ಜಾರ್ಜ್ ನಿಲ್ದಾಣ ಹೊರತುಪಡಿಸಿ ಖಾಸಗಿ ಕಂಪನಿಗಳು ಕೂಡಾ ಆಯ್ದ ಪೆಟ್ರೋಲ್ ಬಂಕ್‌ಗಳೊಂದಿಗೆ ಜೊತೆಗೂಡಿ ಫಾಸ್ಟ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯುತ್ತಿದ್ದು, ಇದೀಗ ದೆಹಲಿ ಸರ್ಕಾರವೇ ಹೆಚ್ಚಿನ ಸಂಖ್ಯೆಯಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡುತ್ತಿರುವುದು ಇವಿ ವಾಹನಗಳ ಬಳಕೆ ಹೆಚ್ಚಲು ಪ್ರಮುಖ ಕಾರಣವಾಗಲಿದೆ.

ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ತಗ್ಗಿಸಲು ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಸಹ ಕೆಲವು ಮಹತ್ವದ ಯೋಜನೆಗೆ ಚಾಲನೆ ನೀಡುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಪಡಿಸುವ ಆಟೋ ಕಂಪನಿಗಳ ಜೊತೆಗೆ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೂ ಕೂಡಾ ಆಕರ್ಷಕ ಆಫರ್‌ಗಳನ್ನು ನೀಡಲಾಗುತ್ತಿದ್ದು, ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ, ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ. ಆದರೂ ಕೂಡಾ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಹೆಚ್ಚಿನ ಮಟ್ಟದ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಕೊರೆತೆ ಎದುರಾಗಿದ್ದು, ಕೇಂದ್ರ ಸರ್ಕಾರವು ಈ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಭಾರತದಲ್ಲಿ ವಿವಿಧ ಮಾದರಿಯ ಹಲವು ಎಲೆಕ್ಟ್ರಿಕ್ ಕಾರು ಮತ್ತು ದ್ವಿಚಕ್ರ ವಾಹನ ಮಾದರಿಗಳು ಮಾರಾಟವಾಗುತ್ತಿದ್ದು, ಬೆಲೆಗಳಿಗೆ ಅನುಗುಣವಾಗಿ ಮೈಲೇಜ್ ಪಡೆದುಕೊಂಡಿವೆ. ದುಬಾರಿ ಬೆಲೆಯ ಇವಿ ವಾಹನಗಳು ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್ ಹೊಂದಿದ್ದರೆ ಬಜೆಟ್ ಬೆಲೆಯ ಇವಿ ವಾಹನಗಳು ಕಡಿಮೆ ಮೈಲೇಜ್‌ನೊಂದಿಗೆ ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಮಾತ್ರವೇ ಸೀಮಿತವಾಗಿವೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಸ್ವಂತ ಬಳಕೆ ಮಾತ್ರ ಮಾರಾಟವಾಗುತ್ತಿದ್ದು, ವಾಣಿಜ್ಯ ಬಳಕೆಗೂ ಇವಿ ವಾಹನಗಳು ಮಾರಾಟ ಹೆಚ್ಚಳವಾಗಬೇಕೆಂಬ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಯಾವುದೇ ಪ್ರದೇಶಗಳಿಗೂ ಹೋದರೂ ಚಾರ್ಜಿಂಗ್ ಸೌಲಭ್ಯ ಲಭ್ಯವಾಗುವಂತೆ ಯೋಜನೆ ಸಿದ್ದಪಡಿಸಲಾಗಿದೆ.

ಖಾಸಗಿ ಕಂಪನಿಗಳ ಅಧೀನದಲ್ಲಿರುವ ಪೆಟ್ರೋಲ್ ಬಂಕ್‌ಗಳಲ್ಲೂ ಕಡ್ಡಾಯವಾಗಿ 1 ಚಾರ್ಜಿಂಗ್ ಪಾಯಿಂಟ್ ತೆರೆಯುವಂತೆ ವಿವಿಧ ಪೆಟ್ರೋಲ್ ಪೂರೈಕೆ ಕಂಪನಿಗಳ ಜೊತೆ ಮಾತುಕತೆ ನಡೆಸಿರುವ ಕೇಂದ್ರ ಸರ್ಕಾರದ ಇಂಧನ ಸಚಿವಾಲಯವು ಮುಂದಿನ ಒಂದು ವರ್ಷದಲ್ಲಿ 69 ಸಾವಿರ ಪೆಟ್ರೋಲ್ ಬಂಕ್‌ಗಳಲ್ಲಿ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸುವ ಭರವಸೆ ನೀಡಿದೆ.