Just In
- 1 hr ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 3 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
- 4 hrs ago
ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ 2021ರ ಮಿನಿ 3 ಡೋರ್ ಫೇಸ್ಲಿಫ್ಟ್
- 4 hrs ago
ಪ್ರೀಮಿಯಂ ಕಾರುಗಳಲ್ಲಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್ಯುವಿ ಮಾದರಿಯೇ ಬೆಸ್ಟ್
Don't Miss!
- Sports
ಕೊನೆಯಲ್ಲಿ ಗೌರವದೊಂದಿಗೆ ನಿರ್ಗಮಿಸಿದ ಒಡಿಶಾ
- News
ಕಣಿವೆ ರಾಜ್ಯದಲ್ಲಿ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ ನಿಲ್ಲಿಸುವುದಿಲ್ಲ: ಭಾರತೀಯ ಸೇನೆ
- Movies
ಕಾಮಾಟಿಪುರದ ನಿಜ ಕತೆಗೆ ಅಜಯ್ ದೇವಗನ್ ಎಂಟ್ರಿ
- Lifestyle
ಮಾರ್ಚ್ ತಿಂಗಳಲ್ಲಿ ಹುಟ್ಟಿದವರು ಈ ವ್ಯಕ್ತಿತ್ವ ಹೊಂದಿರುತ್ತಾರೆ!!
- Finance
ಮತ್ತಷ್ಟು ಇಳಿಕೆಗೊಂಡ ಚಿನ್ನದ ಬೆಲೆ: ಫೆಬ್ರವರಿ 27ರ ಬೆಲೆ ಹೀಗಿದೆ
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿ 3 ಕಿ.ಮೀಗೆ ಒಂದರಂತೆ ತಲೆ ಎತ್ತಲಿವೆ ಚಾರ್ಜಿಂಗ್ ಸ್ಟೇಷನ್'ಗಳು
ದೆಹಲಿ ಸರ್ಕಾರವು ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಸ್ವಿಚ್ ದೆಹಲಿ ಅಭಿಯಾನಕ್ಕೆ ಚಾಲನೆ ನೀಡಿದೆ. ದೆಹಲಿಯ ಎಲೆಕ್ಟ್ರಿಕ್ ವಾಹನ ನೀತಿಯಡಿಯಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ದೆಹಲಿ ಸರ್ಕಾರವು ತನ್ನ ಎಲೆಕ್ಟ್ರಿಕ್ ವಾಹನ ನೀತಿಯಡಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಯೋಜನೆಯನ್ನು ಸಿದ್ಧಪಡಿಸಿದೆ. ಇದರನ್ವಯ ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗಾಗಿ ಪ್ರತಿ ಮೂರು ಕಿ.ಮೀಗೆ ಒಂದರಂತೆ ಚಾರ್ಜಿಂಗ್ ಸ್ಟೇಷನ್ ನಿರ್ಮಾಣ ಮಾಡಲಾಗುವುದು ಎಂದು ದೆಹಲಿಯ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಚಾರ್ಜಿಂಗ್ ಸ್ಟೇಷನ್'ಗಳನ್ನು ನಿರ್ಮಿಸುವುದರ ಮೂಲಕ ಎಲೆಕ್ಟ್ರಿಕ್ ವಾಹನಗಳಿಗೆ ಎದುರಾಗುವ ಚಾರ್ಜಿಂಗ್ ಸಮಸ್ಯೆಯನ್ನು ನಿವಾರಿಸಲಾಗುವುದು ಎಂದು ಸಚಿವ ಕೈಲಾಶ್ ಗೆಹ್ಲೋಟ್ ಹೇಳಿದ್ದಾರೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಇದರಿಂದಾಗಿ ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾಲೀಕರು ಎಲ್ಲಿ ಬೇಕಾದರೂ ತಮ್ಮ ವಾಹನಗಳನ್ನು ಚಾರ್ಜ್ ಮಾಡಿಕೊಳ್ಳಬಹುದು. ದೆಹಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಎಲೆಕ್ಟ್ರಿಕ್ ವಾಹನ ನೀತಿಯ ಪ್ರಕಾರ, 2025ರ ವೇಳೆಗೆ ರಾಜ್ಯದಲ್ಲಿ 25%ನಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಬಳಸುವ ಗುರಿಯನ್ನು ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇದಕ್ಕಾಗಿ ದೆಹಲಿ ಸರ್ಕಾರವು ಸಂಪೂರ್ಣವಾಗಿ ಸಿದ್ಧವಾಗಿದೆ. ಈಗ ದೆಹಲಿ ಸರ್ಕಾರವು ದೆಹಲಿಯ ಸರ್ಕಾರಿ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಒದಗಿಸಿರುವುದರಿಂದ ಸಾರ್ವಜನಿಕರಿಗೆ ಸ್ಫೂರ್ತಿ ಸಿಗಲಿದೆ ಎಂದು ಅವರು ಮಾಹಿತಿ ನೀಡಿದರು.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಚಾರ್ಜಿಂಗ್ ಕೇಂದ್ರಗಳ ನಿರ್ಮಾಣಕ್ಕಾಗಿ ಟೆಂಡರ್ ಕರೆಯಲಾಗಿದೆ ಎಂದು ಕೈಲಾಶ್ ಗೆಹ್ಲೋಟ್ ತಿಳಿಸಿದ್ದಾರೆ. ಯಾರಾದರೂ ಖಾಸಗಿ ಚಾರ್ಜಿಂಗ್ ಸ್ಟೇಷನ್ ಹೊಂದಲು ಬಯಸಿದರೆ ರಾಜ್ಯ ಸರ್ಕಾರವು ಅಂತಹವರಿಗೆ ರಿಯಾಯಿತಿ ನೀಡಲಿದೆ.

ಎಲೆಕ್ಟ್ರಿಕ್ ವಾಹನ ನೀತಿಯನ್ನು ದೆಹಲಿಯಲ್ಲಿ 2020ರ ಆಗಸ್ಟ್ ತಿಂಗಳಿನಲ್ಲಿ ಆರಂಭಿಸಲಾಯಿತು. ಇದಾದ ನಂತರ ಇದುವರೆಗೆ ಸುಮಾರು 6,000 ವಾಹನಗಳನ್ನು ನೋಂದಾಯಿಸಲಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಎಲೆಕ್ಟ್ರಿಕ್ ವಾಹನ ನೀತಿಯ ಭಾಗವಾಗಿ, ದೆಹಲಿ ಸರ್ಕಾರವು ರಸ್ತೆ ತೆರಿಗೆ ಹಾಗೂ ನೋಂದಣಿ ಶುಲ್ಕವನ್ನು ಮನ್ನಾ ಮಾಡುವುದರ ಜೊತೆಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಹಾಗೂ ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನಗಳ ಖರೀದಿಗೆ ಸಬ್ಸಿಡಿ ನೀಡಲು ಮುಂದಾಗಿದೆ.

2020ರ ಅಕ್ಟೋಬರ್ ತಿಂಗಳಿನಲ್ಲಿ ದೆಹಲಿ ಸರ್ಕಾರವು ಬ್ಯಾಟರಿ ಚಾಲಿತ ವಾಹನಗಳಿಗೆ ನೋಂದಣಿ ಶುಲ್ಕ ಹಾಗೂ ರಸ್ತೆ ತೆರಿಗೆಯಿಂದ ಸಂಪೂರ್ಣ ವಿನಾಯಿತಿಯನ್ನು ಘೋಷಿಸಿತು. ಈ ಯೋಜನೆಯಡಿ 1,000 ಎಲೆಕ್ಟ್ರಿಕ್ ವಾಹನಗಳಿಗೆ ಪ್ರತಿ ಕಿ.ವ್ಯಾಗೆ ರೂ.10,000 ದರದಲ್ಲಿ ಸಬ್ಸಿಡಿ ಘೋಷಿಸಲಾಗಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮೇಲೆ ಗರಿಷ್ಠ ರೂ.1.50 ಲಕ್ಷ ಸಬ್ಸಿಡಿ ನೀಡಲಾಗುತ್ತದೆ. ಎಲೆಕ್ಟ್ರಿಕ್ ದ್ವಿಚಕ್ರ, ಎಲೆಕ್ಟ್ರಿಕ್ ತ್ರಿಚಕ್ರ, ಎಲೆಕ್ಟ್ರಿಕ್ ಕೊರಿಯರ್ ವಾಹನಗಳ ಮೇಲೆ ಗರಿಷ್ಠ ರೂ.30,000 ಸಬ್ಸಿಡಿ ನೀಡಲಾಗುತ್ತದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಎಲೆಕ್ಟ್ರಿಕ್ ವಾಹನ ನೀತಿ ಜಾರಿಯಾದ ನಂತರ ರಾಜ್ಯದಲ್ಲಿ ಈವರೆಗೆ 6,000 ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲಾಗಿದೆ ಎಂದು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.