ದೆಹಲಿಯಲ್ಲಿ ಹೊಸ ಇವಿ ನೀತಿ ನಂತರ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಭಾರೀ ಏರಿಕೆ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ದೆಹಲಿಯಲ್ಲಿ ಹೊಸ ಇವಿ ನೀತಿ ನಂತರ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಭಾರೀ ಏರಿಕೆ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಈಗಾಗಲೇ ಫೇಮ್ 2 ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ. ಹಾಗೆಯೇ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ದೆಹಲಿಯಲ್ಲಿ ಹೊಸ ಇವಿ ನೀತಿ ನಂತರ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಭಾರೀ ಏರಿಕೆ

ದೆಹಲಿ ಸರ್ಕಾರವು ಇತರೆ ರಾಜ್ಯಗಳಿಗಳಿಂತಲೂ ಹೊಸ ಇವಿ ನೀತಿ ಅಡಿಯಲ್ಲಿ ಪರಿಸರಕ್ಕೆ ಪೂರಕವಾದ ವಾಹನಗಳ ನೋಂದಣಿಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ದೆಹಲಿ ನಂತರ ಇತರೆ ರಾಜ್ಯಗಳಲ್ಲೂ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿದಾರರನ್ನು ಉತ್ತೇಜಿಸಲು ಗರಿಷ್ಠ ಸಬ್ಸಡಿ ಮತ್ತು ನೋಂದಣಿ ಶುಲ್ಕವನ್ನು ಮನ್ನಾದಂತಹ ಯೋಜನೆಗಳನ್ನು ಪ್ರಕಟಿಸುತ್ತಿವೆ.

ದೆಹಲಿಯಲ್ಲಿ ಹೊಸ ಇವಿ ನೀತಿ ನಂತರ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಭಾರೀ ಏರಿಕೆ

ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ದೆಹಲಿ ಸರ್ಕಾರವು ಈಗಾಗಲೇ ಗರಿಷ್ಠ ಪ್ರಮಾಣದ ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ರಸ್ತೆ ತೆರಿಗೆ ಮತ್ತು ವಾಹನ ನೋಂದಣಿಯಿಂದಲೂ ವಿನಾಯ್ತಿ ನೀಡಲಾಗಿದೆ.

ದೆಹಲಿಯಲ್ಲಿ ಹೊಸ ಇವಿ ನೀತಿ ನಂತರ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಭಾರೀ ಏರಿಕೆ

ಇದು ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಪೂರಕವಾದ ಅಂಶವಾಗಿದ್ದು, ಗ್ರಾಹಕರು ಕೂಡಾ ಡೀಸೆಲ್ ಮತ್ತು ಪೆಟ್ರೋಲ್ ಬದಲಾಗಿ ಇವಿ ವಾಹನಗಳ ಖರೀದಿಯತ್ತ ಗಮಮಸೆಳೆಯಲು ಸಹಕಾರಿಯಾಗಿದೆ. ಹೊಸ ಇವಿ ನೀತಿ ಜಾರಿಗೆ ಬಂದ ಆರು ತಿಂಗಳ ಅವಧಿಯಲ್ಲಿ ದೆಹಲಿಯಲ್ಲಿ ಸುಮಾರು 7 ಸಾವಿರ ಎಲೆಕ್ಟ್ರಿಕ್ ವಾಹನಗಳು ಮಾರಾಟಗೊಂಡಿದ್ದು, ಹೊಸ ನೀತಿಯಲ್ಲಿ ಒಟ್ಟು 21 ಎಲೆಕ್ಟ್ರಿಕ್ ವಾಹನ ಮಾದರಿಗಳಿಗೆ ಸಬ್ಸಡಿ ನೀಡಲಾಗುತ್ತಿದೆ.

ದೆಹಲಿಯಲ್ಲಿ ಹೊಸ ಇವಿ ನೀತಿ ನಂತರ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಭಾರೀ ಏರಿಕೆ

ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುವ ಸ್ವಿಚ್ ದೆಹಲಿ ಅಭಿಯಾನದ ನಂತರ ಇವಿ ನೀತಿ ಅಡಿಯಲ್ಲಿ ಸಾವಿರಾರು ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿದ್ದು, ಹೊಸ ಇವಿ ನೀತಿ ಅಡಿಯಲ್ಲಿ ನೋಂದಣಿಯಾದ ವಾಹನಗಳಿಗೆ ಇದುವರೆಗೆ ಸುಮಾರು ರೂ.13.50 ಕೋಟಿ ಸಹಾಯಧನ ನೀಡಲಾಗಿದೆ.

ದೆಹಲಿಯಲ್ಲಿ ಹೊಸ ಇವಿ ನೀತಿ ನಂತರ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಭಾರೀ ಏರಿಕೆ

ಹೊಸ ವಾಹನ ಖರೀದಿ ನಂತರ ದೆಹಲಿ ಸಾರಿಗೆ ಇಲಾಖೆಯಲ್ಲಿ ಹೊಸ ವಾಹನದ ಮಾಹಿತಿ ನೀಡಿದ ನಂತರ ನೇರವಾಗಿ ವಾಹನ ಖರೀದಿದಾರರ ಖಾತೆಗೆ ಸಬ್ಸಡಿ ಹಣ ಜಮಾ ಮಾಡಲಾಗುತ್ತಿದ್ದು, ವಿವಿಧ ಎಲೆಕ್ಟ್ರಿಕ್ ವಾಹನಗಳಿಗೆ ವಿವಿಧ ಹಂತದ ಸಬ್ಸಡಿ ಪಾವತಿಸಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ದೆಹಲಿಯಲ್ಲಿ ಹೊಸ ಇವಿ ನೀತಿ ನಂತರ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಭಾರೀ ಏರಿಕೆ

ಇನ್ನು ಇವಿ ವಾಹನಗಳ ಖರೀದಿಗೆ ಉತ್ತೇಜಿಸಲು ಹೆಚ್ಚಿನ ಸಂಖ್ಯೆಯ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗುತ್ತಿದ್ದು, ಶೀಘ್ರದಲ್ಲೇ 100 ಹೊಸ ಇವಿ ನಿಲ್ದಾಣಗಳಿಗೆ ಚಾಲನೆ ನೀಡುವುದಾಗಿ ದೆಹಲಿ ಸರ್ಕಾರವು ಸ್ಪಷ್ಟಪಡಿಸಿದೆ.

ದೆಹಲಿಯಲ್ಲಿ ಹೊಸ ಇವಿ ನೀತಿ ನಂತರ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಭಾರೀ ಏರಿಕೆ

ಹೊಸ ಇವಿ ನೀತಿ ಅಡಿ ನಿರ್ಮಾಣ ಮಾಡಲಾಗುತ್ತಿರುವ ಹೊಸ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಮಾಹಾನಗರ ಪಾಲಿಕೆಯ ಕಚೇರಿಗಳು, ದೆಹಲಿ ಅಭಿವೃದ್ದಿ ಪ್ರಾಧಿಕಾರ, ದೆಹಲಿ ಸಾರಿಗೆ ನಿಗಮ ಸಂಸ್ಥೆಗಳ ಅಧೀನದಲ್ಲಿರುವ ಕಚೇರಿಗಳ ಆವರಣಗಳಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಚಾರ್ಜಿಂಗ್ ಪ್ರಮಾಣಗಳಿಗೆ ಶೀಘ್ರದಲ್ಲೇ ದರ ಪಟ್ಟಿಯನ್ನು ನಿಗದಿಪಡಿಸಲಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ದೆಹಲಿಯಲ್ಲಿ ಹೊಸ ಇವಿ ನೀತಿ ನಂತರ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಭಾರೀ ಏರಿಕೆ

ಸರ್ಕಾರ ಅಧೀನದಲ್ಲಿ ಜಾರ್ಜ್ ನಿಲ್ದಾಣ ಹೊರತುಪಡಿಸಿ ಖಾಸಗಿ ಕಂಪನಿಗಳು ಕೂಡಾ ಆಯ್ದ ಪೆಟ್ರೋಲ್ ಬಂಕ್‌ಗಳೊಂದಿಗೆ ಜೊತೆಗೂಡಿ ಫಾಸ್ಟ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯುತ್ತಿದ್ದು, ಇದೀಗ ದೆಹಲಿ ಸರ್ಕಾರವೇ ಹೆಚ್ಚಿನ ಸಂಖ್ಯೆಯಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡುತ್ತಿರುವುದು ಇವಿ ವಾಹನಗಳ ಬಳಕೆ ಹೆಚ್ಚಲು ಪ್ರಮುಖ ಕಾರಣವಾಗಲಿದೆ.

Article Published On: Thursday, February 25, 2021, 18:51 [IST]
English summary
Delhi Government Disburses Rs 13.5 Crore As Subsidy For EVs. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+