ವಾಹನಗಳ ಪ್ರವೇಶ ನಿಷೇಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಿಸರ ಸಚಿವ

ದೆಹಲಿಯಲ್ಲಿ ಗಾಳಿಯು ತೀವ್ರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ದೆಹಲಿ ನಗರದೊಳಗೆ ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ಪ್ರವೇಶವನ್ನು ನಿಲ್ಲಿಸಲಾಗಿದೆ. ಆದರೆ ನಿನ್ನೆ ಮಹತ್ವದ ಘೋಷಣೆ ಮಾಡಿರುವ ದೆಹಲಿಯ ಪರಿಸರ ಸಚಿವರಾದ ಗೋಪಾಲ್ ರೈ ರವರು ನವೆಂಬರ್ 27 ರಿಂದ ಎಲೆಕ್ಟ್ರಿಕ್ ಹಾಗೂ ಸಿಎನ್‌ಜಿ ವಾಹನಗಳು ದೆಹಲಿ ನಗರದಲ್ಲಿ ಸಂಚರಿಸಬಹುದು ಎಂದು ಹೇಳಿದ್ದಾರೆ.

ವಾಹನಗಳ ಪ್ರವೇಶ ನಿಷೇಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಿಸರ ಸಚಿವ

ಇದರ ಜೊತೆಗೆ ಡಿಸೆಂಬರ್ 3 ರವರೆಗೆ ದೆಹಲಿಯಲ್ಲಿ ಇತರ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗುವುದು. ದೆಹಲಿ ಸರ್ಕಾರವು ಹೆಚ್ಚು ಉದ್ಯೋಗಿಗಳು ಇರುವ ಸ್ಥಳಕ್ಕೆ ಬಸ್ಸುಗಳನ್ನು ನಿಯೋಜಿಸಲಿದೆ. ದೇಶದ ರಾಜಧಾನಿಯಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ಪ್ರವೇಶವನ್ನು ನಿಲ್ಲಿಸಲಾಗಿದೆ. ಇದರ ಜೊತೆಗೆ ನಿರ್ಮಾಣ ಕಾರ್ಯ ಸೇರಿದಂತೆ ಹಲವು ವಿಷಯಗಳಿಗೆ ತಾತ್ಕಾಲಿಕ ನಿಷೇಧ ವಿಧಿಸಲಾಗಿದೆ.

ವಾಹನಗಳ ಪ್ರವೇಶ ನಿಷೇಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಿಸರ ಸಚಿವ

ಮಕ್ಕಳನ್ನು ಮಾಲಿನ್ಯದಿಂದ ರಕ್ಷಿಸಲು ಮತ್ತೆ ಶಾಲೆಗಳನ್ನು ಮುಚ್ಚಲಾಗಿದ್ದು, ಪರಿಸ್ಥಿತಿ ಸುಧಾರಿಸಿದರೆ ನವೆಂಬರ್ 29 ರಿಂದ ಮತ್ತೆ ಶಾಲೆಗಳನ್ನು ತೆರೆಯಲಾಗುವುದು. ನವೆಂಬರ್ 27 ರಿಂದ ವಾಹನಗಳ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಎಲ್ಲಾ ಸರ್ಕಾರಿ ಕಚೇರಿಗಳ ನೌಕರರು ಮತ್ತೆ ಮನೆಯಿಂದ ಕೆಲಸ ಮಾಡುತ್ತಿದ್ದು, ನವೆಂಬರ್ 29 ರಿಂದ ನೌಕರರನ್ನು ಕಚೇರಿಗೆ ಕರೆಯಲಾಗುವುದು ಎಂದು ವರದಿಯಾಗಿದೆ.

ವಾಹನಗಳ ಪ್ರವೇಶ ನಿಷೇಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಿಸರ ಸಚಿವ

ಈ ಕಚೇರಿಗೆ ಮರಳುವ ನೌಕರರು ಸಾರ್ವಜನಿಕ ಸಾರಿಗೆ ಬಳಸುವಂತೆ ಸಚಿವರು ನೌಕರರಿಗೆ ಮನವಿ ಮಾಡಿದ್ದಾರೆ. ಖಾಸಗಿ ವಾಹನಗಳನ್ನು ಬಳಸುವವರೆಗೆ ಮಾಲಿನ್ಯ ಪ್ರಮಾಣವು ಕಡಿಮೆಯಾಗುವವರೆಗೆ ವಿಶೇಷ ಬಸ್ ಸೇವೆಯನ್ನು ನೀಡಲಾಗುವುದು ಎಂದು ಹೇಳಲಾಗಿದೆ. ಕೆಲವು ದಿನಗಳ ಹಿಂದಷ್ಟೇ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಗಾಳಿಯ ಗುಣಮಟ್ಟವನ್ನು ಸುಧಾರಿಸಲು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು.

ವಾಹನಗಳ ಪ್ರವೇಶ ನಿಷೇಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಿಸರ ಸಚಿವ

ತಿಂಗಳಿಗೊಮ್ಮೆಯಾದರೂ ಜನರು ತಮ್ಮ ಖಾಸಗಿ ವಾಹನಗಳ ಬದಲು ಬಸ್ ಅಥವಾ ಮೆಟ್ರೋದಂತಹ ಸಾರ್ವಜನಿಕ ಸಾರಿಗೆಯನ್ನು ಬಳಸಬೇಕೆಂದು ದೆಹಲಿ ಸರ್ಕಾರ ಮನವಿ ಮಾಡಿತ್ತು. ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಪ್ರತಿಯೊಬ್ಬ ನಾಗರಿಕನೂ ತನ್ನ ಪಾಲಿನ ಜವಾಬ್ದಾರಿಯನ್ನು ನಿಭಾಯಿಸಬೇಕಾಗುತ್ತದೆ ಎಂದು ದೆಹಲಿ ಸರ್ಕಾರ ಹೇಳಿದೆ. ವಾಹನ ಮಾಲಿನ್ಯವನ್ನು ತಡೆಯಲು ದೆಹಲಿ ಪೊಲೀಸರು ವಾಹನ ತಪಾಸಣೆ ನಡೆಸಿ ಕಾಲಮಿತಿ ದಾಟಿದ ಹಳೆ ವಾಹನಗಳ ಪತ್ತೆಗೆ ಮುಂದಾಗಿದ್ದಾರೆ.

ವಾಹನಗಳ ಪ್ರವೇಶ ನಿಷೇಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಿಸರ ಸಚಿವ

ಅಂತಹ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರು 170 ಸ್ಥಳಗಳಲ್ಲಿ ವಿಶೇಷ ತಂಡಗಳನ್ನು ನಿಯೋಜಿಸಿದ್ದಾರೆ. ಈ ತಂಡವು ಹಳೆಯ ಡೀಸೆಲ್ ಹಾಗೂ ಪೆಟ್ರೋಲ್ ವಾಹನಗಳ ಮಾನ್ಯ ಮಾಲಿನ್ಯ ನಿಯಂತ್ರಣ (PUC) ಪ್ರಮಾಣಪತ್ರಗಳನ್ನು ಪರಿಶೀಲಿಸುತ್ತಿದೆ. ಮಾನ್ಯವಾದ ಪಿಯುಸಿ ಪ್ರಮಾಣಪತ್ರವಿಲ್ಲದ ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ. ವಾಯು ಮಾಲಿನ್ಯದ ಸಮಸ್ಯೆಯನ್ನು ನಿಭಾಯಿಸಲು, ಸುಪ್ರೀಂ ಕೋರ್ಟ್ ಈಗಾಗಲೇ ದೆಹಲಿ - ಎನ್‌ಸಿಆರ್‌ ಪ್ರದೇಶದಲ್ಲಿ 15 ವರ್ಷ ಹಳೆಯದಾದ ಪೆಟ್ರೋಲ್ ಹಾಗೂ 10 ವರ್ಷ ಹಳೆಯ ಡೀಸೆಲ್ ವಾಹನಗಳನ್ನು ನಿಷೇಧಿಸಿದೆ.

ವಾಹನಗಳ ಪ್ರವೇಶ ನಿಷೇಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಿಸರ ಸಚಿವ

ಈ ವಾಹನಗಳು ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುವಂತಿಲ್ಲ. ಈ ನಿಯಮ ಉಲ್ಲಂಘಿಸುವ ವಾಹನಗಳ ಜಪ್ತಿ ಮಾಡುವುದರ ಜೊತೆಗೆ ಕಠಿಣ ಕ್ರಮ ಜರುಗಿಸಲಾಗುವುದು. ಇದರಿಂದ ಹಳೆ ವಾಹನ ಮಾಲೀಕರಿಗೆ ವಿವಿಧ ಸಮಸ್ಯೆಗಳಾಗುತ್ತಿವೆ. ಈ ನಿಯಮದಿಂದಾಗಿ ಸಾವಿರಾರು ವಾಹನಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ದೆಹಲಿ ರಾಜ್ಯ ಸರ್ಕಾರವು ಹೊಸ ನಿಯಮವನ್ನು ಜಾರಿಗೆ ತಂದಿದೆ.

ವಾಹನಗಳ ಪ್ರವೇಶ ನಿಷೇಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಿಸರ ಸಚಿವ

ಇದರಿಂದ ಹಳೆ ವಾಹನ ಮಾಲೀಕರಿಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. ಹೊಸ ನಿಯಮಗಳ ಪ್ರಕಾರ, 10 ವರ್ಷ ಹಳೆಯ ಡೀಸೆಲ್ ವಾಹನಗಳು ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಬಹುದು. ಆದರೆ ಇದಕ್ಕೆ ಒಂದು ಷರತ್ತು ವಿಧಿಸಲಾಗಿದೆ. 10 ವರ್ಷ ಮೇಲ್ಪಟ್ಟ ಡೀಸೆಲ್ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಿದರೆ, ಆ ವಾಹನಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಬಹುದು.

ವಾಹನಗಳ ಪ್ರವೇಶ ನಿಷೇಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಿಸರ ಸಚಿವ

ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ನಿರ್ಧಾರವು ಹಳೆಯ ಡೀಸೆಲ್ ವಾಹನಗಳ ಮಾಲೀಕರಿಗೆ ತಮ್ಮ ವಾಹನಗಳ ಬಳಕೆಯನ್ನು ಮುಂದುವರಿಸಲು ಸಹಾಯ ಮಾಡುತ್ತದೆ. ಈ ಕ್ರಮವು ಎಲೆಕ್ಟ್ರಿಕ್ ವಾಹನಗಳ ಮಾರುಕಟ್ಟೆಯನ್ನು ಉತ್ತೇಜಿಸಲು ನೆರವು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಈ ನಿಯಮವು 15 ವರ್ಷ ಹಳೆಯ ಪೆಟ್ರೋಲ್ ವಾಹನಗಳಿಗೆ ಅನ್ವಯಿಸುತ್ತದೆಯೇ ಎಂಬುದು ಖಚಿತವಾಗಿಲ್ಲ.

ವಾಹನಗಳ ಪ್ರವೇಶ ನಿಷೇಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಿಸರ ಸಚಿವ

ಈ ಆದೇಶಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ದೆಹಲಿ ಸರ್ಕಾರದ ಈ ಕ್ರಮವನ್ನು ಬಹುತೇಕ ಎಲ್ಲರೂ ಸ್ವಾಗತಿಸಿದ್ದಾರೆ. ಆದರೆ ಯೋಜನೆಯಲ್ಲಿರುವ ಗೊಂದಲವನ್ನು ದೆಹಲಿ ರಾಜ್ಯ ಸರ್ಕಾರವು ಪರಿಹರಿಸಬೇಕೆಂಬುದು ಎಲ್ಲರ ಆಗ್ರಹವಾಗಿದೆ. ದೆಹಲಿ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಗಂಭೀರ ಪ್ರಯತ್ನಗಳನ್ನು ಮಾಡುತ್ತಿದೆ.

ವಾಹನಗಳ ಪ್ರವೇಶ ನಿಷೇಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಿಸರ ಸಚಿವ

ಇದರ ಜೊತೆಗೆ ಮಾನ್ಯವಾದ ಪಿಯುಸಿ ಪ್ರಮಾಣ ಪತ್ರ ಇಲ್ಲದೆ ವಾಹನ ಚಲಾಯಿಸಿ ಸಿಕ್ಕಿಬಿದ್ದವರಿಗೆ ರೂ. 10,000 ದಂಡ ವಿಧಿಸಲಾಗುತ್ತದೆ. ಇದು ಮಾತ್ರವಲ್ಲದೇ ವಾಹನದ ಪಿಯುಸಿ ಮಾಡಿಸದಿದ್ದರೆ 3 ತಿಂಗಳವರೆಗೆ ಚಾಲನಾ ಪರವಾನಗಿಯನ್ನು ರದ್ದುಗೊಳಿಸಬಹುದು. ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮುಚ್ಚದೆ ಸಾಗಿಸುವ ಟ್ರಕ್‌ಗಳ ವಿರುದ್ಧವೂ ದೆಹಲಿ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ವಾಹನಗಳ ಪ್ರವೇಶ ನಿಷೇಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಿಸರ ಸಚಿವ

ಇದುವರೆಗೂ ಅಂತಹ 873 ವಾಹನಗಳ ವಿರುದ್ಧ ದಂಡ ವಿಧಿಸಲಾಗಿದೆ. ಇದಲ್ಲದೇ ದೆಹಲಿಗೆ ಸೇರದ ವಾಹನಗಳನ್ನು ಹೆದ್ದಾರಿಗಳ ಕಡೆಗೆ ತಿರುಗಿಸಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಇಂತಹ ವಾಹನಗಳಿಗೆ ಪರಿಹಾರ ಸಿಗುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಇತರ ಎಲ್ಲಾ ರಾಜ್ಯಗಳಿಗಿಂತ ಹೆಚ್ಚು ಉತ್ತೇಜನ ನೀಡುತ್ತಿದೆ.

ವಾಹನಗಳ ಪ್ರವೇಶ ನಿಷೇಧದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಿಸರ ಸಚಿವ

ಇವಿ ಚಾರ್ಜಿಂಗ್ ಕೇಂದ್ರಗಳು ಹೆಚ್ಚಿನ ಸಂಖ್ಯೆಯಲ್ಲಿಲ್ಲ ಎಂಬ ಕಾರಣಕ್ಕೆ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ವಾಹನ ಸವಾರರ ಆತಂಕವನ್ನು ದೂರ ಮಾಡಲು ದೆಹಲಿ ಸರ್ಕಾರವು ಮಾಲ್, ಶಾಂಪಿಂಗ್ ಕಾಂಪ್ಲೆಕ್ಸ್ ಸೇರಿದಂತೆ ಹಲವು ಸ್ಥಳಗಳಲ್ಲಿ ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುತ್ತಿದೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Delhi minister gives information about vehicles entry from 27th november details
Story first published: Thursday, November 25, 2021, 12:49 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X