ಎಲೆಕ್ಟ್ರಿಕ್ ವಾಹನಗಳಿಗೆ ಬದಲಾದ ಮಾಲಿನ್ಯ ನಿಯಂತ್ರಣ ಮಂಡಳಿ

ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಬದಲಾದ ಮೊದಲ ಸರ್ಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿ ಪಾತ್ರವಾಗಿದೆ. ದೆಹಲಿ ಎಲೆಕ್ಟ್ರಿಕ್ ವಾಹನ ನೀತಿ 2020 ರ ಪ್ರಕಾರ ದೆಹಲಿ ಸರ್ಕಾರದ ಎಲ್ಲಾ ಇಲಾಖೆಗಳು ಗುತ್ತಿಗೆ ಮೂಲಕ ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗ ಬೇಕಾಗುತ್ತದೆ.

ಎಲೆಕ್ಟ್ರಿಕ್ ವಾಹನಗಳಿಗೆ ಬದಲಾದ ಮಾಲಿನ್ಯ ನಿಯಂತ್ರಣ ಮಂಡಳಿ

ಅದರಂತೆ ಈಗ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿಯು ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗಿದೆ. ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿಯು 29 ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರುಗಳನ್ನು ಗುತ್ತಿಗೆಗೆ ಪಡೆದಿದೆ. ಈ ಗುತ್ತಿಗೆ ಅವಧಿ 5 ವರ್ಷಗಳಾಗಿದೆ. ಈ ಮೂಲಕ ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬದಲಾದ ಮೊದಲ ಸರ್ಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಬದಲಾದ ಮಾಲಿನ್ಯ ನಿಯಂತ್ರಣ ಮಂಡಳಿ

ಶೀಘ್ರದಲ್ಲಿಯೇ ಹೆಚ್ಚುವರಿಯಾಗಿ 5 ಎಲೆಕ್ಟ್ರಿಕ್ ಕಾರುಗಳನ್ನು ಗುತ್ತಿಗೆಗೆ ಪಡೆಯಲಾಗುವುದು ಎಂದು ವರದಿಯಾಗಿದೆ. ಕನ್ವರ್ಜೆನ್ಸ್ ಎನರ್ಜಿ ಸರ್ವಿಸ್ ಲಿಮಿಟೆಡ್ ಈ ಎಲೆಕ್ಟ್ರಿಕ್ ಕಾರುಗಳನ್ನು ಪೂರೈಸಲಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಬದಲಾದ ಮಾಲಿನ್ಯ ನಿಯಂತ್ರಣ ಮಂಡಳಿ

ಈ ಎಲೆಕ್ಟ್ರಿಕ್ ಕಾರುಗಳು ಸೆಪ್ಟೆಂಬರ್ 1 ರಿಂದ ಲಭ್ಯವಿರಲಿವೆ. ಈ ಕ್ರಮವು ಜನರನ್ನು ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗುವಂತೆ ಉತ್ತೇಜನ ನೀಡುತ್ತದೆ ಎಂದು ದೆಹಲಿ ಅಧಿಕಾರಿಗಳು ತಿಳಿಸಿದ್ದಾರೆ.

ಎಲೆಕ್ಟ್ರಿಕ್ ವಾಹನಗಳಿಗೆ ಬದಲಾದ ಮಾಲಿನ್ಯ ನಿಯಂತ್ರಣ ಮಂಡಳಿ

ಪರಿಸರ ಇಲಾಖೆಯು ಸಹ ಶೀಘ್ರದಲ್ಲೇ 20 ರಿಂದ 25 ಎಲೆಕ್ಟ್ರಿಕ್ ಕಾರುಗಳನ್ನು ಗುತ್ತಿಗೆಗೆ ಪಡೆಯಲಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗುವುದರಿಂದ ಪರಿಸರ ಮಾಲಿನ್ಯದ ಸಮಸ್ಯೆಯನ್ನು ನಿಯಂತ್ರಿಸಬಹುದು.

ಎಲೆಕ್ಟ್ರಿಕ್ ವಾಹನಗಳಿಗೆ ಬದಲಾದ ಮಾಲಿನ್ಯ ನಿಯಂತ್ರಣ ಮಂಡಳಿ

ಜೊತೆಗೆ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಬಹುದು. ಈ ಕಾರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ.

ಎಲೆಕ್ಟ್ರಿಕ್ ವಾಹನಗಳಿಗೆ ಬದಲಾದ ಮಾಲಿನ್ಯ ನಿಯಂತ್ರಣ ಮಂಡಳಿ

ಇವುಗಳಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ರಾಜ್ಯ ಸರ್ಕಾರವು ಇತರ ಎಲ್ಲಾ ರಾಜ್ಯಗಳಿಗಿಂತ ಒಂದು ಹೆಜ್ಜೆ ಮುಂದಿದೆ. ದೆಹಲಿ ಸರ್ಕಾರವು ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ಸೇರಿದಂತೆ ವಿವಿಧ ಕೊಡುಗೆಗಳನ್ನು ನೀಡುತ್ತಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಬದಲಾದ ಮಾಲಿನ್ಯ ನಿಯಂತ್ರಣ ಮಂಡಳಿ

ದೆಹಲಿ ಸರ್ಕಾರವು 2024 ರ ವೇಳೆಗೆ ದೆಹಲಿಯಲ್ಲಿ ನೋಂದಾಯಿಸಲಾಗುವ ಒಟ್ಟು ವಾಹನಗಳ ಪೈಕಿ 25% ನಷ್ಟು ಎಲೆಕ್ಟ್ರಿಕ್ ವಾಹನಗಳನ್ನು ನೋಂದಾಯಿಸುವ ಗುರಿಯನ್ನು ಹೊಂದಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಬದಲಾದ ಮಾಲಿನ್ಯ ನಿಯಂತ್ರಣ ಮಂಡಳಿ

ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ದೆಹಲಿಯಾದ್ಯಂತ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ದೆಹಲಿ ಭಾರತದ ಹೆಚ್ಚು ಮಾಲಿನ್ಯ ಪೀಡಿತ ಪ್ರದೇಶಗಳಲ್ಲಿ ಒಂದಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಬದಲಾದ ಮಾಲಿನ್ಯ ನಿಯಂತ್ರಣ ಮಂಡಳಿ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಈ ಸಮಸ್ಯೆಯನ್ನು ಪರಿಹರಿಸಲು ನಿರ್ಧರಿಸಲಾಗಿದೆ. ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿಯು ಗುತ್ತಿಗೆಗೆ ಪಡೆದಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಹೆಚ್ಚು ಮಾರಾಟವಾಗುವ ಎಲೆಕ್ಟ್ರಿಕ್ ಕಾರ್ ಆಗಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಬದಲಾದ ಮಾಲಿನ್ಯ ನಿಯಂತ್ರಣ ಮಂಡಳಿ

ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲಿಯೇ ತನ್ನ ಆಲ್ಟ್ರೋಜ್ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಕಾರಿನ ಎಲೆಕ್ಟ್ರಿಕ್ ಆವೃತ್ತಿಯನ್ನು ದೇಶಿಯ ಮಾರುಕಟ್ಟೆಯಲ್ಲಿಬಿಡುಗಡೆಗೊಳಿಸಲು ಸಿದ್ದತೆ ನಡೆಸಿದೆ.

Most Read Articles

Kannada
English summary
Delhi pollution control committee completely switches to electric vehicles. Read in Kannada.
Story first published: Friday, July 30, 2021, 13:48 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X